ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ನೂತನ ಶಾಸಕ ಸಲಗರ್
Team Udayavani, May 11, 2021, 10:17 AM IST
ಬಸವಕಲ್ಯಾಣ: ಶಾಸಕರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ತೆರಳಿದ್ದ ಶಾಸಕ ಶರಣು ಸಲಗರ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಶ್ರಮಿಸಿದ ಸಿಎಂಗೆ ಶಾಸಕ ಶರಣು ಸಲಗರ ಸಿಎಂ ಕಾಲಿಗೆ ನಮಸ್ಕರಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣಕ್ಕೆ ಪ್ರಥಮಾದ್ಯತೆ ನೀಡಲಾಗಿದ್ದು, ಸೋಂಕು ಹರಡುವಿಕೆ ತಡೆಗೆ ವೈದ್ಯರ ತಂಡ, ತಾಲೂಕು ಮಟ್ಟದ ಅಧಿ ಕಾರಿಗಳ ಜತೆ ಸರಣಿ ಸಭೆ ನಡೆಸಲಾಗಿದೆ.
ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದ್ದು, ಆಮ್ಲಜನಕದ ಕೊರತೆ ನೀಗಿಸಲು ಆಕ್ಸಿಜನ್ ಸಿಲಿಂಡರ್ ಪೂರೈಕೆ ವ್ಯವಸ್ಥೆ ಮಾಡಲಾಗಿದೆ ಎಂದು ಸಿಎಂಗೆ ಮಾಹಿತಿ ನೀಡಿದರು. ನಂತರ ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ವಿ. ಸೋಮಣ್ಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಕ್ಷದ ಮುಖಂಡರನ್ನೂ ಭೇಟಿ ಮಾಡಿದ ಸಲಗರ ಸನ್ಮಾನಿಸುವ ಮೂಲಕ ಧನ್ಯವಾದ ತಿಳಿಸಿದರು. ಸಚಿವ ಪ್ರಭು ಚವ್ಹಾಣ, ಸಂಸದ ಭಗವಂತ ಖೂಬಾ, ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಡಿ.ಕೆ. ಸಿದ್ರಾಮ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.