ಚಿರತೆ ಪ್ರತ್ಯಕ್ಷ: ಶಾಸಕ-ಅಧಿಕಾರಿಗಳು ದೌಡು
Team Udayavani, Oct 14, 2021, 12:10 PM IST
ಹುಮನಾಬಾದ: ತಾಲೂಕಿನ ಹಣಕುಣಿ ಗ್ರಾಮದ ಹೊರವಲಯದಲ್ಲಿ ಚಿರತೆಗಳು ಪ್ರತ್ಯಕ್ಷವಾದ ಹಿನ್ನೆಲೆ ಬುಧವಾರ ಜಿಲ್ಲಾ ಅರಣ್ಯ ಅಧಿಕಾರಿ ಎಸ್. ಶಿವಸಂಕರ್ ಹಾಗೂ ಸ್ಥಳೀಯ ಶಾಸಕ ರಾಜಶೇಖರ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು.
ಗ್ರಾಮದ ಹೊರವಲಯದ ಕಬ್ಬಿನ ಗದ್ದೆವೊಂದರಲ್ಲಿ ಚಿರತೆ ಹಾಗೂ ಚಿರತೆ ಮರಿ ಪತ್ತೆಯಾಗಿರುವ ಕುರಿತು ಅರಣ್ಯ ಅಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಕೂಡ ಗ್ರಾಮಕ್ಕೆ ಚಿರತೆ ಬಂದಿರುವ ಸುದ್ದಿ ತಿಳಿದು ಆತಂಕದಲ್ಲಿದ್ದಾರೆ. ಹೊಲಗಳ ಕಡೆಗೆ ತೆರಳಲು ರೈತರು ಹೆದರುತ್ತಿದ್ದಾರೆ. ಶೀಘ್ರದಲ್ಲಿಯೇ ಚಿರತೆ ಬಂಧನಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡುವಂತೆ ಶಾಸಕರಿಗೆ ಒತ್ತಾಯಿಸಿದರು.
ಇದನ್ನೂ ಓದಿ: ಅರಸೊತ್ತಿಗೆಯ ನಾಡಹಬ್ಬದಿಂದ ದಸರೆ ವೈಭವದ ಹೆಜ್ಜೆ ಗುರುತುಗಳು
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅರಣ್ಯ ಅಧಿಕಾರಿ, ಗ್ರಾಮಸ್ಥರು ಹಾಗೂ ರೈತರು ಅತಿ ಹೆಚ್ಚಿನ ಜಾಗೃತಿ ವಹಿಸಬೇಕು. ಸಂಜೆ ಹಾಗೂ ಬೆಳಿಗ್ಗೆ ಅವಧಿಯಲ್ಲಿ ಚಿರತೆಗಳು ಜಾಗೃತವಾಗಿರುತ್ತವೆ. ಉಳಿದ ಅವಧಿಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತವೆ. ಗ್ರಾಮದಲ್ಲಿ ಒಬ್ಬರೇ ಓಡಾಡುವುದು ಮಾಡಬೇಡಿ. ಮಕ್ಕಳು, ದನಕರುಗಳನ್ನು ಹೊಲದ ಕಡೆಗೆ ಸದ್ಯಕ್ಕೆ ತರುವುದನ್ನು ತಪ್ಪಿಸಿ. ಚಿರತೆಗಳ ಬಂಧನಕ್ಕೆ ಸಕಲ ಸಿದ್ಧತೆಗಳು ಮಾಡಿಕೊಂಡಿದ್ದೇವೆ. ಅದರ ಚಲನವಲನಗಳ ಬಗ್ಗೆ ಸತತ ನಿಗಾ ವಹಿಸಲಾಗುತ್ತಿದೆ. ಈಗಾಗಲೇ ಬೋನ್ ಕೂಡ ಸಿದ್ಧಪಡಿಸಲಾಗುತ್ತಿದ್ದು, ಆದಷ್ಟು ಬೇಗ ಚಿರತೆ ಬಂಧಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಾ| ಚದ್ರಶೇಖರ ಪಾಟೀಲ, ತಾಲೂಕು ಅರಣ್ಯಾಧಿಕಾರಿ ಬಸವರಾಜ ಡಾಂಗೆ, ತಹಶೀಲ್ದಾರ್ ನಾಗಯ್ನಾ ಹಿರೇಮಠ, ಕಂದಾಯ ಇಲಾಖೆಯ ಶ್ರೀನಾಥ, ಅರಣ್ಯ ಸಿಬ್ಬಂದಿಗಳಾದ ಸಂತೋಷ ನಾಯ್ಕೊಡೆ, ಅಂಬಾದಾಸ ಪಲಾಟಿ, ಗೊಂಡೆರಾವ ಶಾಖಾ, ರವಿರೂಪ ಸಿಂಗ್, ಸಂಜುಕುಮಾರ, ಮಾಳಪ್ಪಾ, ಸಂಗಮೇಶ್ವರ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.