ದೊಡ್ಡ ಮಟ್ಟದ ಗ್ರಾಮ ವಾಸ್ಯವ್ಯದಿಂದ ಅಧಿಕಾರಿಗಳಿಗೆ ಹೊಸ ಅನುಭವ: ಸಿಎಂ
Team Udayavani, Jun 28, 2019, 10:58 AM IST
ಬೀದರ್: ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಅಧಿಕಾರಿಗಳಿಗೆ ಒಂದು ಹೊಸ ಅನುಭವ ಕೊಡುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಉಜಳಂಬದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಸಿಬ್ಬಂದಿಯಿಂದ ಜಿಲ್ಲಾಧಿಕಾರಿವರೆಗಿನ ಅಧಿಕಾರಿಗಳು ಬೆಳಗ್ಗೆಯಿಂದ ಸಂಜೆವರೆಗೆ ಜನರ ಜೊತೆಗಿದ್ದು ತಾಳ್ಮೆಯಿಂದ ಜನರ ನೋವು ಆಲಿಸುವುದನ್ನು, ಜನರು ಬದಲಾವಣೆ ಆಗುವದನ್ನು ನಾನು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಾಣುತ್ತಿದ್ದೇನೆ ಎಂದರು. ಈ ಗ್ರಾಮವಾಸ್ತವ್ಯ ಕಾರ್ಯಕ್ರಮದಿಂದ ಜನಸಾಮಾನ್ಯರಿಗೆ ಸ್ಪಂದಿಸುವಂತಹ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.
ಜನತಾದರ್ಶನದಲ್ಲಿ ಹಾಗೂ ಅಹವಾಲು ಆಲಿಕೆಯಲ್ಲಿ ಅರ್ಜಿ ಸಲ್ಲಿಸಿದ ಜನರ ನೋವುಗಳಿಗೆ ಸ್ಪಂದಿಸಬೇಕಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಚರ್ಚಿಸುವುದು ನಮ್ಮ ಕರ್ತವ್ಯವಾಗಿದೆ. ಈ ಗ್ರಾಮವಾಸ್ತವ್ಯ ಕಾರ್ಯಕ್ರಮ ರೂಪಿಸುವ ಮೂಲಕ ಸರ್ಕಾರವು ಒಂದು ಹೆಜ್ಜೆ ಮುಂದೆ ಹೋಗಿದೆ ಎಂದು ತಿಳಿಸಿದರು.
ಯಾದಗಿರಿ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳಲ್ಲಿ ಮಾಡಿದ ಗ್ರಾಮವಾಸ್ತವ್ಯದಲ್ಲಿ ಬಂದ ಮನವಿಗಳ ಪೈಕಿ ಆಯಾ ಪ್ರದೇಶಗಳ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದ ಅರ್ಜಿಗಳು ಕೆಲವು ಇವೆ. ಸಾವಿರಾರು ಜನರು ಕುಟುಂಬದಲ್ಲಿರುವ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಈ ಬಗ್ಗೆ ನಾವು ಗಮನ ಕೊಡುತ್ತೇವೆ ಎಂದು ವಿವರಿಸಿದರು.
ಈ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಸಿಎಂ ಕಚೇರಿಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವರ್ಗವು ತಾಯಿ ಹೃದಯದಿಂದ ಕೆಲಸ ಮಾಡಿರುವುದು ಕೂಡ ನಮ್ಮ ಬಲವಾಗಿದೆ. ಇಲ್ಲಿ ಅರ್ಜಿ ಸಲ್ಲಿಸಿದವರಿಗೆ ಸಿಎಂ ಕಚೇರಿಯಿಂದ ನೇರವಾಗಿ ಸೌಕರ್ಯ ಸಿಗಲಿದೆ ಎಂದು ತಿಳಿಸಿದರು.
2006ರಲ್ಲಿ ಇಷ್ಟು ದೊಡ್ಡಮಟ್ಟದ ಗ್ರಾಮವಾಸ್ತವ್ಯ ನಡೆದಿರಲಿಲ್ಲ. ಈ ಹಿಂದೆ ನಾವು ಹಳ್ಳಿಗೆ ಹೋಗೋದೇ ರಾತ್ರಿ 1 ಗಂಟೆಯಾಗುತ್ತಿತ್ತು. ಬರೀ ಅಧಿಕಾರಿಗಳೇ ಅರ್ಜಿ ಪಡೆಯುತ್ತಿದ್ದರು. ಈ ಹಿಂದೆ ನಡೆದ ಗ್ರಾಮವಾಸ್ತವ್ಯ ವೇಳೆ ಪರಿಹಾರ ಪಡೆದುಕೊಂಡವರು ಅದನ್ನು ಈಗಲೂ ನೆನಪಿಸುವುದು ಈಗ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮದ ವೇಳೆ ಗೊತ್ತಾಗಿದೆ ಎಂದು ಅವರು ತಿಳಿಸಿದರು.
ಈ ವೇಳೆ ಸಚಿವರಾದ ಬಂಡೆಪ್ಪ ಖಾಶೆಂಪೂರ, ರಾಜಶೇಖರ ಪಾಟೀಲ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ನಾರಾಯಣರಾವ್ ಹಾಗೂ ಇನ್ನೀತರ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.