ಚಿಕಿತ್ಸೆ ನೀಡುವಲ್ಲಿ ವ್ಯಾಪಾರೀಕರಣ ಬೇಡ: ಖಂಡ್ರೆ


Team Udayavani, May 3, 2022, 3:26 PM IST

17treatment

ಭಾಲ್ಕಿ: ಸಾರ್ವಜನಿಕ ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ವ್ಯಾಪಾರೀಕರಣ ಮಾಡದೇ ಎಲ್ಲರಿಗೂ ಗುಣಮಟ್ಟದ ಚಿಕಿತ್ಸೆ ನೀಡಬೇಕು ಎಂದು ಶಾಸಕ ಈಶ್ವರ ಖಂಡ್ರೆ ವೈದ್ಯರಿಗೆ ಸಲಹೆ ನೀಡಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯ ಕಚೇರಿಯ ಸಹಯೋಗದಲ್ಲಿ ಹಮ್ಮಿಕೊಂಡ ತಾಲೂಕು ಮಟ್ಟದ ಆರೋಗ್ಯ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈಗಾಗಲೇ ಕೋವಿಡ್‌ ಮಹಾಮಾರಿಗೆ ಜನ ತತ್ತರಿಸಿ ಹೋಗಿದ್ದಾರೆ. ಆರೋಗ್ಯವಂತ ವ್ಯಕ್ತಿಯಿಂದ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ತಾಲೂಕಿನ ಸಾರ್ವಜನಿಕ, ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲ ವಿಧದ ರೋಗಗಳಿಗೆ ಚಿಕಿತ್ಸೆ ನೀಡುವ ಕಾರ್ಯ ನಡೆಯಬೇಕು. ಆಯುಷ್ಮಾನ್‌ ಭಾರತ ಮತ್ತು ಆರೋಗ್ಯ ಕರ್ನಾಟಕ ಸೌಲಭ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು. ಮಾಹಿತಿ ಶಿಕ್ಷಣ ಸಂವಹನ ಚಟುವಟಿಕೆಗಳು, ಆಯುಷ ಕ್ಲಿನಿಕ್‌ ಸೇವೆಗಳು, ಆರೋಗ್ಯ ಶಿಕ್ಷಣ ಮತ್ತು ಆಹಾರ ಸಮಾಲೋಚನೆ ಪರಿಣತರಿಂದ ನಿರಂತರ ನಡೆಯಬೇಕು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ತಮ್ಮ ಕರ್ತವ್ಯಗಳನ್ನು ಆಸಕ್ತಿಯಿಂದ ನಿರ್ವಹಿಸಿ ಎಲ್ಲರಿಗೂ ಆರೋಗ್ಯ ಮತ್ತು ಎಲ್ಲೆಡೆಯೂ ಆರೋಗ್ಯ ದೊರಕುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಆರೋಗ್ಯ ಮೇಳದಲ್ಲಿ 117 ಶುಗರ್‌, 435 ಬಿಪಿ, 218 ಚಿಕ್ಕ ಮಕ್ಕಳಿಗೆ ತಪಾಸಣೆ ನಡೆಸಲಾಯಿತು. 195 ರೋಗಿಗಳಿಗೆ ಮಾಹಿತಿ ಸಂವಹನ ಮೂಲಕ ಚಿಕಿತ್ಸೆ ನೀಡಿ, ಒಟ್ಟು 1850 ಜನರು ವಿವಿಧ ಕಾಯಿಲೆಗಳಿಗೆ ಸಂಬಂಧಿಸಿದಂತೆ ತಪಾಸಣೆ ಮಾಡಿಕೊಂಡರು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ| ಜ್ಞಾನೇಶ್ವರ ನಿರಗುಡೆ ಮಾಹಿತಿ ನೀಡಿದರು.

ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ತಹಶೀಲ್ದಾರ್‌ ಕೀರ್ತಿ ಚಾಲಕ, ಸಿಎಂಒ ಡಾ| ಅಬ್ದುಲ ಖಾದರ್‌, ಡಾ| ದೇವಕಿ ಖಂಡ್ರೆ, ಡಾ| ನಿತೀನ ಪಾಟೀಲ್‌, ಡಾ| ಶಶಿಕಾಂತ ಭೂರೆ, ಡಾ| ವಿಕ್ರಮ ದೇವಪ್ಪ, ಡಾ| ಜೀಬಾ, ಡಾ| ಪ್ರವೀಣ, ಡಾ| ಸುಶಿಲ, ಡಾ| ಸಂಗಮೇಶ, ಡಾ| ಲೋಕೇಶ, ಡಾ| ಮಮತಾ, ಡಾ| ಶಿವುಕುಮಾರ, ಡಾ| ಶೇಷನಾಗ, ಡಾ| ರಂಗನಾಥ, ಡಾ| ಗುರುರಾಜ ಮತ್ತು ಸಿಡಿಪಿಒ ಮಂಗಲಾ ಉಮರಗೆ ಇದ್ದರು.

ಶೀಘ್ರ ತಾಯಿ-ಮಗು ಆಸ್ಪತ್ರೆ 

ಭಾಲ್ಕಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಿ-ಮಗು ಆಸ್ಪತ್ರೆ ತೆರೆಯಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲಿ ಸಕಲ ಸೌಲಭ್ಯವುಳ್ಳ ತಾಯಿ-ಮಗು ಆಸ್ಪತ್ರೆ ಆರಂಭಿಸಲಾಗುವುದು. ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉಚಿತವಾಗಿ ಔಷಧಗಳನ್ನು ವಿತರಿಸಬೇಕು. ಔಷಧದ ಅಭಾವ ಎಂದು ರೋಗಿಗಳಿಗೆ ಬೇರೆಡೆ ಕಳುಹಿಸಬಾರದು. ಪ್ರಸ್ತುತವಾಗಿ ಸ್ತ್ರೀ ರೋಗತಜ್ಞೆ, ಆರ್ಥೋ, ಹೃದಯ ತಜ್ಞ ಸೇರಿದಂತೆ ಎಲ್ಲ ವೈದ್ಯಕೀಯ ಪರಿಣಿತರನ್ನು ನೇಮಿಸಲಾಗಿದೆ. ಗ್ರಾಮೀಣ ಭಾಗದ ಜನರು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರಿ ವೈದ್ಯಕೀಯ ಸೌಲಭ್ಯಗಳು ಸಕಲರಿಗೂ ದೊರೆಯಬೇಕು. -ಈಶ್ವರ ಖಂಡ್ರೆ, ಶಾಸಕ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.