ಸಂಗೀತ ಸಂಜೆ: ಕಲಾವಿದರಿಗೆ ಸನ್ಮಾನ
Team Udayavani, Jan 5, 2018, 1:14 PM IST
ಬೀದರ: ನಗರದ ಜಯಪ್ರಕಾಶ ಬಡಾವಣೆ (ಜೆಪಿ ನಗರ)ಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಜಾನಪದ ಕಲಾವಿದರ ಬಳಗ ಮತ್ತು ಸಾಯಿ ಗಣೇಶ ಮಂಡಳ ಟ್ರಸ್ಟ್ ವತಿಯಿಂದ ಸಂಗೀತ ಸಂಜೆ ಮತ್ತು ಕಲಾವಿದರ ಅಭಿನಂದನಾ ಸಮಾರಂಭ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಡಾವಣೆಯಲ್ಲಿ ಸಂಗೀತ ಸಂಜೆ ಆಯೋಜಿಸಿರುವುದು ಸಂತಸದ ವಿಷಯ. ಪ್ರತಿಭೆ ಪ್ರತಿಯೊಬ್ಬರಲ್ಲಿ ಸುಪ್ತವಾಗಿರುತ್ತದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಾವಂತರಿದ್ದಾರೆ. ಅಂಥವರಿಗೆ ಸಮಾಜ ಮತ್ತು ಕುಟುಂಬ ಅವಕಾಶಗಳನ್ನು ಕಲ್ಪಿಸಿಕೊಟ್ಟಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.
ಹಂಪಿ ಉತ್ಸವ, ಮೈಸೂರು ಕನ್ನಡ ಸಾಹಿತ್ಯ ಸಮ್ಮೇಳನ ಸೇರಿದಂತೆ ವಿವಿಧ ಉತ್ಸವಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ನೀಡಿರುವ ರೇಖಾ ಅಪ್ಪಾರಾವ್ ಸೌದಿ ಮತ್ತು ಅಮೀತ್ ಜನವಾಡಕರ್ ತಮ್ಮದೇಯಾದ ಛಾಪು ಮೂಡಿಸಿದ್ದಾರೆ. ಬಡಾವಣೆಯ ಜನ ಕಲಾವಿದರಿಗೆ ಅಭಿನಂದಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಇದೇ ವೇಳೆ ರೇಖಾ ಸೌದಿ ಮತ್ತು ಅಮೀತ್ ಜನವಾಡಕರ್ ಅವರನ್ನು ಸಾಯಿ ಗಣೇಶ ಮಂಡಳ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ನಂತರ ಸಂಗೀತ ಸಂಜೆ ಕಾರ್ಯಕ್ರಮ ನಡೆಯಿತು. ಶಾಸಕ ರಹೀಮ್ ಖಾನ್, ಪ್ರಥಮ ದರ್ಜೆ ಗುತ್ತಿಗೆದಾರ ಗುರುನಾಥ ಕೊಳ್ಳೂರ, ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಶೆಟಕಾರ ವೇದಿಕೆಯಲ್ಲಿದ್ದರು. ಶಶಿಕಾಂತ ಬಂಬುಳಗೆ ಸ್ವಾಗತಿಸಿದರು. ಬಳಗದ ಅಧ್ಯಕ್ಷ ವಿಜಯಕುಮಾರ ಸೋನಾರೆ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.