ಬಂದೇನವಾಜ್‌ವಾಡಿಗಿಲ್ಲ ಬಸ್‌


Team Udayavani, Jan 17, 2019, 8:12 AM IST

bid-4.jpg

ಬಸವಕಲ್ಯಾಣ: ದೇಶಕ್ಕೆ ಸ್ವಾತಂತ್ರ್ಯ ದೊರಕಿ ಏಳು ದಶಕ ಕಳೆದರೂ ಮುಡಬಿ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿರುವ ಬಂದೇನವಾಜ್‌ವಾಡಿ ಗ್ರಾಮ ಬಸ್‌ ಸಂಚಾರ ಸೌಲಭ್ಯ ಕಂಡಿಲ್ಲ. ಹಾಗಾಗಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ.

ಮುಡಬಿ ರಸ್ತೆ ಮಧ್ಯದಿಂದ 1.5 ಕಿ.ಮೀ. ಒಳಗಡೆ ಇರುವ ಬಂದೇನವಾಜ್‌ವಾಡಿ ಗ್ರಾಮ ಯರಂಡಗಿ ಗ್ರಾಪಂ ವ್ಯಾಪ್ತಿಗೆ ಒಳಪಟ್ಟಿದೆ. ಒಂದು ಸಾವಿರ ಜನಸಂಖ್ಯೆಯುಳ್ಳ ಗ್ರಾಮ ಇದಾಗಿದೆ. ಆದರೆ ಇಂದಿಗೂ ಬಸ್‌ ಸೌಕರ್ಯ ಇಲ್ಲದ ಕಾರಣ ಗ್ರಾಮಸ್ಥರು ಒಂದು ಕಿ.ಮೀ. ನಡೆದುಕೊಂಡು ಸಂಚರಿಸಬೇಕಾಗಿರುವುದು ಆಕ್ರೋಷಕ್ಕೆ ಕಾರಣವಾಗಿದೆ.

ನಗರ ಅನತಿ ದೂರದಲ್ಲಿರುವ ಈ ಗ್ರಾಮದಿಂದ ಕೆಲಸಕ್ಕೆಂದು ನಿತ್ಯ ನಗರಕ್ಕೆ ಬರುವ ಕಾರ್ಮಿಕರು ಬೈಕ್‌, ಆಟೋ ಮತ್ತು ಖಾಸಗಿ ವಾಹನಗಳನ್ನು ಅವಲಂಬಿಸಬೇಕಾಗಿದೆ. ವಿದ್ಯಾರ್ಥಿಗಳು ಮತ್ತು ಮಹಿಳೆಯರು ಗ್ರಾಮದಿಂದ ಮುಡಬಿ ಮುಖ್ಯ ರಸ್ತೆ ವರೆಗೆ ನಡೆದುಕೊಂಡು ಬಸ್‌ ಹತ್ತಿ ಶಾಲಾ-ಕಾಲೇಜಿಗೆ ಹೋಗುವುದು ಹಲವು ವರ್ಷಗಳ ಕಾಯಕವಾಗಿದೆ.

ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಒಂದು ಸಾರಿಯೂ ಡಾಂಬರೀಕರಣ ಕಂಡಿಲ್ಲ. ರಸ್ತೆಯಲ್ಲಿ ತಗ್ಗು-ಗುಂಡಿಗಳು ಬಿದ್ದು, ಜಲ್ಲಿಕಲ್ಲುಗಳು ಎದ್ದಿವೆ. ಇದರಿಂದ ರಾತ್ರಿ ಸಮಯದಲ್ಲಿ ಅವಘಡಗಳು ಸಂಭವಿಸುತ್ತವೆ. 8 ಗಂಟೆ ನಂತರ ಈ ರಸ್ತೆಯಲ್ಲಿ ಜನರು ಭಯದಲ್ಲೇ ಸಂಚರಿಸಬೇಕಾಗಿದೆ ಎಂದು ಗ್ರಾಮದ ಯುವಕ ಮಾಹಿತಿ ನೀಡಿದರು.

ಗ್ರಾಮಸ್ಥರ ಅನುಕೂಲಕ್ಕಾಗಿ ಮುಡಬಿ ರಸ್ತೆಯಲ್ಲಿ ನಿರ್ಮಿಸಲಾದ ಬಸ್‌ ನಿಲ್ದಾಣ ಬಿದ್ದು ಹೋಗಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ವೃದ್ಧರು ನಿತ್ಯ ರಸ್ತೆ ಪಕ್ಕದಲ್ಲಿ ನಿಂತು ಬಸ್‌ಗಾಗಿ ಕಾಯುವಂತಾಗಿದೆ. ಆದರೂ, ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಗ್ರಾಮಕ್ಕೆ ಒಂದು ಬಸ್‌ ಸೌಕರ್ಯ ಕಲ್ಪಿಸಿಲ್ಲ ಎಂದು ಅಧಿಕಾರಿಗಳ ವಿರುದ್ಧ ಹಿಡಿ ಶಾಪ ಹಾಕಿದರು.

ಒಂದು ವೇಳೆ ರಾತ್ರಿ ಸಮಯದಲ್ಲಿ ಏನಾದರೂ ಅವಘಡಗಳು ಸಂಭವಿಸಿದರೆ ದೇವರೇ ಗತಿ ಎಂಬಂತಿ ಇಲ್ಲಿನ ಸ್ಥಿತಿ. ಆದ್ದರಿಂದ ಬೆಳಗ್ಗೆ ಮಧ್ಯಾಹ್ನ ಮತ್ತು ರಾತ್ರಿ ಸಮಯದಲ್ಲಿ ಬಸ್‌ ಸಂಚಾರಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬುವುದು ಗ್ರಾಮಸ್ಥರ ಒತ್ತಾಯವಾಗಿದೆ.

ಬಸವಕಲ್ಯಾಣ: ಬಂದೇನವಾಜ್‌ವಾಡಿ ಗ್ರಾಮದ ಹದಗೆಟ್ಟ ರಸ್ತೆ. ಗ್ರಾಸ್ಥರಿಗಾಗಿ ನಿರ್ಮಿಸಲಾದ ಬಸ್‌ ತಂಗುದಾಣ ಕಟ್ಟಡ ಪಾಳು ಬಿದ್ದಿದೆ. (ಬಲಚಿತ್ರ).

ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.