ಸೊಂಪುರ ಗೊಲ್ಲರಹಟ್ಟಿಗೆ ವರ್ಷದಿಂದ ಕರೆಂಟ್ ಇಲ್ಲ!
Team Udayavani, Jun 5, 2022, 5:44 PM IST
ಮುದಗಲ್ಲ: ತಲೇಖಾನ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಸೊಂಪುರ ಗೊಲ್ಲರಹಟ್ಟಿಯ ಜನರು ಸುಮಾರು ಒಂದು ವರ್ಷದಿಂದ ಕತ್ತಲಲ್ಲಿಯೇ ಕಾಲ ಕಳೆಯುವುದರ ಜತೆಗೆ ನೀರಿಗೂ ಹಾಹಾಕಾರ ಅನುಭವಿಸುವಂತಾಗಿದೆ.
ಇನ್ನು ಈ ಗ್ರಾಮದಲ್ಲಿ ಸರಿಯಾದ ರಸ್ತೆ, ಶಿಕ್ಷಣ ಸೌಲಭ್ಯವಿಲ್ಲದ ಕಾರಣ ಇಲ್ಲಿನ ಜನರು ಆದಿವಾಸಿಗಳಂತೆ ಬದುಕು ನಡೆಸುತ್ತಿದ್ದಾರೆ. ಹೆಚ್ಚಾಗಿ ಕುರಿ, ದನಗಾಯಿಗಳು ವಾಸಿಸುವ ಈ ಪ್ರದೇಶದಲ್ಲಿ ಸುಮಾರು ದಿನಗಳಿಂದ ನಿರಂತರ ಜ್ಯೋತಿ ಯೋಜನೆಯಿಂದ ವಂಚಿತವಾಗಿರುವ ಹಟ್ಟಿಗೆ 2013-14ನೇ ಸಾಲಿನ ಜಿಪಂನ ಸುಮಾರು 10 ಲಕ್ಷ ರೂ. ಅನುದಾನದಲ್ಲಿ ಗುತ್ತಿಗೆದಾರರು ಕೊಳವೆ ಬಾವಿ ಕೊರೆಸಿ ವಿದ್ಯುತ್ ಪರಿವರ್ತಕ ಅಳವಡಿಸುವ ಮೂಲಕ ಕಿರುನೀರು ಸರಬರಾಜು ಯೋಜನೆ ನೀಡಿತ್ತು. ಆದರೆ, 2021-22ರಲ್ಲಿ ನಿರಂತರ ಜ್ಯೋತಿ ಯೋಜನೆಯಿಂದ ಹೊರಗುಳಿದ ಗೊಲ್ಲರಹಟ್ಟಿಯ ಕುಟುಂಬಗಳು ರಾತ್ರಿಯಲ್ಲಿ ವಿದ್ಯುತ್ ದೀಪದ ವ್ಯವಸ್ಥೆ ಇಲ್ಲದೆ ಪರಿತಪ್ಪಿಸಬೇಕಾದ ಪರಸ್ಥಿತಿ ನಿರ್ಮಾಣವಾಗಿದೆ.
ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆ
ನಿತ್ಯದ ಕೆಲಸಕ್ಕೂ ವಿದ್ಯುತ್ ಇಲ್ಲದೆ ಮಹಿಳೆಯರು, ಮಕ್ಕಳು, ವಯೋವೃದ್ಧರು ಸಂಜೆ 7 ಗಂಟೆಯಾದರೆ ಮನೆಯಿಂದ ಹೊರ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ದೇವರು, ಹಬ್ಬ-ಹರಿದಿನ, ಜಾತ್ರೆ, ಮದುವೆಗಳಂತಹ ಕಾರ್ಯಗಳಿಗೆ ಜನರೇಟರ್ ಅವಲಂಬಿಸಬೇಕಾದ ಪರಿಸ್ಥಿತಿದೆ. ರಾತ್ರಿ ವೇಳೆ ಹಾವು, ಚೇಳು ಸೇರಿದಂತೆ ವಿಷ ಜಂತುಗಳ ಕಾಟ ಒಂದಡೆಯಾದರೆ, ಕಾಡು ಪ್ರಾಣಿಗಳಾದ ಕರಡಿ, ತೋಳ, ಚಿರತೆ, ಕಾಡು ಹಂದಿಗಳ ಭಯದಲ್ಲಿ ಬದುಕು ಸಾಗಿಸಬೇಕಿದೆ ಎಂದು ಗ್ರಾಮದ ದುರುಗಪ್ಪ, ಯಂಕಪ್ಪ, ಛತ್ರಪ್ಪ, ಈರಪ್ಪ ಆರೋಪಿಸಿದ್ದಾರೆ.
ತೋಟದ ಮನೆ ಯೋಜನೆಯಡಿ ಗೊಲ್ಲರ ಸಮುದಾಯದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಮಾಡುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ್ದೇನೆ. -ರಾಜಶೇಖರ ಫಗಡದಿನ್ನಿ, ಇಇ ಜೆಸ್ಕಾಂ ವಿಭಾಗ ಸಿಂಧನೂರ
ಕ್ಷೇತ್ರದಲ್ಲಿ ವಿದ್ಯುತ್ ಸಂಪರ್ಕ ರಹಿತ ಮನೆಗಳ ಸಮೀಕ್ಷೆ ನಡೆಸಿ ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. -ಆರ್.ಬಸನಗೌಡ ತುರ್ವಿಹಾಳ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.