ವಿನೂತನ ಅನುಭವ ಮಂಟಪಕ್ಕೆ ಜನವರಿಯಲ್ಲಿ ಅಡಿಗಲ್ಲು
Team Udayavani, Nov 18, 2019, 2:25 PM IST
ಬೀದರ್: ಬಸವ ಕಲ್ಯಾಣದಲ್ಲಿ ರಾಜ್ಯ ಸರ್ಕಾರದಿಂದ ವಿನೂತನ ಅನುಭವ ಮಂಟಪ ನಿರ್ಮಾಣಕ್ಕೆ ಬರುವ ಜನವರಿ ತಿಂಗಳಲ್ಲಿ ಅಡಿಗಲ್ಲು ನೆರವೇರಿಸಲು ನಿರ್ಧರಿಸಲಾಗಿದೆ ಎಂದು ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಡಾ. ಬಸವಲಿಂಗ ಪಟ್ಟದ್ದೇವರು ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುಭವ ಮಂಟಪ ಉತ್ಸವದ ವೇಳೆಯೇ ಕಾಮಗಾರಿಗೆ ಚಾಲನೆ ನೀಡುವ ಉದ್ದೇಶ ಹೊಂದಲಾಗಿತ್ತು. ಆದರೆ, ಉಪ ಚುನಾವಣೆ ಹಿನ್ನಲೆಯಲ್ಲಿ ಇದನ್ನು ಮುಂದೂಡಲಾಗಿದೆ. ವಿನೂತನ ಅನುಭವ ಮಂಟಪಕ್ಕೆ ರಾಜ್ಯ ಸರ್ಕಾರ ಈಗಾಗಲೇ 50 ಕೋಟಿ ರೂ. ಮಂಜೂರು ಮಾಡಿದ್ದು, ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಿದರೆ ಕೋಟ್ಯಂತರ ಹಣ ಸಿಗಲು ಸಾಧ್ಯವಿದೆ. ಈ ದಿಸೆಯಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಸಂಶೋಧನೆಗಳ ಆಧಾರದ ಮೇಲೆಯೇ 1955ರಲ್ಲಿ ಲಿಂ. ಡಾ. ಚನ್ನಬಸವ ಪಟ್ಟದ್ದೇವರು ಅನುಭವ ಮಂಟಪವನ್ನು ನಿರ್ಮಿಸಿದ್ದಾರೆ. ಗೆಜೆಟ್ ಪ್ರಕಾರ ಮಂಟಪವು ಒಟ್ಟು 80 ಎಕರೆ ಜಮೀನು ಹೊಂದಿತ್ತು. ಆದರೆ, ಅದು ಈಗ 25 ಎಕರೆಗೆ ಬಂದಿದೆ. ನೂತನ ಕಟ್ಟಡ ಟ್ರಸ್ಟ್‌ಗೆ ಸೇರಬಹುದೆಂಬ ಉದ್ದೇಶಕ್ಕೆ ಕೆಲವರು ಈ ಸ್ಥಳಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆ ಜಮೀನು ಸಹ ಟ್ರಸ್ಟ್ ಹೆಸರಿನಲ್ಲಿಲ್ಲ, ಕೇವಲ ಕಬ್ಜಾದಲ್ಲಿದೆ. ನೂತನ ಕಟ್ಟಡಕ್ಕಾಗಿ ಟ್ರಸ್ಟ್ ಬೇಷರತ್ತಾಗಿ ಈ ಜಾಗವನ್ನು ಸರ್ಕಾರಕ್ಕೆ ಕೊಟ್ಟಿದೆ ಎಂದು ಡಾ. ಪಟ್ಟದ್ದೇವರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.