ಲಾತೂರಲ್ಲಿ ಲಿಂಗಾಯತರ ಶಕ್ತಿ ಪ್ರದರ್ಶನ


Team Udayavani, Sep 4, 2017, 11:41 AM IST

bid-3.jpg

ಲಾತೂರ (ಮಹಾರಾಷ್ಟ್ರ): ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗಾಗಿ ನಡೆಯುತ್ತಿರುವ ಹೋರಾಟ ಇದೀಗ ಹೊರ ರಾಜ್ಯಕ್ಕೂ ವ್ಯಾಪಿಸಿದೆ. ರವಿವಾರ ಮಹಾರಾಷ್ಟ್ರದ ಜಿಲ್ಲಾ ಕೇಂದ್ರ ಲಾತೂರಲ್ಲಿ ಲಿಂಗಾಯತ ಧರ್ಮ ಮಹಾ ಮೋರ್ಚಾ ಮೂಲಕ ಬಸವ ಅನುಯಾಯಿಗಳ ಶಕ್ತಿ ಪ್ರದರ್ಶನ ನಡೆಯಿತು.

ಲಿಂಗಾಯತ ಸಮನ್ವಯ ಸಮಿತಿಯಿಂದ ಅಹ್ಮದಪುರದ ರಾಷ್ಟ್ರೀಯ ಸಂತ ಡಾ| ಶಿವಲಿಂಗ ಶಿವಾಚಾರ್ಯರು ಮತ್ತು ಕೂಡಲಸಂಗಮದ ಶ್ರೀ ಮಾತೆ ಮಹಾದೇವಿ ನೇತೃತ್ವದಲ್ಲಿ ಬೃಹತ್‌ ಪಥ ಸಂಚಲನ ನಡೆಯಿತು. ಲಿಂಗಾಯತ
ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಮಹಾರಾಷ್ಟ್ರ ಸರ್ಕಾರದ ಮೇಲೆ ಒತ್ತಡ ಹಾಕಲಾಯಿತು. 

ಜಿಲ್ಲಾ ಕ್ರೀಡಾಂಗಣದಿಂದ ಹೊರಟ ರ್ಯಾಲಿ ಶಿವಾಜಿ ವೃತ್ತ, ಪಾಚನಂಬರ್‌ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು
ತಲುಪಿ ಮುಕ್ತಾಯಗೊಂಡಿತು. ಬಳಿಕ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರಧಾನಮಂತ್ರಿ ಗಳಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.

ರ್ಯಾಲಿಗೂ ಮುನ್ನ ನೆಹರು ಕ್ರೀಡಾಂಗಣದಲ್ಲಿ ಬಹಿರಂಗ ಸಮಾವೇಶ ಜರುಗಿತು. ವಿವಿಧೆಡೆಯ ಮಠಾಧಿಧೀಶರು, ಗಣ್ಯರು ಪಾಲ್ಗೊಂಡಿದ್ದ ಸಮಾವೇಶಕ್ಕೆ ಮಹಾರಾಷ್ಟ್ರ, ಕರ್ನಾಟಕ ಹಾಗೂ ತೆಲಂಗಾಣದ ಸುಮಾರು ಎಂಭತ್ತು ಸಾವಿರಕ್ಕೂ ಅಧಿಕ ಬಸವ ಅನುಯಾಯಿಗಳು ಸಾಕ್ಷಿಯಾದರು.

ಸ್ವಾತಂತ್ರ್ಯಾ ಪೂರ್ವದಿಂದಲೂ ಜನಗಣತಿ ವರದಿಯಲ್ಲಿ ಲಿಂಗಾಯತ ಸ್ವತಂತ್ರ ಧರ್ಮ ಎಂದು ಉಲ್ಲೇಖೀಸಿದ್ದು
ಕಂಡುಬಂದಿದೆ. ಲಿಂಗಾಯತ ಅವೈದಿಕ ಧರ್ಮವಾಗಿದ್ದು, ಇದರ ಆಚರಣೆ, ಪದ್ಧತಿ, ತಾತ್ವಿಕ ಸಿದ್ಧಾಂತ, ಪರಂಪರೆ
ಹಿಂದೂ ಧರ್ಮಕ್ಕಿಂತ ಭಿನ್ನವಾಗಿದೆ. ಹೀಗಾಗಿ ಲಿಂಗಾಯತ ಒಂದು ಸ್ವತಂತ್ರ ಧರ್ಮ ಎಂಬುದು ಸಿದ್ಧವಾಗುತ್ತದೆ
ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸ್ವತಂತ್ರ ಭಾರತದಲ್ಲಿ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಕಲ್ಪಿಸದೇ ಇರುವುದರಿಂದ ಸಮಾಜಕ್ಕೆ
ಸಾಕಷ್ಟು ಅನ್ಯಾಯವಾಗಿದೆ. ದಶಕಗಳ ಬೇಡಿಕೆಯಾಗಿರುವ ಲಿಂಗಾಯತಕ್ಕೆ ಸಂವಿಧಾನಿಕ ಮಾನ್ಯತೆ ನೀಡಿ, ಅಲ್ಪಸಂಖ್ಯಾತರ ಧಾರ್ಮಿಕ ಪ್ರವರ್ಗದಲ್ಲಿ ಸೇರಿಸುವ ಮೂಲಕ ಲಿಂಗಾಯತರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಮಹಾತ್ಮ ಬಸವೇಶ್ವರ ಆರ್ಥಿಕ ವಿಕಾಸ ಮಹಾಮಂಡಳ ಸ್ಥಾಪಿಸಬೇಕು. 2021ರ ರಾಷ್ಟ್ರೀಯ ಜನಗಣತಿಯ ಪತ್ರದಲ್ಲಿ ಲಿಂಗಾಯತ ಸ್ವತಂತ್ರ ಧರ್ಮದ ಕಾಲಂ ನಮೂದಿಸಬೇಕು. ಕನ್ನಡದಲ್ಲಿರುವ ಬಸವಾದಿ ಶರಣರ ವಚನ ಸಾಹಿತ್ಯವನ್ನು ಮರಾಠಿ ಭಾಷೆಗೆ ತರ್ಜುಮೆ ಮಾಡಬೇಕು. ಈ ಕಾರ್ಯ ಸ್ಥಳೀಯ ಸರ್ಕಾರದಿಂದಲೇ ಆಗಬೇಕು ಎಂದು ಒತ್ತಾಯಿಸಲಾಗಿದೆ. 

ಮಹಾ ಮೋರ್ಚಾದಲ್ಲಿ ಕರ್ನಾಟಕದ ಸಚಿವರಾದ ಎಂ.ಬಿ ಪಾಟೀಲ, ವಿನಯ ಕುಲಕರ್ಣಿ, ಬೆಳಗಾವಿಯ ಡಾ|ಸಿದ್ಧಲಿಂಗ ಮಹಾಸ್ವಾಮಿಗಳು, ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಭಾಲ್ಕಿಯ ಡಾ| ಬಸವಲಿಂಗ ಪಟ್ಟದ್ದೇವರು, ಹುಲಸೂರಿನ ಶ್ರೀ ಶಿವಾನಂದ ಸ್ವಾಮೀಜಿ, ಬೀದರನ ಅಕ್ಕ ಅನ್ನಪೂರ್ಣ ತಾಯಿ, ಅಕ್ಕ ಗಂಗಾಂಬಿಕೆ, ದೆಹಲಿಯ ಶ್ರೀ ಚನ್ನಬಸವಾನಂದ ಸ್ವಾಮೀಜಿ, ಶ್ರೀ ಗುರುಬಸವ ದೇವರು, ಶ್ರೀ ಕೊರಣೇಶ್ವರ ಸ್ವಾಮೀಜಿ, ಶ್ರೀ ಬಸವಪ್ರಭು ಸ್ವಾಮೀಜಿ, ಸಮಿತಿ ಪ್ರಮುಖರಾದ ಮಾಧವರಾವ್‌ ಪಾಟೀಲ, ಅವಿನಾಶ ಭೋಸಿಕರ್‌, ರವಿಶಂಕರ ಕೊರೆ, ಲಲಿತಾ ಪಾಂಡರೆ,
ರಾಜೇಶ ವಿಭೂತಿ ಮತ್ತು ಡಾ| ರಾಜಶೇಖರ ಸೋಲಾಪುರೆ ಮತ್ತಿತರರು ಭಾಗವಹಿಸಿದ್ದರು.

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತ್ರೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

1-shaa

Success ನಿಮ್ಮನ್ನು ಪ್ರತ್ಯೇಕಿಸಲು ಮತ್ತು ವೈಫಲ್ಯಕ್ಕೆ ಕಾರಣವಾಗಬಹುದು: ಶಾರುಖ್ ಖಾನ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

7

Udupi: ನಮ್ಮ ಶೌಚಾಲಯ ನಮ್ಮ ಗೌರವ ತಿಂಗಳ ಆಂದೋಲನಕ್ಕೆ ಚಾಲನೆ

1-wewqewq

Raichur; ರಾತ್ರೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

13

Udupi: 10 ತಿಂಗಳಲ್ಲಿ 228 ಕಳವು ಕೇಸ್‌!

1-shaa

Success ನಿಮ್ಮನ್ನು ಪ್ರತ್ಯೇಕಿಸಲು ಮತ್ತು ವೈಫಲ್ಯಕ್ಕೆ ಕಾರಣವಾಗಬಹುದು: ಶಾರುಖ್ ಖಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.