![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 15, 2020, 4:34 PM IST
ಬೀದರ: ಕೋವಿಡ್-19 ವಿರುದ್ಧದ ಹೋರಾಟದಲ್ಲಿ ನಗರದ ವಾಲಿಶ್ರೀ ಆಸ್ಪತ್ರೆ ಜಿಲ್ಲಾ ಆಡಳಿತದೊಂದಿಗೆ ಕೈ ಜೋಡಿಸಿರುವುದು ಮಾದರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ವಾಲಿಶ್ರೀ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದ ಸಚಿವರು, ಆಸ್ಪತ್ರೆಯಲ್ಲಿನ ವ್ಯವಸ್ಥೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಕೋವಿಡ್ ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆಗಳು ಸಹಕರಿಸಬೇಕು ಎಂದು ಮನವಿ ಮಾಡಿದ್ದೆ. ಇದಕ್ಕೆ ಸ್ಪಂದಿಸಿದ ವಾಲಿಶ್ರೀ ಆಸ್ಪತ್ರೆ ಚೇರ್ ಮನ್ ಡಾ| ರಜನೀಶ ವಾಲಿ ಅವರ ಸಾಮಾಜಿಕ ಕಾಳಜಿ ಅನುಕರಣೀಯವಾಗಿದೆ ಎಂದರು. ವಾಲಿಶ್ರೀ ಆಸ್ಪತ್ರೆಯಲ್ಲಿ ಮುಂಚೆ 25 ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಡಲಾಗಿತ್ತು. ನಂತರ 40 ಬೆಡ್ ಮೀಸಲಿಡಲಾಯಿತು. ಇದೀಗ ಇನ್ನೂ 40 ಹಾಸಿಗೆ ಮೀಸಲಿಟ್ಟಿರುವುದು ಸಂತಸದ ವಿಷಯ. ಇದರಿಂದ ಸೋಂಕಿತರಿಗೆ ಅನುಕೂಲವಾಗಲಿದೆ. ವೆಂಟಿಲೇಟರ್ ಸಹಿತ ಎಲ್ಲ ಸೌಲಭ್ಯವಿದ್ದು, ಇಲ್ಲಿ ಗುಣಮುಖರಾಗುವವರ ಪ್ರಮಾಣ ಶೇ.85ರಷ್ಟಿದೆ. ಇದರಲ್ಲಿ ಆಸ್ಪತ್ರೆ ಆಡಳಿತ ವರ್ಗ, ವೈದ್ಯರ ಶ್ರಮ ಹೆಚ್ಚಿದೆ ಎಂದರು.
ಆಸ್ಪತ್ರೆಯ ಚೇರ್‌ಮನ್ ಡಾ| ರಜನೀಶ ವಾಲಿ ಮಾತನಾಡಿ, ಆಸ್ಪತ್ರೆಯಲ್ಲಿನ 100 ಬೆಡ್ ಪೈಕಿ 80 ಬೆಡ್‌ಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಡಲಾಗಿದೆ. ಬ್ರಿಮ್ಸ್‌ನಲ್ಲಿ ಬೆಡ್ ಭರ್ತಿಯಾಗಿ, ಅಲ್ಲಿಂದ ಸೋಂಕಿತರನ್ನು ರೆಫರ್ ಮಾಡಿದ್ದಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದರು.
ಐಎಂಎ ಅಧ್ಯಕ್ಷ ಡಾ| ವಿ.ವಿ. ನಾಗರಾಜ ಮಾತನಾಡಿದರು. ಡಾ| ಖಾಜಾ ಮೈನುದ್ದೀನ್, ಬಾಬು ವಾಲಿ ಇದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.