ಆಸ್ಪತ್ರೆಗೆ ಸದಭಿಪ್ರಾಯ ಮೂಡಿಸಿ
Team Udayavani, Jul 23, 2018, 12:32 PM IST
ಬೀದರ: ಜಿಲ್ಲಾ ಆಸ್ಪತ್ರೆಯ ಬಗ್ಗೆ ಸಾರ್ವಜನಿಕರಲ್ಲಿ ಒಳ್ಳೆಯ ಅಭಿಪ್ರಾಯ ಬರುವ ರೀತಿಯಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ ಆಸ್ಪತ್ರೆಯ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಬ್ರಿಮ್ಸ್ ಆಸ್ಪತ್ರೆಗೆ ಭೇಟಿನೀಡಿ ಪರಿಶೀಲನೆ ನಡೆಸಿ ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿದ ಅವರು, ಯಾರೋ ಒಬ್ಬ ವೈದ್ಯರು, ಎಲ್ಲೋ ಒಂದು ಕಡೆ ಕರ್ತವ್ಯದಲ್ಲಿ ವ್ಯತ್ಯಾಸವಾಗಿದ್ದು, ಅದು ಮಾಧ್ಯಮದಲ್ಲಿ ವರದಿಯಾಗಿ, ಇಡೀ ಆಸ್ಪತ್ರೆಯೇ ಅಸ್ತವ್ಯಸ್ತವಾಗಿದೆ ಎಂದು ಚರ್ಚೆಯ ವಸ್ತುವಾಗಲು ಅಧಿಕಾರಿಗಳು ಬಿಡಬಾರದು.
ಯಾರದೋ ದ್ವೇಷಕ್ಕೆ ಆಸ್ಪತ್ರೆಯ ಹಿತ ಬಲಿಕೊಡಬಾರದು. ಆಸ್ಪತ್ರೆಯ ಬಗ್ಗೆ ಜನರಲ್ಲಿ ಸದಭಿಪ್ರಾಯ ಮೂಡುವ ನಿಟ್ಟಿನಲ್ಲಿ
15 ದಿನಗಳೊಳಗೆ ಬದಲಾವಣೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಕೆಲವು ವೈದ್ಯರು ಮತ್ತು ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಹಾಜರಾಗುವುದಿಲ್ಲ. ಹಾಜರಾದರೂ ನಿಗದಿಪಡಿಸಿದ ಸ್ಥಳದಲ್ಲಿ
ಕುಳಿತು ಕೆಲಸ ನಿರ್ವಹಿಸುವುದಿಲ್ಲ ಎನ್ನುವ ದೂರುಗಳಿಗೆ ಕೊನೆಯಾಗಬೇಕು. ರೋಗಿಗಳಿಗೆ ತಕ್ಷಣ ಸ್ಪಂದಿಸಬೇಕು.
ರಕ್ತ ಭಂಡಾರ ಸರಿಯಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ವೈದ್ಯರ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯ ಹೊರಹೊಮ್ಮಬೇಕು. ಏನೇ ಸಮಸ್ಯೆ ಇದ್ದರೂ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು. ಆಸ್ಪತ್ರೆಗೆ ಸರ್ಕಾರ ಸಾಕಷ್ಟು ಹಣ ಖರ್ಚು ಮಾಡುತ್ತಿದ್ದು, ಅದರ ಸೌಲಭ್ಯಗಳು ಜನತೆಗೆ ತಲುಪಬೇಕು. ಸಾಕಷ್ಟು ಪ್ರಮಾಣದಲ್ಲಿ ಔಷಧಿ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಸಿದರು. ಆಸ್ಪತ್ರೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಇದು ನಮ್ಮ ಸಂಸ್ಥೆ ಎನ್ನುವ ಅಭಿಮಾನ ಹೊಂದಬೇಕು ಎಂದು ಸಲಹೆ ನೀಡಿದರು.
ಕಟ್ಟಡ ದೊಡ್ಡದಿದ್ದು, ಅಗತ್ಯಕ್ಕೆ ತಕ್ಕಂತೆ ಕಾರ್ಯ ಸೌಕರ್ಯಗಳ ಕೊರತೆಯಾಗಿದೆ. ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯ ಕೊರತೆಯಿದೆ. ಅಗತ್ಯಕ್ಕನುಸಾರ ಮಾನವ ಸಂಪನ್ಮೂಲವಿದ್ದಲ್ಲಿ ತೊಂದರೆಗಳು ತಪ್ಪಲಿವೆ ಎಂದು ಎಂ.ದೇಶಮುಖ, ವಿಜಯಕುಮಾರ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತರಾದ ಮನೋಹರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಲಭೀಮ ಕಾಂಬಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ.ಎ.ಜಬ್ಟಾರ ಸೇರಿದಂತೆ ಇತರೆ ವೈದ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.