ಸಾಹಿತ್ಯ ಬದುಕಿನ ಬಹುದೊಡ್ಡ ಮಾರ್ಗದರ್ಶಿ: ಪ್ರೊ| ಶಶಿಕಲಾ
Team Udayavani, Aug 19, 2017, 1:02 PM IST
ಬೀದರ: ತನ್ನನ್ನು ತಾನು ಅರಿತು, ತನ್ನನ್ನು ಹಾಗೂ ಸಮಾಜವನ್ನು ಗೌರವಿಸುವ ಮೌಲ್ಯವನ್ನು ಸಾಹಿತ್ಯ ಕಲಿಸುತ್ತದೆ. ಬದುಕಿನ ಪರೀಕ್ಷೆಯಲ್ಲಿ ಪಾಸಾಗಲು ನಮಗೆ ಸಾಹಿತ್ಯ ದಾರಿದೀಪವಾಗಿದೆ ಎಂದು ಬೆಂಗಳೂರಿನ ಹಿರಿಯ ಸಾಹಿತಿ ಪ್ರೊ|ಶಶಿಕಲಾ ವೀರಯ್ನಾಸ್ವಾಮಿ ಹೇಳಿದರು. ನಗರದ ಸಿದ್ಧಾರ್ಥ ಮಹಾವಿದ್ಯಾಲಯದಲ್ಲಿ ಕರುನಾಡು ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಯೋಜಿಸಿದ್ದ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆತ್ಮಸೌಂದರ್ಯವೇ ನಿಜವಾದ ಸೌಂದರ್ಯವಾಗಿದೆ. ಆ ಮೂಲಕ ಸಾಹಿತ್ಯ ಬದುಕಿನ ಬಹುದೊಡ್ಡ ಮಾರ್ಗದರ್ಶಿಯಾಗಿ ನಮ್ಮ ಉತ್ತಮ ಬದುಕಿಗೆ ಪೂರಕವಾಗಿದೆ ಎಂದು ಹೇಳಿದರು. ಕಾಲೇಜು ಪ್ರಾಚಾರ್ಯ ಪ್ರೊ| ಬಿ.ಕೆ.ಮಠಪತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಗೀತ, ಸಾಹಿತ್ಯ, ಇನ್ನಿತರ ಲಲಿತ ಕಲೆಗಳು ಮಾನವರಲ್ಲಿ ಉನ್ನತ ಮೌಲ್ಯಗಳನ್ನು ಬಿತ್ತುತ್ತವೆ. ಸಾಹಿತ್ಯದ ಓದು ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುತ್ತದೆ. ವಿದ್ಯಾರ್ಥಿ
ಜೀವನದಲ್ಲಿಯೇ ಸಾಹಿತ್ಯದ ಓದಿನ ಗೀಳು ಬೆಳೆಸಿಕೊಳ್ಳಬೇಕು ಎಂದರು. ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯ ಪ್ರೊ| ಎಸ್.ವಿ. ಕಲ್ಮಠ ಸನ್ಮಾನ ಸ್ವೀಕರಿಸಿ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಸೂಕ್ತ ವೇದಿಕೆ ಸಿಗದಿರುವುದರಿಂದ ಪ್ರತಿಭೆಗಳು ಬೆಳಕಿಗೆ ಬಾರದಂತಾಗಿವೆ. ಸರ್ಕಾರದ ಅಕಾಡೆಮಿಗಳ ಮೂಲಕ ಜಿಲ್ಲೆಗೆ ಉತ್ತಮ ಕಾರ್ಯಕ್ರಮಗಳನ್ನು ತಂದು ಪ್ರತಿಭಾವಂತರಿಗೆ ಅವಕಾಶ ದೊರಕಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ಜಾನಪದ ಅಕಾಡೆಮಿ ಸದಸ್ಯ
ವಿಜಯಕುಮಾರ ಸೋನಾರೆ ಮಾತನಾಡಿ, ಜಿಲ್ಲೆಯಲ್ಲಿ ಇರುವ ಅಜ್ಞಾತ ಕಲಾವಿದರಿಗೆ ಜಾನಪದ ಅಕಾಡೆಮಿ ಮೂಲಕ ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿ ಕೊಡಲು ಪ್ರಯತ್ನಿಸುತ್ತೇನೆ. ಅಳಿವಿನ ಅಂಚಿನಲ್ಲಿರುವ ಜಾನಪದ ಕಲೆಗಳನ್ನು ಸಂರಕ್ಷಿಸಿ ಬೆಳೆಸಲು ಶ್ರಮಿಸುವೆ ಎಂದು ಹೇಳಿದರು. ನಿವೃತ್ತ ಉಪನ್ಯಾಸಕ ಪ್ರೊ|ಉಮಾಕಾಂತ ಮೀಸೆ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು. ಕರುನಾಡು ವೇದಿಕೆಯ ಗೌರವಾಧ್ಯಕ್ಷ ಸಂಜೀವಕುಮಾರ ಅತಿವಾಳೆ ವೇದಿಕೆಯಲ್ಲಿದ್ದರು. ಭಾರತಿ ವಸ್ತ್ರದ, ಶಂಭುಲಿಂಗ ವಾಲೊªಡ್ಡಿ, ವಿ.ಎಂ. ಡಾಕುಳಗಿ, ಎಂ.ಪಿ. ಮುಧಾಳೆ, ಸುಬ್ಬಣ್ಣಾ ಕರಕನಳ್ಳಿ, ಸುಲೋಚನಾ ಬಿರಾದಾರ, ಎಸ್. ಪ್ರಭು, ರಾಮರೆಡ್ಡಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದರು. ಗಿರೀಶ ಕುಲಕರ್ಣಿ ಸ್ವಾಗತಿ ಸಿದರು. ಶಾಮರಾವ್ ನೆಲವಾಡೆ ನಿರೂಪಿಸಿದರು. ಏಕನಾಥ ಸುಣಗಾರ ವಂದಿಸಿದರು. ನಾಡಿನ ಹೆಸರಾಂತ ರಂಗಕರ್ಮಿ ಏಣಗಿ ಬಾಳಪ್ಪನವರು ನಿಧನರಾದ ಹಿನ್ನೆಲೆಯಲ್ಲಿ ಸಭೆಯಲ್ಲಿ ಮೌನ ಆಚರಿಸಿ ಅಗಲಿದ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.