ನರೇಗಾ ಹೆಚ್ಚುವರಿ ದಿನದ ಪ್ರಚಾರ ಮಾಡಿ


Team Udayavani, Dec 6, 2018, 11:32 AM IST

bid-1.jpg

ಬೀದರ: ಜಿಲ್ಲೆಯ ಪೀಡಿತ ತಾಲೂಕುಗಳಲ್ಲಿ ನರೇಗಾ ಯೋಜನೆಯಡಿ 50 ದಿನ ಹೆಚ್ಚುವರಿ ಕೆಲಸ ಒದಗಿಸಲು ಅವಕಾಶವಿದೆ. ಈ ಬಗ್ಗೆ ಜಿಲ್ಲಾದ್ಯಂತ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ನಡೆದ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಬೀದರ, ಹುಮನಾಬಾದ, ಔರಾದ ಮತ್ತು ಬಸವಕಲ್ಯಾಣ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಬರದಿಂದಾಗಿ ಜನರು ಉದ್ಯೋಗ ಅರಸಿಕೊಂಡು ಬೇರೆಡೆಗೆ ಗುಳೆ ಹೋಗುವುದನ್ನು ತಪ್ಪಿಸಬೇಕಿದೆ. ನರೇಗಾ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ ಪ್ರತಿ ಕುಟುಂಬ 150 ದಿನ ಕೂಲಿ ಕೆಲಸ ನಿರ್ವಹಿಸಲು ಅವಕಾಶವಿದ್ದು, ಈ ಯೋಜನೆಯನ್ನು ಗ್ರಾಮೀಣ ಭಾಗದ ಪ್ರತಿಯೊಂದು ಕುಟುಂಬಗಳಿಗೆ ತಲುಪಿಸಬೇಕು ಎಂದು ಹೇಳಿದರು. ಯೋಜನೆ ಪ್ರಚಾರಕ್ಕಾಗಿ ತಾಲೂಕಿಗೊಂದು ಟಾಟಾ ಎಸಿ ವಾಹನಗಳನ್ನು ಬಾಡಿಗೆಗೆ ಪಡೆದು ವಾಹನದ ಸುತ್ತಲು ಉದ್ಯೋಗ ಖಾತ್ರಿ ಯೋಜನೆ ಮತ್ತು ಸ್ವತ್ಛ ಭಾರತ ಮಿಷನ್‌ ಯೋಜನೆ ಬ್ಯಾನರ್‌ಗಳನ್ನು ಸ್ಪಷ್ಟವಾಗಿ ಕಾಣುವಂತೆ ಅಂಟಿಸಬೇಕು. ಈ ವಾಹನವು ವಾರಕ್ಕೆ 3 ದಿನ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಪ್ರದೇಶದ ಸರ್ವತೋಮುಖ ಅಬಿವೃದ್ಧಿಗೆ ಜನಪರ ಕಾಯ್ದೆಯಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಕೂಲಿ ಕಾರ್ಮಿಕರಿಗೆ ಪ್ರತಿ ಕುಟುಂಬಕ್ಕೆ 100 ದಿನ ಕೆಲಸ ನೀಡುವ ಉತ್ತಮ ಯೋಜನೆಯಾಗಿದೆ. ಈ
ಯೋಜನೆಯಡಿ ಕೂಲಿ ಪಡೆಯುವುದು ಕಾರ್ಮಿಕರ ಹಕ್ಕಾಗಿದೆ. ಈ ಕುರಿತು ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಜನರಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದು ಹೇಳಿದರು.

ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿರುವ ಕೆರೆ ಹೂಳೆತ್ತುವ ಕೆಲಸಕ್ಕೆ ಮೊದಲ ಆದ್ಯತೆ ನೀಡಬೇಕು. ಸ್ವತ್ಛ ಭಾರತ ಮಿಷನ್‌ ಯೋಜನೆಯಡಿ ಶೌಚಾಲಯ ನಿರ್ಮಿಸುವ ಗುರಿ ಪೂರ್ಣಗೊಳಿಸಬೇಕು. ಈಗಾಗಲೇ ನಿರ್ಮಿಸಿರುವ ಶೌಚಾಲಯಗಳು ಸಮರ್ಪಕವಾಗಿ ಬಳಕೆ ಮಾಡುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

2018-19ನೇ ಸಾಲಿನಲ್ಲಿ ಗ್ರಾಪಂಗಳಿಗೆ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳ ಗುಚ್ಚಕ್ಕೆ ಅನುಮೋದನೆ ನೀಡಲಾಗಿದೆ. ವೈಯಕ್ತಿಕ ಕಾಮಗಾರಿಗಳಡಿ ಕುರಿ, ಮೇಕೆ, ಕೋಳಿ, ದನದ ಕೊಟ್ಟಿಗೆ, ಹಂದಿ ಶೆಡ್‌ ನಿರ್ಮಾಣ, ಭೂ ಅಭಿವೃದ್ಧಿ, ಭೂ ಸಮತಟ್ಟು, ಬದು ನಿರ್ಮಾಣ, ಕೃಷಿ ಹೊಂಡ,
ತೋಟಗಾರಿಕೆ, ಕೃಷಿ, ರೇಷ್ಮೆ ಇಲಾಖೆ ಅನುಮತಿಸಿದ ಕಾಮಗಾರಿಗಳು, ರೈತರ ಜಮೀನುಗಳಲ್ಲಿ ಗಿಡಗಳ ನೆಡುವಿಕೆ, ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣ, ಹಿಪ್ಪು ನೇರಳೆ ತೋಟ, ಮರಗಡ್ಡೆ ಹಿಪ್ಪು ನೇರಳೆ ಅಭಿವೃದ್ದಿ ಕಾಮಗಾರಿಗಳು ಹಾಗೂ ಸಮುದಾಯ ಕಾಮಗಾರಿಗಳಡಿ ಕೆರೆ, ಕಟ್ಟೆ ಹೂಳೆತ್ತುವುದು, ಆಟದ ಮೈದಾನ, ಸ್ಮಶಾನ ಅಭಿವೃದ್ಧಿ, ರೈತಕಣ, ಕೃಷಿ ಹೊಂಡ, ಮಲ್ಟಿ ಆರ್ಚ್‌ ಚೆಕ್‌ ಡ್ಯಾಂ, ಗ್ರಾಮೀಣ ಗೋದಾಮು, ಅಂಗನವಾಡಿ ಕಟ್ಟಡ, ಗ್ರಾಮೀಣ ಉದ್ಯಾನವನ, ನಮ್ಮ ಹೊಲ ನಮ್ಮದಾರಿ, ಸಂತೆ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಬಹುದಾಗಿದೆ ಎಂದು ವಿವರಿಸಿದರು.

ನರೇಗಾ ಯೋಜನೆಯಡಿ ಉದ್ಯೋಗ ಪಡೆಯಲು ಗ್ರಾಮೀಣ ಜನರು ಗ್ರಾಪಂಗಳಿಗೆ ಭೇಟಿ ನೀಡಿ ಅರ್ಜಿ ನಮೂನೆ-6 ಸಲ್ಲಿಸಬೇಕು ಅಥವಾ ಮೌಖೀಕವಾಗಿ ತಿಳಿಸುವ ಮೂಲಕ ಉದ್ಯೋಗ ಪಡೆಯಬಹುದು ಎಂದು ಹೇಳಿದರು.

ಜಿಪಂ ಉಪ ಕಾರ್ಯದರ್ಶಿಗಳಾದ ಕಿಶೋರಕುಮಾರ ದುಬೆ, ಸ್ವತ್ಛ ಭಾರತ ಮಿಷನ್‌ ಹೆಚ್ಚುವರಿ ಜಿಲ್ಲಾ ನೋಡಲ್‌ ಅಧಿಕಾರಿ ಡಾ| ಗೌತಮ ಅರಳಿ, ಎಲ್ಲ ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸಹಾಯವಾಣಿ ಕೇಂದ್ರ ಆರಂಭ
ಬೀದರ: ಬೀದರ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ತಾಪಂ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಂಭವವಿದ್ದು, ತಾಲೂಕಿನ ಸಾರ್ವಜನಿಕರು, ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ತಾಲೂಕು ಕೇಂದ್ರದಲ್ಲಿ ಸಹಾಯವಾಣಿ ಕೇಂದ್ರ ತೆರೆದು ಸಿಬ್ಬಂದಿಗಳನ್ನು ನಿಯೋಜಿಸಿ ನೋಂದಣಿಯಾಗುವ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಅದರಂತೆ ಬೀದರ ತಾಪಂ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಕುಡಿಯುವ ನೀರಿಗೆ ಸಮಸ್ಯೆ ಇದ್ದಲ್ಲಿ, ಉದ್ಭವಿಸಿದಲ್ಲಿ ಸಾರ್ವಜನಿಕರು ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ:08482-233154ಗೆ ಕರೆ ಮಾಡಿ ದೂರು ನೋಂದಾಯಿಸಬಹುದು ಎಂದು ಬೀದರ ತಹಶೀಲ್ದಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.