ಮಹಿಳೆ ಸ್ವಾವಲಂಬಿಯಾಗಲಿ: ರಾಮಚಂದ್ರ
Team Udayavani, Dec 26, 2021, 3:04 PM IST
ಶಹಾಪುರ: ಮಹಿಳೆಯರು ಯಾರ ಮೇಲೂ ಅವಲಂಬಿತರಾಗದೇ ತಮ್ಮ ಸಾಮರ್ಥ್ಯ, ಕೌಶಲ್ಯ, ಜ್ಞಾನ ಬಳಸಿಕೊಂಡು ಸ್ವಾವಲಂಬಿಯಾಗಿ ಬದುಕು ರೂಪಿಸಿಕೊಳ್ಳಬೇಕು ಎಂದು ಕಲಬುರಗಿಯ ಎಸ್.ಜಿ. ಯೋಜನಾಧಿಕಾರಿ ರಾಮಚಂದ್ರ ಹೇಳಿದರು.
ನಗರದ ಶಿವಂ ಶಿಕ್ಷಣ, ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ಸಿಯುಐ ಕೋ-ಆಪರೇಟಿವ್ ಫೀಲ್ಡ್ ಪ್ರಾಜೆಕ್ಟ್ ಫಾರ್ ಎಸ್.ಸಿ. ಎಸ್ಟಿ ಕಲಬುರಗಿ ಆಶ್ರಯದಲ್ಲಿ ನಗರದ ಸಂಸ್ಥೆಯ ಕಚೇರಿಯಲ್ಲಿ ಕೌಶಲ್ಯ ತರಬೇತಿ ಪಡೆದ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಣೆ ಮತ್ತು ಉಚಿತ ಟೇಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಕೌಶಲ್ಯ ತರಬೇತಿ ಪಡೆದು ಸ್ವತಃ ದುಡಿದು ಬದುಕುವ ಶಕ್ತಿ ಬೆಳೆಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಸಂಸ್ಥೆ ಮಹಿಳೆಯರಿಗೆ ವಿವಿಧ ಕೆಲಸ ಕಾರ್ಯಗಳಲ್ಲಿ ಅನುಕೂಲ ಕಲ್ಪಿಸಲಿದೆ. ಟೇಲರಿಂಗ್ ಸೇರಿದಂತೆ ಇತರೆ ವೃತ್ತಿ ಕೌಶಲ್ಯ ಕಲಿಯಬೇಕು. ಅದರಿಂದ ಬದುಕಿಗೆ ಆಶ್ರಯವಾಗಲಿದೆ ಎಂದರು.
ಇದೇ ಸಂದರ್ಭದಲ್ಲಿ ಐಶ್ವರ್ಯ, ಲಕ್ಷ್ಮೀ, ತಾಯಮ್ಮ ಸೇರಿದಂತೆ ಇತರೆ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಈ ವೇಳೆ ನಿವೃತ್ತ ಸಿಡಿಪಿಒ ಟಿ.ಪಿ. ದೊಡ್ಮನಿ, ನಿವೃತ್ತ ಶಿಕ್ಷಕ ಎನ್.ಎಸ್. ಬಿರಾದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.