ಮುದಗಲ್ಲ: ಗ್ರಾಮೀಣ ಕ್ರೀಡೆ ಉಳಿಸಿ-ಬೆಳೆಸಿ
Team Udayavani, Aug 25, 2022, 5:40 PM IST
ಮುದಗಲ್ಲ: ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ಗ್ರಾಮೀಣ ಕ್ರೀಡೆಗಳು ಮಾಯವಾಗುತ್ತಿವೆ. ಅವುಗಳ ಉಳಿಸಿ, ಬೆಳೆಸುವ ಕೆಲಸವಾಗಬೇಕಿದೆ ಎಂದು ಬಿಜೆಪಿ ತಾಲೂಕು ಮಂಡಳ ಅಧ್ಯಕ್ಷ ವೀರನಗೌಡ ಲಕ್ಕಿಹಾಳ ಹೇಳಿದರು.
ಪಟ್ಟಣದ ಮೇಗಳಪೇಟೆಯ ಗ್ಯಾನಪ್ಪಯ್ಯನ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಿಂಗ್ರಾಣಿ ಕಲ್ಲು ಮತ್ತು ಗುಂಡು ಎತ್ತುವ ಸ್ಪರ್ಧೆಯಲ್ಲಿ ಅವರು ಮಾತನಾಡಿದರು.
ಗ್ಯಾನಪ್ಪಯ್ಯನ ಜಾತ್ರೆಯಲ್ಲಿ ಗ್ರಾಮೀಣ ಸೋಗಡಿನ ಟಗರಿನ ಕಾಳಗ, ಕಬಡ್ಡಿ, ಸಿಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ, ರಾಸುಗಳು ಭಾರ ಏಳೆಯುವ ಸ್ಪರ್ಧೆಗಳನ್ನು ನಡೆಸುತ್ತಿರುವುದು ಇಲ್ಲಿನ ಭಕ್ತರ ಮಹತ್ವದ ಕೆಲಸವಾಗಿದೆ ಎಂದರು.
ಮಾಜಿ ಶಾಸಕ ಮಾನಪ್ಪ ವಜ್ಜಲ್ ಸಹೋದರ ಕರಿಯಪ್ಪ ವಜ್ಜಲ್ ಕಾರ್ಯಕ್ರಮ ಉದ್ಘಾಟಿಸಿದರು. ಸ್ಪರ್ಧೆಯಲ್ಲಿ 20ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ದೊಡ್ಡ ಸಿದ್ದಾಯ್ಯ ಹೊರಪೇಟೆ, ಅಯ್ಯಪ್ಪಯ್ಯ ಗ್ಯಾನಪ್ಪಯ್ಯನವರ್, ಮಂಜುನಾಥ ಬನ್ನಿಗೋಳಕರ್, ಮಹ್ಮದ್ ರಫಿ, ಕರಿಯಪ್ಪ, ಸಣ್ಣ ಸಿದ್ದಯ್ಯ, ಗ್ಯಾನಪ್ಪ, ಗಂಗಪ್ಪ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.