ಬೀದರ-ಯಾದಗಿರಿಯಲ್ಲಿ ಲಾಕ್‌ಡೌನ್ ತೆರವು
Team Udayavani, Jul 22, 2020, 9:36 AM IST
ಬೀದರ: ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಗಡಿನಾಡು ಬೀದರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಜಾರಿಗೊಳಿಸಿದ್ದ ಲಾಕ್‌ಡೌನ್ ಜು. 22ರ ಬೆಳಗ್ಗೆ 5 ಗಂಟೆಗೆ ತೆರವಾಗಲಿದೆ.
ಎರಡೂ ಜಿಲ್ಲೆಗಳಲ್ಲಿ ಜು. 15ರಿಂದ 22ರವರೆಗೆ ಲಾಕ್‌ಡೌನ್ ಜಾರಿಗೊಳಿಸಲಾಗಿತ್ತು. ಇನ್ನೂ ಒಂದು ವಾರ ಲಾಕ್‌ಡೌನ್ ವಿಸ್ತರಿಸಬೇಕೆಂಬ ಅಭಿಪ್ರಾಯ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿತ್ತು. ಆದರೆ, ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್ ಪರಿಹಾರವಲ್ಲವಾದ್ದರಿಂದ ಅದನ್ನು ವಿಸ್ತರಿಸಲಾಗಿಲ್ಲ ಎಂದು ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ. ಮುಂದೆಯೂ ಸಹ ಯಾರೂ ಅನಾವಶ್ಯಕವಾಗಿ ಹೊರಗಡೆ ತಿರುಗಾಡಬಾರದು. ಸಾರ್ವಜನಿಕ ಸ್ಥಳಗಳಲ್ಲಿ ತಪ್ಪದೇ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ವಯಸ್ಸಾದವರು ಹಾಗೂ ಮಕ್ಕಳು ಸಾಧ್ಯವಾದಷ್ಟು ಮನೆಯಲ್ಲಿಯೇ ಇರುವುದು ಸುರಕ್ಷಿತ ಎಂದಿರುವ ಸಚಿವರು, ಕೊರೊನಾ ನಿಯಂತ್ರಿಸಲು ಸರ್ಕಾರವು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ಇದರಲ್ಲಿ ಸಾರ್ವಜನಿಕರ ಪಾತ್ರ ಮಹತ್ವದ್ದಾಗಿದೆ. ಶ್ರಾವಣ ಸೇರಿದಂತೆ ವಿವಿಧ ಹಬ್ಬಗಳನ್ನು ಜನ ತಮ್ಮ ತಮ್ಮ ಮನೆಗಳಲ್ಲಿಯೇ ಆಚರಿಸಬೇಕು ಎಂದು ಮನವಿ ಮಾಡಿದ್ದಾರೆ.
ಬೀದರ ಜಿಲ್ಲೆಯಿಂದ ಸಾರಿಗೆ ಸಂಚಾರವೂ ಎಂದಿನಂತೆ ಇರಲಿದ್ದು, ಸದ್ಯ ಕಲಬುರಗಿಗೆ ಮಾತ್ರ ಅಂತರ ಜಿಲ್ಲಾ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ತೆಲಂಗಾಣಾ ಮತ್ತು ಮಹಾರಾಷ್ಟ್ರಕ್ಕೆ ಬಸ್ ಸಂಚಾರ ನಿಷೇಧ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್!
Robbery: ಬೀದರ್ ದರೋಡೆ ಬಿಹಾರಿ ಗ್ಯಾಂಗ್ ಕೃತ್ಯ: ಪೊಲೀಸರು
Air Balloon: ಹೈದರಾಬಾದ್‌ನಲ್ಲಿ ಹಾರಿಸಿದ ‘ಏರ್ ಬಲೂನ್’ ಹುಮನಾಬಾದ್ ನಲ್ಲಿ ಬಿತ್ತು…
ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಸರಕಾರದಿಂದ ಅಸಹಕಾರ: ಎಚ್.ಡಿ.ಕುಮಾರಸ್ವಾಮಿ
Bidar ದರೋಡೆ ಕೇಸ್: ಆರೋಪಿಗಳ ಗುರುತು ಪತ್ತೆ, ಶೀಘ್ರ ಬಂಧನ: ಎಡಿಜಿಪಿ ಹರಿಶೇಖರನ್