ಗುತ್ತಿಗೆ ನೌಕರರಿಗಿಲ್ಲ 4 ತಿಂಗಳ ವೇತನ
Team Udayavani, Mar 28, 2022, 6:16 PM IST
ಹುಮನಾಬಾದ: ಪಟ್ಟಣದ ಎಪಿಎಂಸಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ನಾಲ್ಕು ಜನ ಗುತ್ತಿಗೆ ನೌಕರರಿಗೆ ಕಳೆದ ನಾಲ್ಕು ತಿಂಗಳಿಂದ ಸಂಬಳ ಇಲ್ಲ. ಅಲ್ಲದೆ, ಏಪ್ರಿಲ್ 2020ರಿಂದ ಈವರೆಗೆ ಇಪಿಎಫ್, ಇಎಸ್‌ಐ ಪಾವತಿಯಾಗಿಲ್ಲ.
ಪಟ್ಟಣದ ಕೃಷಿ ಉತ್ಪನ ಮಾರುಕಟ್ಟೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ, ಡಾಟಾ ಎಂಟ್ರಿ, ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಕ್ಕೆ ಎಪಿಎಂಸಿ ಕಚೇರಿ ಟೆಂಡರ್ ಕರೆದು ರಾಯಚೂರ ಮೂಲದ ಸಿದ್ದೇಶ್ವರ ಸೆಕ್ಯೂರಿಟಿ ಸರ್ವಿಸ್‌ನೊಂದಿಗೆ ಒಪ್ಪಂದ ಕರಾರು ಮಾಡಿಕೊಂಡಿತ್ತು. ಆದರೆ, ಗುತ್ತಿಗೆ ಪಡೆದ ಸಂಸ್ಥೆಯವರು ಇಲ್ಲಿನ ಸಿಬ್ಬಂದಿಗಳಿಗೆ ಸೂಕ್ತ ಸಮಯಕ್ಕೆ ಸಂಬಳ ಹಾಗೂ ಇಪಿಎಫ್, ಇಎಸ್‌ಐ ಮಾತ್ರ ಪಾವತಿ ಮಾಡುತ್ತಿಲ್ಲ. ಸಂಬಳ ದೊರೆಯದ ಕಾರಣ ಅನೇಕ ಸಂಕಷ್ಟಗಳು ಎದುರಿಸುತ್ತಿರುವುದಾಗಿ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ.
ಪೂರ್ಣ ಸಂಬಳ ಇಲ್ಲ
ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಗುತ್ತಿಗೆ ಪಡೆದ ಸಂಸ್ಥೆಯವರು ಸಿಬ್ಬಂದಿಗೆ ಪೂರ್ಣ ಪ್ರಮಾಣದ ಸಂಬಳ ಪಾವತಿ ಮಾಡುತ್ತಿಲ್ಲ ಎಂದು ಸಿಬ್ಬಂದಿ ದೂರುತ್ತಿದ್ದಾರೆ. ಸರಾಸರಿ ಶೇ.60ರಿಂದ ಶೇ.65ರಷ್ಟು ಮಾತ್ರ ಸಂಬಳ ಪಾವತಿ ಮಾಡಲಾಗುತ್ತಿದೆ ಎಂದು ಸಿಬ್ಬಂದಿ ಆರೋಪಿಸುತ್ತಿದ್ದಾರೆ. ಹೊಟ್ಟೆಪಾಡಿಗಾಗಿ ದುಡಿಯುವರ ಸಂಬಳದಲ್ಲೂ ಕಡಿತಗೊಳಿಸುವುದು ಎಷ್ಟು ಸೂಕ್ತ ಎಂದು ಹೆಸರು ಹೇಳಲಿಚ್ಚಿಸದ ಸಿಬ್ಬಂದಿ ನೋವು ತೋಡಿಕೊಂಡಿದ್ದಾರೆ.
ನೋಟಿಸ್ ಜಾರಿ
ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಸೂಕ್ತ ಸಂಬಳ, ಇಪಿಎಫ್, ಇಎಸ್‌ಐ ಪಾವತಿ ಕುರಿತು ಕಚೇರಿ ಕಾರ್ಯದರ್ಶಿಗಳು ಅನೇಕ ನೋಟಿಸ್ ಜಾರಿ ಮಾಡಿದರು ಕೂಡ ಗುತ್ತಿಗೆ ಪಡೆದ ಸಂಸ್ಥೆ ಮಾತ್ರ ಅಧಿಕಾರಿಗಳ ಪತ್ರಕ್ಕೆ ಸೂಕ್ತ ಉತ್ತರ ನೀಡುತ್ತಿಲ್ಲ ಎಂಬುವುದು ತಿಳಿದುಬಂದಿದೆ.
ಕಳೆದ ವರ್ಷ 14-07-2021ರಂದು ಎಪಿಎಂಸಿ ಕಾರ್ಯದರ್ಶಿ ಅವರು ಕಾನೂನು ಕ್ರಮ ಕೈಗೊಳ್ಳುವ ಹಾಗೂ ಸಿಬ್ಬಂದಿಗಳ ಇಪಿಎಫ್, ಇಎಸ್‌ಐ ಹಾಗೂ ಜಿಎಸ್‌ಟಿ ಹಣ ಪಾವತಿ ಮಾಡುವಂತೆ ಎಚ್ಚರಿಕೆ ನೋಟಿಸ್ ಜಾರಿ ಮಾಡಿದರು. ಏಪ್ರಿಲ್ 2020 ರಿಂದ ಜೂನ್ 2021ರ ವರೆಗಿನ ಒಟ್ಟಾರೆ, ಇಪಿಎಫ್ ಸುಮಾರು, 1.35 ಲಕ್ಷ ಹಾಗೂ ಇಎಸ್‌ಐ ಸುಮಾರು 35 ಸಾವಿರ ಸಿಬ್ಬಂದಿ ಖಾತೆಗೆ ಜಮಾ ಆಗಿಲ್ಲ. ಅಲ್ಲದೆ, ಜೂನ್ 2021 ರಿಂದ ಮಾ.2022ರ ವರೆಗೂ ಇಪಿಎಫ್, ಇಎಸ್‌ಐ ಪಾವತಿಯಾಗಿಲ್ಲ.
ಎಪಿಎಂಸಿ ಗುತ್ತಿಗೆ ಸಿಬ್ಬಂದಿಗಳ ಸಂಬಳ ಪಾವತಿಗೆ ಗುತ್ತಿಗೆ ಪಡೆದ ಸಂಸ್ಥೆಗೆ ಚೆಕ್ ಮೂಲಕ ಹಣ ಪಾವತಿ ಮಾಡಲಾಗುತ್ತದೆ. ಗುತ್ತಿಗೆ ಪಡೆದ ಸಂಸ್ಥೆಯು ಆಯಾ ಸಿಬ್ಬಂದಿ ಖಾತೆಗೆ ಸಂಬಳ ಹಾಗೂ ಇಪಿಎಫ್, ಇಎಸ್‌ಐ ಹಾಗೂ ಜಿಎಸ್‌ಟಿ ಹಣ ಪಾವತಿ ಮಾಡಬೇಕಾಗುತ್ತದೆ. ಈ ಹಿಂದಿನ ಕಾರ್ಯದರ್ಶಿಗಳು ನೋಟಿಸ್ ನೀಡಿ ಎಚ್ಚರಿಸುವ ಕೆಲಸ ಮಾಡಿದ್ದು, ಇದೀಗ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ಈ ಕುರಿತು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಕ್ತ ವರದಿ ಸಲ್ಲಿಸಲಾಗುವುದು. ಹೊಸ ಟೆಂಡರ್ ಕರೆದು ಬೇರೆ ಸಂಸ್ಥೆಗೆ ಗುತ್ತಿಗೆ ನೀಡಲಾಗುವುದು. -ಅನಿಲಕುಮಾರ ಹಾದಿಮನಿ, ಎಪಿಎಂಸಿ ಪ್ರಭಾರ ಕಾರ್ಯದರ್ಶಿ
-ದುರ್ಯೋಧನ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ
Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.