![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 16, 2017, 1:23 PM IST
ಬಸವಕಲ್ಯಾಣ: ಜೈಭಾರತ ಮಾತಾ ಸೇವಾ ಸಮಿತಿ ತಾಲೂಕು ಘಟಕದ ಉದ್ಘಾಟನೆಗಾಗಿ ನಗರಕ್ಕೆ ಆಗಮಿಸಿದ ನಿರಗೂಡಿಯ ಶ್ರೀ ಮಲ್ಲಯ್ಯ ಮುತ್ಯಾ ಅವರ ಭವ್ಯ ಮೆರವಣಿಗೆ ಜರುಗಿತು. ಅಲಂಕೃತ ವಾಹನದಲ್ಲಿ ಭಾರತ ಮಾತೆಯ ಭಾವಚಿತ್ರ, ಪುಷ್ಪಾಲಂಕಾರ ಮಾಡಿದ ತೆರೆದ ವಾಹನದಲ್ಲಿ ಆಸೀನರಾದ ಶ್ರೀಗಳನ್ನು ಸಸ್ತಾಪುರ ಬಂಗ್ಲಾದಿಂದ ತ್ರಿಪುರಾಂತ ಮಾರ್ಗವಾಗಿ ನಗರದ ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಬಸವೇಶ್ವರ ದೇವಸ್ಥಾನದವರೆಗೆ ಮೆರವಣಿಗೆ ಮಾಡಲಾಯಿತು. ಭಕ್ತಿಗೀತೆ, ಜೈ ಘೋಷಗಳು ಮೊಳಗಿದವು. ಭಕ್ತರ ಕೈಯಲ್ಲಿ ರಾಷ್ಟ್ರಧ್ವಜಗಳು ಹಾರಡುತಿದ್ದವು. ದಾರಿಯುದ್ದಕ್ಕೂ ರಸ್ತೆ ಬದಿ ನಿಂತಿದ್ದ ಜನರು ಭಕ್ತಿ ಶ್ರದ್ಧೆಯಿಂದ ಸ್ವಾಗತಿಸಿ, ದರ್ಶನ ಪಡೆದರು. ದೇವಸ್ಥಾನದಿಂದ ಮುಖ್ಯ ರಸ್ತೆ ಮೂಲಕ ಬಿರಾದಾರ ಕಾಲನಿಯವರೆಗೆ ರ್ಯಾಲಿ ನಡೆದ ನಂತರ ಜೈಭಾರತ ಮಾತಾ ಸೇವಾ ಸಮಿತಿ ತಾಲೂಕು ಘಟಕದ ಉದ್ಘಾಟನೆ ಜರುಗಿತು. ಸೇವಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷರು ಆಗಿರುವ ಶ್ರೀ ಮಲ್ಲಯ್ಯ ಮುತ್ಯಾ ಅವರು ಸೇವಾ ಸಮಿತಿಯ ತಾಲೂಕು ಘಟಕ ಉದ್ಘಾಟಿಸಿದರು. ಜಿಪಂ ಸದಸ್ಯ ಗುಂಡುರೆಡ್ಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ರಾಮಪ್ಪ ಗುದಗೆ, ಧೂಳಪ್ಪ ಬೇಲೂರ, ಅಂಬ್ರಿಶ ಕೋರಾಳೆ, ಅಮೃತ ದಾಮಿ, ಆಕಾಶ, ಆನಂದ ನಾಯಕ, ದೇವರಾಜ ಪಾಲ್ಗೊಂಡಿದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.