ಸ್ಮಾರಕಗಳು ನಾಡಿನ ಸಂಸ್ಕೃತಿಯ ಪ್ರತೀಕ

Team Udayavani, Mar 10, 2019, 9:40 AM IST

bid-2.jpg

ಬೀದರ: ಸ್ಮಾರಕಗಳು ಒಂದು ನಾಡಿನ ಐತಿಹಾಸಿಕ ಕನ್ನಡಿಯಿದ್ದಂತೆ. ಹಿಂದಿನ ಅರಸರು ಏನು ಮಾಡಿದ್ದಾರೋ ಅದನ್ನೇ ಆಯಾ ಭಾಗದ ಸ್ಮಾರಕಗಳು ನಮಗೆ ಇತಿಹಾಸ ತಿಳಿಸಿಕೊಡುತ್ತವೆ. ಆದ್ದರಿಂದ ಸ್ಮಾರಕಗಳು ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕವಾಗಿವೆ ಎಂದು ಹಂಪಿ ಕನ್ನಡ
ವಿಶ್ವವಿದ್ಯಾಲಯದ ಉಪ ಕುಲಸಚಿವ ಪ್ರೊ| ಎಸ್‌.ವೈ. ಸೋಮಶೇಖರ ಹೇಳಿದರು.

ನಗರದ ಕರ್ನಾಟಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕನ್ನಡ ಮತ್ತು ಇತಿಹಾಸ ಅಧ್ಯಯನ ವಿಭಾಗ ಹಾಗೂ ಯುಜಿಸಿ ಸಿಪಿಇ 3ನೇ ಹಂತದ ಯೋಜನೆಯಡಿ ನಡೆದ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
 
ಕರ್ನಾಟಕದ ಕಿರೀಟ ಬೀದರ ಜಿಲ್ಲೆ ಅತ್ಯಂತ ಶ್ರೀಮಂತ ಇತಿಹಾಸ ಹೊಂದಿದ ಜಿಲ್ಲೆಯಾಗಿದೆ. ಇಲ್ಲಿ ಶರಣರು, ಸಂತರು ಮಹಾತ್ಮರು ಜೀವನ ಸಾಗಿಸಿದ್ದಾರೆ. ಜೊತೆಗೆ ಐತಿಹಾಸಿಕ ಕೋಟೆ, ಮದರಸಾ ಹಾಗೂ ಅನೇಕ ಐತಿಹಾಸಿಕ ಸ್ಮಾರಕಗಳನ್ನು ಒಳಗೊಂಡ ಐತಿಹಾಸಿಕ ಕ್ಷೇತ್ರ ಬೀದರ
ಆಗಿದೆ. ವೈಜ್ಞಾನಿಕ ಆಧಾರದ ಮೇಲೆ ರೂಪುಗೊಂಡ ಇಲ್ಲಿನ ಕೋಟೆಯ ಒಳಗಿನ ಒಂದೊಂದು ಕಲ್ಲುಗಳು ಸಹ ಒಂದೊಂದು ಇತಿಹಾಸ ಹೇಳುತ್ತವೆ.

ಬೀದರನಿಂದ ಚಾಮರಾಜನಗರ ವರೆಗೆ ನಮ್ಮ ನಾಡು ಇತಿಹಾಸ ವ್ಯಾಪ್ತಿಯನ್ನು ಹೊಂದಿದೆ. ಇಲ್ಲಿನ ಕಲೆ, ಸಾಹಿತ್ಯ, ಸಂಗೀತ, ಸ್ಮಾರಕಗಳು ಮತ್ತು ವಾಸ್ತುಶಿಲ್ಪಗಳು ಹೆಜ್ಜೆ ಹೆಜ್ಜೆಗೂ ನಾಡಿನ ಚರಿತ್ರೆಯನ್ನು ಎತ್ತಿ ತೋರಿಸುತ್ತವೆ. ವಿದ್ಯಾರ್ಥಿಗಳು ಇತಿಹಾಸ ಅಧ್ಯಯನ ಮಾಡಬೇಕು. ಇತಿಹಾಸ ಕುರಿತು ಮಕ್ಕಳು ಪ್ರಶ್ನೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸದಾ ಪರಸ್ಪರ ಚರ್ಚಿಸುತ್ತಾ ಜ್ಞಾನಾರ್ಜನೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ| ಎಂ.ಎಸ್‌. ಪಾಟೀಲ ಮಾತನಾಡಿ, ಕಲಾ ವಿಭಾಗ ನಮಗೆ ಜಗತ್ತಿನ ಜ್ಞಾನ ನೀಡುತ್ತದೆ. ವಿಶೇಷ ಕಾರ್ಯಕ್ರಮದ ಪ್ರಯೋಜನ ಪಡೆಯುವ ವಿದ್ಯಾರ್ಥಿಗಳು ಜೀವನದಲ್ಲಿ ಉಪನ್ಯಾಸದ ಅನುಭವ ಬಳಸಿಕೊಳ್ಳಬೇಕು ಎಂದರು.

ಪ್ರೊ|ರಾಜೇಂದ್ರ ಬಿರಾದಾರ, ಪ್ರೊ|ವೈಜಿನಾಥ ಚಿಕ್ಕಬಸೆ, ಡಾ|ಜಗನ್ನಾಥ ಹೆಬ್ಟಾಳೆ, ಲಕ್ಷ್ಮೀ ಕುಂಬಾರ, ಡಾ|ಮಹಾನಂದ ಮಡಕಿ ಇದ್ದರು.

ಟಾಪ್ ನ್ಯೂಸ್

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.