ಅಡುಗೆ ಸಿಬಂದಿ ಸ್ವಚ್ಛತೆಗೆ ಆದ್ಯತೆ ನೀಡಲಿ: ದೀಪಿಕಾ
Team Udayavani, Jan 15, 2022, 1:12 PM IST
ಭಾಲ್ಕಿ: ಅಕ್ಷರ ದಾಸೋಹ ಯೋಜನೆಯ ಅಡುಗೆ ಸಿಬ್ಬಂದಿಯವರು ಸ್ವಚ್ಛತೆಗೆ ಮೊದಲಾದ್ಯತೆ ನೀಡಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ್ ಹೇಳಿದರು.
ಪಟ್ಟಣದ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಜಿಪಂ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಾರ್ಯಾಲಯ ಹಾಗೂ ಅಕ್ಷರ ದಾಸೋಹ ಯೋಜನೆ ತಾ.ಪಂ. ಭಾಲ್ಕಿ ವತಿಯಿಂದ ಅಕ್ಷರ ದಾಸೋಹ ಯೋಜನೆಯ ಅಡುಗೆ ಸಿಬ್ಬಂದಿಯವರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಷರ ದಾಸೋಹ ಯೋಜನೆಯ ಮೂಲ ಉದ್ದೇಶ ಎಲ್ಲ ಮಕ್ಕಳು ಶಾಲೆಗೆ ಹಾಜರಾಗಿ ಅಕ್ಷರ ಕಲಿಯುವುದಾಗಿದೆ. ಹೀಗಾಗಿ ಬಿಸಿಯೂಟದ ಅಡುಗೆ ಸಿಬ್ಬಂದಿಯವರು ಮಕ್ಕಳಿಗೆ ಉತ್ತಮವಾದ ರುಚಿ, ರುಚಿಯಾದ ಅಡುಗೆ ಮಾಡಿ ಹಾಕಿದಲ್ಲಿ ಯಾವುದೇ ಮಗು ಶಾಲೆಯಿಂದ ಹೊರಗುಳಿಯುವುದಿಲ್ಲ. ಪ್ರಸ್ತುತ ಸಾಲಿನಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ನಮ್ಮೆಲ್ಲರನ್ನೂ ಕಾಡುತ್ತಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ಕೊಡುವುದರೊಂದಿಗೆ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು ಎಂದು ಹೇಳಿದರು.
ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸೂರ್ಯಕಾಂತ ಪಾಟೀಲ ಮಾತನಾಡಿ, ಅಕ್ಷರ ದಾಸೋಹ ಯೋಜನೆಯಡಿ ಆಹಾರ ಧಾನ್ಯ ಹಂಚುವಾಗ ನಿರಂತರವಾಗಿ ಗೈರು ಹಾಜರಿದ್ದ ಮಕ್ಕಳಿಗೆ ಶಾಲೆಗೆ ಬರುವಂತೆ ಮಾಡಿ ಆಹಾರ ಧಾನ್ಯ ಹಂಚಬೇಕು ಎಂದು ಸಲಹೆ ನೀಡಿದರು.
ಅಡುಗೆ ಸಿಬ್ಬಂದಿಯವರು ತಮ್ಮ ಗೌರವ ಧನ ಹೆಚ್ಚಿಸಬೇಕು ಎನ್ನುವ ಬೇಡಿಕೆ ಇಟ್ಟರು. ನಂತರ ಆರೋಗ್ಯ ಇಲಾಖೆಯ ಡಾ| ನಂದಿನಿ ಆರ್‌ಬಿಎಸ್‌ಕೆ ಬಿಸಿಯೂಟ ತಯಾರಿಸುವಾಗ ಅನುಸರಿಸಬೇಕಾದ ಆರೋಗ್ಯದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ ಕಾಂಬಳೆ ಬಿಸಿಯೂಟ ಯೋಜನೆಯ ಪ್ರಾಮುಖ್ಯತೆ ಬಗ್ಗೆ ಮಾತನಾಡಿದರು. ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಕಾರ್ಯದರ್ಶಿ ದತ್ತು ಕಾಟಕರ, ಉಪಾಧ್ಯಕ್ಷ ಜಯರಾಜ ದಾಬಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಕಾರ್ಯದರ್ಶಿ ಅಶೋಕ ಕುಂಬಾರ, ಪ್ರೌಢಶಾಲೆ ಮುಖ್ಯಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರಾಜಕುಮಾರ ಜೊಳದಪಕೆ, ವೀರಶೆಟ್ಟಿ ಇಟಗೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.