ವಲಸೆ ತಡೆಗೆ ನರೇಗಾ ಸಹಕಾರಿ
Team Udayavani, Mar 23, 2022, 3:28 PM IST
ಮಾನ್ವಿ: ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆ ಕಡಿಮೆ ಆಗುವುದರಿಂದ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸಲು, ಕೂಲಿ ಕಾರ್ಮಿಕರಿಗೆ ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿಯೇ ಉದ್ಯೋಗ ಕಲ್ಪಿಸಲು, ಗ್ರಾಮಕ್ಕೆ ಶಾಶ್ವತ ಆಸ್ತಿ ರೂಪಿಸಲು ನರೇಗಾ ಯೋಜನೆ ಸಹಕಾರಿ ಎಂದು ತಾಪಂ ಇಒ ಸ್ಟೇಲಾ ವರ್ಗೀಸ್ ಹೇಳಿದರು.
ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ಮಂಗಳವಾರ ಉದ್ಯೋಗ ಖಾತ್ರಿ ಯೋಜನೆಯ ದುಡಿಯೋಣ ಬಾ ಅಭಿಯಾನ ನಿಮಿತ್ತ ಹಮ್ಮಿಕೊಂಡಿದ್ದ ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರದಿಂದ ನರೇಗಾ ಯೋಜನೆಯಲ್ಲಿ ಮಾ.15ರಿಂದ ಜೂ.30ರವರೆಗೆ 100 ದಿನಗಳ ಕಾಲ ನಿರಂತರ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು, ಮಹಿಳೆಯರು, ವೃದ್ಧರು, ವಿಕಲಚೇತನರು ಕೆಲಸ ಪಡೆಯಬಹುದು. ವಿವಿಧ ವಸತಿ ಯೋಜನೆಗಳ ಫಲಾನುಭವಿಗಳು, ಸಣ್ಣ ರೈತರು ವೈಯಕ್ತಿಕ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ತಾಲೂಕಿನ ಜನರಿಗೆ ನರೇಗಾ ಕುರಿತು ಮಾಹಿತಿ ನೀಡಲು ಉದ್ಯೋಗ ವಾಹಿನಿ ಜಾಗೃತಿ ರಥದ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.
ಈ ವೇಳೆ ರೇಷ್ಮೆ ಇಲಾಖೆ ನಿರೀಕ್ಷಕರಾದ ಮಹಾಂತಮ್ಮ, ನರೇಗಾ ಯೋಜನೆ ಅಧಿಕಾರಿಗಳಾದ ವೀರೇಶ, ಲಿಂಗಪ್ಪ, ಅಶೋಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.