ಕಂದುರೋಗ ಲಸಿಕಾ ಕಾರ್ಯಕ್ರಮಕ್ಕೆ ಚವ್ಹಾಣ ಚಾಲನೆ
ಜಾನುವಾರುಗಳಿಗೆ ದೇಶದಲ್ಲಿ ಉನ್ನತ ಸ್ಥಾನ ಗೋಮಾತೆ ರಕ್ಷಣೆಯೇ ನಮ್ಮ ಉದ್ದೇಶ
Team Udayavani, Sep 7, 2021, 7:24 PM IST
ಔರಾದ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮಹತ್ವದ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯ ಕ್ರಮದಡಿ ರಾಜ್ಯ ಮಟ್ಟದ ಕಂದುರೋಗ ಲಸಿಕಾ ಕಾರ್ಯಕ್ರಮಕ್ಕೆ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಹಸುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ಸಚಿವರ ಸ್ವಗ್ರಾಮ ಘಮಸುಬಾಯಿ ತಾಂಡಾದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಪಶು ಇಲಾಖೆ ವತಿಯಿಂದಸಾಮೂಹಿಕ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ರಾಜ್ಯಾದ್ಯಂತ ಹಸು ಮತ್ತು ಎಮ್ಮೆಗಳ 4-8 ತಿಂಗಳ ಹೆಣ್ಣು ಕರುಗಳಿಗೆ ಮಾತ್ರ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆದು ಜಾನುವಾರುಗಳನ್ನು ಕಂದು ರೋಗದಿಂದ
ರಕ್ಷಿಸಿಕೊಳ್ಳುವಂತೆ ವಿನಂತಿಸಿದರು.
ಭಾರತ ಕೃಷಿ ಪ್ರಧಾನ ದೇಶ. ಕೃಷಿಗೆ ಎತ್ತು, ಆಕಳಿನಂತಹ ಜಾನುವಾರುಗಳು ಸಹಕಾರಿಯಾಗಿವೆ. ಹೀಗಾಗಿ ಗೋವುಗಳನ್ನು ದೇವರ ಸಮಾನ ವೆಂದು ಕಾಣುತ್ತೇವೆ . ಹೀಗಾಗಿ ಜಾನುವಾರುಗಳಿಗೆ ದೇಶದಲ್ಲಿ ಉನ್ನತ ಸ್ಥಾನ ನೀಡಲಾಗಿದೆ. ಗೋಮಾತೆ ರಕ್ಷಣೆಯಾಗಬೇಕು ಎಂಬುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಇಲಾಖೆ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮಿಸುತ್ತಿದ್ದಾರೆ ಎನ್ನುವ ವಿಶ್ವಾಸ ತಾವು ಹೊಂದಿರುವುದಾಗಿ ತಿಳಿಸಿದರು.
ಇದನ್ನೂ ಓದಿ:ಭಾರತದ ಅಂತಾರಾಷ್ಟ್ರೀಯ ಗಡಿ ಪ್ರದೇಶಕ್ಕೆ ಚೀನಾದಿಂದ ಹೊಸ ಕಮಾಂಡರ್
ತಾವು ಪಶುಪಾಲನಾ ಇಲಾಖೆ ಸಚಿವರಾದ ಬಳಿಕ ಪಶುಪಾಲನಾ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಸೇರಿದಂತೆ ವಿನೂತನ ಯೋಜನೆ ಜಾರಿಗೊಳಿಸಲಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಂಬಡ್ತಿ ನೀಡಲಾಗಿದೆ. ರಾಜ್ಯದ
ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಗೋಶಾಲೆಗಳಿಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿ ಪರಿಶೀಲನೆ ನಡೆಸಲಾಗಿದ್ದು, ಈಗ ಮತ್ತೆ ರಾಜ್ಯಾದ್ಯಂತ ಎರಡನೇ ಬಾರಿಗೆ ವಿವಿಧ ಜಿಲ್ಲೆಗಳ ಭೇಟಿ ಕಾರ್ಯಕ್ರಮ ಹಾಕಿಕೊಳ್ಳುವುದಾಗಿ ಸಚಿವರು ಹೇಳಿದರು.
ಸಮಾರಂಭದಲ್ಲಿ ಪಶುಪಾಲನಾ ಇಲಾಖೆ ನಿರ್ದೇಶಕ ಡಾ| ಮಂಜುನಾಥ ಪಾಳೆಗಾರ, ಅಪರ ನಿರ್ದೇಶಕ ಡಾ| ತಿಪ್ಪೇಸ್ವಾಮಿ, ಜಂಟಿ ನಿರ್ದೇಶಕ
ಡಾ| ಶಿವಣ್ಣ, ಉಪ ನಿರ್ದೇಶಕ ಡಾ| ರವಿ ಬೂರೆ ಇತರರಿದ್ದರು. ಡಾ| ನರಸಪ್ಪ ನಿರೂಪಿಸಿದರು.
ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ ಪಶು ವೈದ್ಯರ ಪಾತ್ರ ಗಮನಾರ್ಹ. ಅಧಿಕಾರಿಗಳು, ಪಶು ವೈದ್ಯರು ನೊಟೀಸ್ ಪಡೆದುಕೆಲಸ ಮಾಡುವ ಮಟ್ಟಕ್ಕೆ ಇಳಿಯದೇ ತಮ್ಮ ಜವಾಬ್ದಾರಿ ಅರಿತು ಸರಿಯಾದ ಸಮಯಕ್ಕೆಕಚೇರಿಗೆ ಆಗಮಿಸಿ ಕಾರ್ಯ ಪ್ರವೃತ್ತರಾಗಬೇಕು.
-ಪ್ರಭು ಚವ್ಹಾಣ, ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.