ಶೈಕ್ಷಣಿಕ ಅಭಿವೃದ್ದಿಗೆ ಕೈಜೋಡಿಸೋಣ: ಹುಸೇನ
Team Udayavani, Sep 25, 2022, 4:01 PM IST
ಭಾಲ್ಕಿ: ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಕರು ಮತ್ತು ಅಧಿಕಾರಿಗಳೆಲ್ಲರೂ ಕೈಜೋಡಿಸಿ, ವಿದ್ಯಾರ್ಥಿಗಳ ಏಳ್ಗೆಗಾಗಿ ಶ್ರಮಿಸೋಣ ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ್ ಹುಸೇನ ಅಭಿಪ್ರಾಯಪಟ್ಟರು.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಶನಿವಾರ ಪ್ರೌಢಶಾಲೆ ಶಿಕ್ಷಕರ ಸಂಘಟನೆಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಶಿಕ್ಷಕರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಶಿಕ್ಷಕರು ಕಾರ್ಯಾಲಯಕ್ಕೆ ಅಲಿಯದೇ ಶೈಕ್ಷಣಿಕ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು. ಕಾರ್ಯಾಲಯ ದಲ್ಲಿಯ ಶಿಕ್ಷಕರ ಎಲ್ಲ ಕೆಲಸಗಳು ವಿಳಂಬ ಮಾಡದೇ ಮಾಡಿಕೊಡಲಾಗುವುದು. ಶಿಕ್ಷಕರು ಮತ್ತು ಅಧಿಕಾರಿಗಳಿಬ್ಬರೂ ವಿದ್ಯಾರ್ಥಿಗಳ ಅಭಿವೃದ್ಧಿಗೋಸ್ಕರ ಕಾರ್ಯ ನಿರ್ವಹಿಸಬೇಕಾಗಿದೆ. ತಾಲೂಕಿನ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸಬೇಕಿದೆ ಎಂದರು.
ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ದತ್ತು ಕಾಟಕರ ಅಧ್ಯಕ್ಷತೆ ವಹಿಸಿ, ಅಧಿಕಾರಿಗಳು ಶಿಕ್ಷಕರ ಎಲ್ಲ ಕೆಲಸಗಳು ವಿಳಂಬ ಮಾಡದೇ ಮಾಡಿಕೊಡಬೇಕು. ಅಂದಾಗ ಮಾತ್ರ ಶಿಕ್ಷಕರು ತಮ್ಮ ಕಚೇರಿಗೆ ಅಲಿಯುವುದು ತಪ್ಪುತ್ತದೆ. ನಮ್ಮ ತಾಲೂಕಿನಲ್ಲಿ ಎಲ್ಲಾ ಶಿಕ್ಷಕರು ಶೈಕ್ಷಣಿಕವಾಗಿ ಉತ್ತಮ ಸೇವೆ ಸಲ್ಲಿಸುತ್ತಿದ್ದೇವೆ. ಇದಕ್ಕೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಹೇಳಿದರು.
ಮುಖ್ಯ ಶಿಕ್ಷಕ ಜಯರಾಜ ದಾಬಶೆಟ್ಟಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಪತ್ರಾಂಕಿತ ವ್ಯವಸ್ಥಾಪಕ ಶಿವಕುಮಾರ ಸನ್ಮಾನ ಸ್ವೀಕರಿಸಿದರು. ಇದೇ ವೇಳೆ ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳಕರ ಮತ್ತು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಲ್ಲಿನಾಥ ಸಜ್ಜನ್ ಅವರನ್ನು ಗೌರವಿಸಲಾಯಿತು. ಪ್ರಮುಖರಾದ ಸೂರ್ಯಕಾಂತ ಸುಂಟೆ, ರಾಜಕುಮಾರ ಜೊಳದಪಕೆ, ಅಶೋಕ ಕುಂಬಾರ, ಪಿ.ಎಸ್. ಬಿರಾದಾರ, ಶಿವಕುಮಾರ ಘಂಟೆ, ಮಾರುತಿ ಸಗರ, ದಿನೇಶ ಥಮಕೆ, ಸಾವಿತ್ರಿಬಾಯಿ ಫುಲೆ, ಶಿಕ್ಷಕಿಯರ ಸಂಘದ ಅಧ್ಯಕ್ಷೆ ಕೀರ್ತಿಲತಾ ಸೊನಾಳೆ, ಪ್ರೌಢಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಪುಸ್ಪಲತಾ ಚಕುರ್ತೆ, ಇಸಿಒ ಸಹದೇವ.ಜಿ, ಜಯರಾಮ ಬಿರಾದಾರ, ಅನಿಲ ಗಾಯಕವಾಡ, ಜಾಲಿಂದರ ಮೇತ್ರೆ, ಶಿವಕುಮಾರ ಮೇತ್ರೆ, ಆನಂದ ಹಳೆಂಬರೆ, ಮಹಮದ್ ಹನೀಫ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.