ಕಾಲುವೆ ಕುಸಿದ ಸ್ಥಳಕ್ಕೆ ಶಾಸಕ ರಾಜುಗೌಡ ಭೇಟಿ-ಪರಿಶೀಲನೆ
Team Udayavani, Mar 13, 2022, 2:17 PM IST
ಹುಣಸಗಿ: ನಾರಾಯಣಪುರ ಎಡದಂಡೆ ಕಾಲುವೆ ಕುಸಿತಗೊಂಡ ಸ್ಥಳಕ್ಕೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಶನಿವಾರ ಭೇಟಿ ನೀಡಿ ತಾತ್ಕಾಲಿಕ ಕಾಮಗಾರಿ ವೀಕ್ಷಿಸಿದರು.
ನಂತರ ಮಾತನಾಡಿದ ಅವರು, ಈಗಾಗಲೇ ತಾತ್ಕಾಲಿಕವಾಗಿ ಮರಳಿನ ಚೀಲ ತುಂಬಿ ತಡೆಗಟ್ಟಲು ಪ್ರಯತ್ನಿಸಲಾಗಿದ್ದು, ರೈತರಿಗೆ ಆದಷ್ಟು ನೀರು ಹರಿಸಲು ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬೇಸಿಗೆ ಹಂಗಾಮಿನಲ್ಲಿ ರೈತರಿಗೆ ವರದಾನ ಆಗುವಂತೆ ತಾತ್ಕಾಲಿಕ ಕಾಮಗಾರಿ ನಡೆಸಿಯೇ ನೀರು ಹರಿಸಬೇಕಿದೆ. ನಂತರ ಉಳಿದ ಅವಧಿಯಲ್ಲಿ ವಿನೂತನವಾಗಿ ಪರ್ಯಾಯ ಕಾಲುವೆ ಕಟಿಂಗ್ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಕಾಲುವೆ ಪ್ರತಿಯೊಂದು ಭಾಗದಲ್ಲಿ ಸ್ಥಿತಿಗತಿ ವೀಕ್ಷಿಸಬೇಕು. ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಕೆಬಿಜೆಎನ್ನೆಲ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಅವರು, ಇನ್ನೆರಡು ದಿನಗಳಲ್ಲಿ ತಾತ್ಕಾಲಿಕ ಕಾಮಗಾರಿ ಮುಗಿಯಲಿದ್ದು, ಯಾವುದೇ ಕಾರಣಕ್ಕೂ ರೈತರು ಆತಂಕ ಪಡುವ ಅಗತ್ಯವಿಲ್ಲ. ನೀರು ಹರಿಸಲು ತೊಂದರೆ ಇಲ್ಲ. ಸದ್ಯ ಕಾಮಗಾರಿ ಪೂರ್ಣಗೊಂಡ ನಂತರ ಶಾಶ್ವತ ಪರಿಹಾರಕ್ಕೆ ಮುಂದಾಗುವುದಾಗಿ ಹೇಳಿದರು.
ಈ ವೇಳೆ ಸಿದ್ದನಗೌಡ ಕರಿಭಾವಿ, ಕೃಷ್ಣಾರೆಡ್ಡಿ ಮುದನೂರು, ಇಇ ಶಂಕರ ನಾಯ್ಕೊಡಿ, ಎಇ ರವಿಕುಮಾರ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.