ಬೀದರ್ ನಲ್ಲೂ ಲೋಕಾಯುಕ್ತ ಬೇಟೆ: ಏಕಕಾಲಕ್ಕೆ ಆರು ಕಡೆ ದಾಳಿ
Team Udayavani, Apr 24, 2023, 11:23 AM IST
ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಸೋಮವಾರ ಬೆಳಂಬೆಳ್ಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಬೀದರ ಸಣ್ಣ ನೀರಾವರಿ ಇಲಾಖೆ ಕಾರ್ಯ ನಿರ್ವಾಹಕ ಅಭಿಯಂತರ ಸುರೇಶ ಮೇದಾ ಮತ್ತು ಬಸವಕಲ್ಯಾಣ ತಾಲೂಕಿನ ಮುಡುಬಿ ಉಪ ತಹಶಿಲ್ದಾರ ವಿಜಯಕುಮಾರ್ ಸ್ವಾಮಿ ಲೋಕಾಯುಕ್ತ ದಾಳಿಗೆ ಒಳಗಾದ ಅಧಿಕಾರಿಗಳು. ಅಧಿಕಾರಿಗಳ ಮನೆ ಮತ್ತು ಕಚೇರಿ ಸೇರಿ ಜಿಲ್ಲೆಯಾದ್ಯಂತ 6 ಕಡೆ ಏಕಕಾಲಕ್ಕೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಸುರೇಶ್ ಮೇದಾ ಅವರ ಬೀದರ್ ನ ಗುರುನಗರದ ನಿವಾಸ ಹಾಗೂ ನೌಬಾದ್ ನಲ್ಲಿರುವ ಕಚೇರಿ ಮೇಲೆ ಹಾಗೂ ಬೀದರ್ ನ ಆನಂದ ನಗರ, ಬಸವಕಲ್ಯಾಣದ ನಿವಾಸ, ಮುಡಬಿ ಪಟ್ಟಣದ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ಲೋಕಾಯುಕ್ತ ಎಸ್.ಪಿ ಎ.ಆರ್ ಕರ್ಲೂನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎನ್. ಎಂ ಓಲೇಕಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.