ಲಿಂಗಾಯತ ಎಂದಿಗೂ ಪ್ರಸ್ತುತ


Team Udayavani, Aug 26, 2017, 6:00 PM IST

bidar 1.jpg

ಬೀದರ: ಲಿಂಗಾಯತ ಧರ್ಮದಲ್ಲಿ ಮೇಲು-ಕೀಳಿಲ್ಲ, ಬಡವ-ಬಲ್ಲಿದ ಎಂಬ ಭೇದವಿಲ್ಲ, ಉತ್ಛ- ನೀಚವೆಂಬ ತಾರತಮ್ಯವಿಲ್ಲ. ಇಂಥ ಲಿಂಗಾಯತ ಧರ್ಮ ಎಂದೆಂದಿಗೂ ಪ್ರಸ್ತುತ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಎಚ್‌. ಬಸವರಾಜ ಕರೆ ನೀಡಿದರು. ನಗರದ ಬಸವ ಕೇಂದ್ರದಲ್ಲಿ ಶ್ರಾವಣ ಮಾಸದ ನಿಮಿತ್ತ ಹಮ್ಮಿಕೊಂಡಿದ್ದ “ಶರಣತತ್ವ ದರ್ಶನ’ ಪ್ರವಚನ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣನವರ ಕಲ್ಯಾಣ ರಾಜ್ಯದ ಕಲ್ಪನೆ ಸಾಕಾರಕ್ಕೆ ಬಸವ ಭಕ್ತರೆಲ್ಲರೂ ಕಾಯಕ ಜೀವಿಗಳಾಗಬೇಕು ಎಂದರು. ಶರಣೆ ಸತ್ಯಕ್ಕಳ ಕಾಯಕವನ್ನು ಇಂದು ನಾವೆಲ್ಲರೂ ಅವಲೋಕಿಸಬೇಕು. ಶರಣರ ಕಾಯಕ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಆರ್ಥಿಕವಾಗಿ ಸದೃಢರಾಗಿ ಆಲಸ್ಯ ಹೊಡೆದೋಡಿಸಬಹುದಾಗಿದೆ. ಕಾಯಕ ಮಾಡಿದರೆ ಸಾಲದು, ದಾಸೋಹ ಕೂಡ ಮಾಡಲೇಬೇಕು. ಸಂಗ್ರಹ ಸಂಸ್ಕೃತಿಗೆ ತಿಲಾಂಜಲಿ ನೀಡಿ ಶ್ರಮ ಸಂಸ್ಕೃತಿಗೆ ಉತ್ತೇಜನ ನೀಡಿದ ಶರಣರು ಇಂದಿಗೂ ನಮಗೆಲ್ಲಗೆ ಆದರ್ಶ ಪ್ರಾಯರಾಗಿದ್ದಾರೆ ಎಂದರು.ಬಸವ ಕೇಂದ್ರದ ಅಧ್ಯಕ್ಷ ಶರಣಪ್ಪ ಮಿಠಾರೆ ಮಾತನಾಡಿ, ಇಂದು ಸೊಪ್ಪು, ಉಪ್ಪು ಬಿಟ್ಟವರಿದ್ದಾರೆ. ಆದರೆ ತಪ್ಪು ಬಿಟ್ಟವರಾರೂ ಇಲ್ಲ. ವೇಷ-ಭಾಷೆ ಬಿಟ್ಟವರಿದ್ದಾರೆ, ಆದರೆ
ಆಶೆ ಬಿಟ್ಟವರಾರೂ ಕಾಣುತ್ತಿಲ್ಲ. ಇದಕ್ಕೆಲ್ಲ ಮಿಗಿಲಾಗಿ ಶರಣರು ಬದುಕಿ ಬಾಳಿದ್ದಾರೆ. ಶರಣರ ತತ್ವ ಅವಲೋಕಿಸಿ ನಡೆದರೆ ಸುಂದರ ಜೀವನ ನಡೆಸಲು ಸಾಧ್ಯ ಎಂದು ಹೇಳಿದರು. ಹುಲಸೂರಿನ ಡಾ| ಶಿವಾನಂದ ಮಹಾಸ್ವಾಮಿಗಳು ಸನ್ಮಾನ ಸ್ವೀಕರಿಸಿ ಮಾತನಾಡಿ, ಲಿಂಗ, ವಿಭೂತಿ, ರುದ್ರಾಕ್ಷಿ ಇವುಗಳು ಧಾರ್ಮಿಕ ಚಿಹ್ನೆಗಳಾದರೂ ವೈಜ್ಞಾನಿಕ ತಳಹದಿಮೇಲೆ ಬಸವಣ್ಣನವರು ಅವುಗಳನ್ನು ಕೊಡಮಾಡಿದ್ದಾರೆ. ತಾವು ಕಾಕು-ಪೋಕು ದೇವರುಗಳ ಪೂಜೆ ಮಾಡಿ ಕೈ ಸುಟ್ಟುಕೊಳ್ಳದೇ ಪ್ರತಿಯೊಬ್ಬರು ಇಷ್ಟಲಿಂಗಧಾರಿಗಳಾಗಿ ಶಾಂತಿ ಸಮಧಾನದ ಜೀವನ ನಡೆಸಬೇಕು ಎಂದು ಹೇಳಿದರು. ಬಸವ ಮುಕ್ತಿ ಮಂದಿರದ ಶ್ರೀ ಶಿವಯೋಗೇಶ್ವರ ಸ್ವಾಮೀಜಿ ಮಾತನಾಡಿ, ನಮಗೆ ಎರಡು ಹಸಿವುಗಳು ಇವೆ. ಒಂದು ಹೊಟ್ಟೆ ಹಸಿವು ಇನ್ನೊಂದು ಜ್ಞಾನದ ಹಸಿವು. ಹೊಟ್ಟೆ ಹಸಿವು ಕ್ಷಣಮಾತ್ರ ಆದರೆ ಜ್ಞಾನದ ಹಸಿವು ನಿವಾರಿಸಿಕೊಳ್ಳಲು ಪ್ರವಚನ, ಶರಣ ಚಿಂತನೆ ಇಂದು ಅನಿವಾರ್ಯಎಂದರು. ಇದೇ ವೇಳೆ ಡಾ| ಶಿವಾನಂದ ಮಹಾಸ್ವಾಮಿಗಳು, ಡಾ| ಜಯದೇವಿ ಗಾಯಕವಾಡ ಮತ್ತು ಮಾತೆ ಸತ್ಯಕ್ಕ ಅವರನ್ನು ಬಸವಕೇಂದ್ರದಿಂದ ಗೌರವಿಸಲಾಯಿತು. ಲಿಂ| ಚಂದ್ರಪ್ಪ ಜಾಬಾ, ನಗರ ಸಭೆ ಮಾಜಿ ಸದಸ್ಯೆ ಶ್ರೀದೇವಿ ಕರಂಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಸಾಪ ಅಧ್ಯಕ್ಷ ಎಂ.ಎಸ್‌. ಮನೋಹರ, ನಿರ್ಮಲಾ ಯದಲಾಪುರೆ, ಚಂದ್ರಕಲಾ ಸ್ವಾಮಿ, ರುಕ್ಮಿಣಿ ಸೂರ್ಯಕಾಂತ ಕೋಟೆ, ಚನ್ನಬಸವ ಹೊಡೆ ಮತ್ತಿತರರು ಇದ್ದರು. ಸುರೇಶ ಚನ್ನಶೆಟ್ಟಿ ಸ್ವಾಗತಿಸಿದರು. ಡಾ| ಬಸವರಾಜ ಬಲ್ಲೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಶಂಕರ ಟೋಕರೆ ನಿರೂಪಿಸಿದರು. ಗಣೇಶ ಶೀಲವಂತ ವಂದಿಸಿದರು.

ಟಾಪ್ ನ್ಯೂಸ್

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Suilla

Bantwala: ಬೋಳಂಗಡಿ; ಅಡಿಕೆ ಕೀಳುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಸಾವು

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

ud

Puttur: ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

byndoor

Siddapura: ಲಾರಿ ಚಾಲನೆಯಲ್ಲಿಯೇ ಹೃದಯಾಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.