ಬಸವಣ್ಣ ದೇಗುಲದೆದುರು ಭದ್ರತೆ
Team Udayavani, Apr 10, 2020, 3:39 PM IST
ನಾರಾಯಣಪುರ: ಬಸವೇಶ್ವರ ದೇಗುಲದ ಎದುರು ಪೊಲೀಸರು ಭದ್ರತೆ ಒದಗಿಸಿದರು.
ನಾರಾಯಣಪುರ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಸುಕ್ಷೇತ್ರ ಕಾಲಜ್ಞಾನಿ ಕೊಡೇಕಲ್ ಬಸವಣ್ಣ ದೇವರ ಜೋಡು ಪಲ್ಲಕ್ಕಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ಗುರುವಾರ ರದ್ದಾಗಿದರಿಂದ ದೇಗುಲದ ಎದುರು ಪೊಲೀಸ್ ಸಿಬ್ಬಂದಿ ಸೂಕ್ತ ಭದ್ರತೆ ಒದಗಿಸಿದ್ದರು.
ಗುರುವಾರ ಪೀಠಾಧಿಪತಿ ವೃಷಬೇಂದ್ರ ಅಪ್ಪನವರ ಮಾರ್ಗದರ್ಶನ ಅರಸು ಮನೆತನದ ಜಹಗೀರದಾರ ನೇತೃತ್ವದಲ್ಲಿ ವರ್ಷದ ಪದ್ಧತಿಯಂತೆ ಅಷ್ಟ ವಿಧಾರ್ಚನೆಯ ಪೂಜೆ, ಬಾರಾ ಬಲೂತಿ ಸಂಪ್ರದಾಯದಂತೆ ಜೋಡು ಪಲ್ಲಕ್ಕಿಗಳ ಉತ್ಸವ ನಡೆಯಬೇಕಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶ ಜಾರಿಗೊಳಿಸಿದ್ದು, ಜಿಲ್ಲಾಡಳಿತ ಜಾತ್ರೆ-ಉತ್ಸವಗಳಿಗೆ ಬ್ರೇಕ್ ಹಾಕಿದೆ. ಹೀಗಾಗಿ ಜಾತ್ರಾ ಉತ್ಸವದ ಎಲ್ಲ ಧಾರ್ಮಿಕ ಕಾರ್ಯಕ್ರಮ ರದ್ದುಗೊಳಿಸಿದ್ದರಿಂದ ಭಕ್ತರು ಮನೆಯಿಂದ ಹೊರಬರಲಿಲ್ಲ. ಪ್ರತಿ ವರ್ಷದಂತೆ ಜರುಗುತ್ತಿದ್ದ ಜಾನುವಾರು ಜಾತ್ರೆ ರದ್ದುಗೊಳಿಸಲಾಗಿದೆ. ಹುಣಸಗಿ ಸಿಪಿಐ ನೇತೃತ್ವದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.