ಅಪರಾಧ ನಿಯಂತ್ರಣಕ್ಕೆ ಜನರು ಸಹಕರಿಸಲಿ
Team Udayavani, Dec 20, 2021, 1:24 PM IST
ಕಮಲನಗರ: ಪ್ರತಿಯೊಬ್ಬರು ಕಾನೂನು ಅರಿಯುವುದರ ಜತೆಗೆ ಪಾಲನೆಗೆ ಮುಂದಾಗಬೇಕು. ಇದರಲ್ಲಿ ಸಮಾಜದ ಶಾಂತಿ, ನೆಮ್ಮದಿ ಬದುಕು ಅಡಗಿದೆ ಎಂದು ಪಿಎಸ್‌ಐ ನಂದಿನಿ ಎಸ್. ಹೇಳಿದರು.
ತಾಲೂಕಿನ ಬೇಳಕೋಣಿ(ಭೋ) ಗ್ರಾಮದ ಶಿವಾಜಿ ಪ್ರೌಢಶಾಲೆಯಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಕಾನೂನು ಅರಿವು ಹಾಗೂ ಅಪರಾಧ ತಡೆ ಮಾಸಾಚರಣೆ, ಇಆರ್‌ಎಸ್‌ಎಸ್ 112 ತುರ್ತು ಸೇವೆ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರು ಕಾನೂನು ನಿಯಮಗಳನ್ನು ತಿಳಿದುಕೊಂಡಾಗ ಅಪರಾಧ ತಡೆ ಸಾಧ್ಯ. ಕ್ರೈಂ ರೇಟ್ ನಿಯಂತ್ರಿಸಲು ಪೊಲೀಸರೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ನಾವು ವಾಹನಗಳನ್ನು ನಿಯಂತ್ರಿಸಬೇಕೇ ಹೊರತು ವಾಹನಗಳು ನಮ್ಮನ್ನು ನಿಯಂತ್ರಿಸಬಾರದು. ಮಕ್ಕಳಲ್ಲಿ ಹಾಗೂ ನಾಗರಿಕರಲ್ಲಿ ಕಾನೂನುಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಸಮಾಜದಲ್ಲಿ ಅಪರಾಧ ಚಟುವಟಿಕೆ ನಡೆಯುವ ಬಗ್ಗೆ ಸಾರ್ವಜನಿಕರು ಜಾಗೃತಿ ವಹಿಸಿ ಪೊಲೀಸರಿಗೆ ಸಹಕಾರ ನೀಡಬೇಕು ಎಂದರು. ಶಿಕ್ಷಕರು, ಮಕ್ಕಳು, ಗ್ರಾಮದ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.