ಹುಮನಾಬಾದ: ಬೆಳ್ಳಂ ಬೆಳಿಗ್ಗೆ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Team Udayavani, Sep 30, 2022, 8:07 AM IST
ಹುಮನಾಬಾದ: ಬೀದರ ಜಿಲ್ಲೆಯ ಹುಮನಾಬಾದ ಪಟ್ಟಣದ ಹೊರವಲಯದ ಆರ್.ಟಿ.ಓ. ಕಚೇರಿ ಮೇಲೆ ಸೆ.30ರ ಶುಕ್ರವಾರ ಬೆಳ್ಳಂ ಬೆಳಿಗ್ಗೆ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ.
ಚೆಕ್ ಪೋಸ್ಟ್ ನಲ್ಲಿ ವಾಹನಗಳಿಂದ ಹಣ ವಸೂಲಿ ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 65ರ ಮೋಳಕೆರಾ ಗ್ರಾಮದ ಹತ್ತಿರದ ಚೆಕ್ ಪೋಸ್ಟ್ ನಲ್ಲಿ ದಾಳಿ ನಡೆದಿದೆ.
ವಾಹನಗಳಿಂದ ಸಂಗ್ರಹಿಸುವ ತೆರಿಗೆ ಹಣಕ್ಕೂ ಕಚೇರಿಯಲ್ಲಿ ಸಂಗ್ರಹವಾದ ಹಣಕ್ಕೂ ವ್ಯತ್ಯಾಸ ಇರುವುದು ಕಂಡು ಬಂದಿದೆ ಎನ್ನಲಾಗಿದೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚಿನ ಹಣ ಪತ್ತೆಯಾಗಿದೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಪರಿಶೀಲನೆ ನಂತರ ಖಚಿತ ಪಡಿಸುವುದಾಗಿ ತಿಳಿಸಿದ್ದಾರೆ.
ಬೀದರ್-ಕಲ್ಬುರ್ಗಿ ಎಸ್ಪಿ ಪಿ.ಕರ್ನೂಲ್ ನೇತೃತ್ವದ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದ್ದು, ಕಲಬುರಗಿ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡಪಾಟೀಲ ಪಾಟೀಲ, ಬೀದರ ಡಿವೈಎಸ್ಪಿ ಎನ್.ಎಂ ಓಲೇಕರ್ ಸೇರಿದಂತೆ ಸುಮಾರ 30ಕ್ಕೂ ಅಧಿಕ ಅಧಿಕಾರಿಗಳು ದಾಳಿಯಲ್ಲಿ ಇರುವ ಬಗ್ಗೆ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.