ಬ್ರಿಮ್ಸ್ ಆಸ್ಪತ್ರೆಗೆ ಮೇಜರ್ ಸರ್ಜರಿ
Team Udayavani, Aug 14, 2018, 10:53 AM IST
ಬೀದರ: ನಗರದ ಬ್ರಿಮ್ಸ್ ಬೋಧನಾ ಆಸ್ಪತ್ರೆಗೆ ಮೇಜರ್ ಸರ್ಜರಿ ಮಾಡಬೇಕಾಗಿದೆ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಿ.ಕೆ. ಶಿವಕುಮಾರ ತಿಳಿಸಿದರು.
ಬ್ರಿಮ್ಸ್ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಬೇಕಾದಷ್ಟು ಬದಲಾವಣೆ ಮಾಡಬೇಕಾಗಿದೆ. ಇಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಗೊತ್ತಾಗಿದೆ. ಅಲ್ಲದೇ ಈಗಾಗಲೇ ಇಲಾಖೆ ಕಾರ್ಯದರ್ಶಿಗಳಿಂದ ವರದಿ ನೀಡುವಂತೆ ಕೂಡ ತಿಳಿಸಿದ್ದೇನೆ. ಇಲ್ಲಿನ ವೈದ್ಯಕೀಯ ಕಾಲೇಜು ಉತ್ತಮವಾಗಿ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಬ್ರಿಮ್ಸ್ ವಿರುದ್ಧ ಅವ್ಯವಹಾರದ ಆರೋಪ ಹಾಗೂ ಎಸಿಬಿ ಪ್ರಕರಣ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಕರಣ ದಾಖಲಾಗಿರುವ ಕುರಿತು ಮಾಹಿತಿ ಇಲ್ಲ. ಭ್ರಷ್ಟಾಚಾರ ನಡೆದಿದ್ದರೆ ಅಧಿಕಾರಿಗಳು ನೋಡಿಕೊಳ್ಳುತ್ತಾರೆ.
ನಾನು ಇಲ್ಲಿನ ಭ್ರಷ್ಟಾಚಾರದ ವಿಷಯ ಪರಿಶೀಲಿಸಲು ಬಂದಿಲ್ಲ. ಬದಲಾಗಿ ಇಲ್ಲಿನ ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಪರಿಶೀಲನೆಗೆ ಬಂದಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.