ಸೌಲಭ್ಯ ವಂಚಿತ 27 ಖಾಸಗಿ ಶಾಲೆಗೆ ನೋಟಿಸ್‌

ಶೌಚಾಲಯ ಸೇರಿದಂತೆ ಇತರೆ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ಶಾಲೆಗಳಿಗೆ ನೋಟಿಸ್‌

Team Udayavani, Mar 25, 2021, 6:50 PM IST

School

ಹುಮನಾಬಾದ: ಚಿಟಗುಪ್ಪ ಹಾಗೂ ಹುಮನಾಬಾದ ತಾಲೂಕಿನಲ್ಲಿನ 57 ಅನುದಾನ ರಹಿತ ಖಾಸಗಿ ಶಾಲೆಗಳ ಪೈಕಿ 27 ಶಾಲೆಗಳಲ್ಲಿ ಮೂಲ ಸೌಕರ್ಯ ಕೊರತೆ ಕಂಡು ಬಂದಿದೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಮಾಹಿತಿ ಲಭ್ಯವಾಗಿದೆ. ಕಳೆದ ವರ್ಷ ಸೆಪ್ಟೆಂಬರ್‌ ತಿಂಗಳಲ್ಲಿ ಚಿಟಗುಪ್ಪ ತಾಲೂಕಿನ ಮನ್ನಾಎಖೇಳ್ಳಿ ಹತ್ತಿರದ ಶಾಲೆಗೆ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಭೇಟಿ ನೀಡಿದ ಸಂದರ್ಭದಲ್ಲಿ ತಗಡಿನ ಶೆಡ್‌ನ‌ಲ್ಲಿ ಶಾಲೆ
ನಡೆಸುತ್ತಿರುವುದು ಗಮನಿಸಿ ಶಿಕ್ಷಣ ಇಲಾಖೆ ಅ ಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು.

ತಗಡಿನ ಶೆಡ್‌ನ‌ಲ್ಲಿ ಮಕ್ಕಳು ಹೇಗೆ ಕುಳಿತು ವಿದ್ಯಾಭ್ಯಾಸ ಮಾಡಬೇಕು? ಎಂದು ಪ್ರಶ್ನಿಸಿದ್ದರು. ಯಾವ ಶಾಲೆಗಳಿಗೆ ಮೂಲ ಸೌಕರ್ಯ ಇಲ್ಲ ಎಂಬುದನ್ನು ಪಟ್ಟಿ ಮಾಡಿ ಸರ್ಕಾರಕ್ಕೆ ಮಾಹಿತಿ ನೀಡುವಂತೆ ಸೂಚಿಸಿದ್ದರು. ಅದರಂತೆ ಶಿಕ್ಷಣ ಇಲಾಖೆ ಅ ಧಿಕಾರಿಗಳು ವಿವಿಧ ಶಾಲೆಗಳಿಗೆ ಪ್ರತ್ಯೇಕವಾಗಿ ಭೇಟಿ ನೀಡಿ ಶಾಲೆಗಳಲ್ಲಿನ ಮೂಲ ಸೌಕರ್ಯ ಕುರಿತು ಮಾಹಿತಿ ಪಡೆದು, 27 ಶಾಲೆಗಳಿಗೆ  ಇದೀಗ ನೋಟಿಸ್‌ ಜಾರಿ ಮಾಡಿರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಗುಂಡಪ್ಪ ಸಿದ್ದಣಗೊಳ್ ಮಾಹಿತಿ ನೀಡಿದ್ದಾರೆ.

ಸೌಲಭ್ಯಗಳ ಕೊರತೆ: ಶಾಲೆ ಸ್ವಂತ ಕಟ್ಟಡ ಅಥವಾ ಲೀಸ್‌ ಕಟ್ಟಡದಲ್ಲಿ ಪರವಾನಗಿ ಪಡೆದು ನಡೆಸಲು ನಿಯಮವಿದೆ. ಆದರೆ, ಕೆಲ ಶಾಲಾ ಆಡಳಿತ ಮಂಡಳಿಗೆ ಯಾವುದೇ ಸ್ವಂತ ಕಟ್ಟಡವಿಲ್ಲ. ತಗಡಿನ ಶೆಡ್‌ನ‌ಲ್ಲಿ ಶಾಲೆಗಳು ನಡೆಸುತ್ತಿರುವುದು ಕಂಡು ಬಂದಿದೆ. ಶಾಲಾ ಆರಂಭವಾದ 3 ವರ್ಷದೊಳಗೆ ಅಗತ್ಯ ಸೌಕರ್ಯ ಒದಗಿಸಿಕೊಳ್ಳಬೇಕೆಂಬ ನಿಯಮ ಇದೆ. ಆದರೆ ಇಲ್ಲಿನ ಶಿಕ್ಷಣ ಸಂಸ್ಥೆಗಳು ನಿಯಮಗಳನ್ನು ಗಾಳಿಗೆ ತೂರಿ ತರಗತಿ ನಡೆಸುತ್ತಿವೆ. ಅಲ್ಲದೆ, ಒಂದೆಡೆ ಶಾಲೆ ನಡೆಸಲು ಪರವಾನಗಿ ಪಡೆದ ನಂತರ ಬೇರೆ ಕಡೆಗೆ ಸ್ಥಳಾಂತರ ಮಾಡಬೇಕಾದರೂ ನಿಯಮ ಇದೆ. ಈಗಾಗಲೇ ಕೆಲ ಶಾಲೆಗಳು ಬೇರೆ ಸ್ಥಳದಲ್ಲಿ ನಡೆಸುವ ಮೂಲಕ ಮಾನದಂಡ ಉಲ್ಲಂಘಿಸುತ್ತಿವೆ. ಶಾಲಾ ಆವರಣದಲ್ಲಿ ಆಟದ ಮೈದಾನ, ಸೂಕ್ತ ವ್ಯವಸ್ಥೆ ಹೊಂದಿದ ವರ್ಗ ಕೋಣೆಗಳು, ಸೂಕ್ತ ಪದವಿ ಹೊಂದಿದ ಶಿಕ್ಷಕರು, ಕುಡಿವ ನೀರು, ಶೌಚಾಲಯ ಸೇರಿದಂತೆ ಇತರೆ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ಶಾಲೆಗಳಿಗೆ ನೋಟಿಸ್‌ ನೀಡಲಾಗಿದೆ ಎಂದು ಅಧಿ ಕಾರಿಗಳು
ಮಾಹಿತಿ ನೀಡಿದ್ದಾರೆ.

ಶಿಕ್ಷಣ ಸಚಿವರು ಚಿಟಗುಪ್ಪ ತಾಲೂಕಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸೂಚಿಸಿದಂತೆ ಕಳೆದ ಕೆಲ ತಿಂಗಳಿಂದ ವಿವಿಧ ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗಿದೆ. ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಕಂಡು ಬಂದ ಶಾಲೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಹುಮನಾಬಾದ-ಚಿಟಗುಪ್ಪ ತಾಲೂಕಿನ 57 ಅನುದಾನ ರಹಿತ ಶಾಲೆಗಳ ಪೈಕಿ 27 ಶಾಲೆಗಳಿಗೆ ನೋಟಿಸ್‌ ನೀಡಿದ್ದು, ಅದಕ್ಕೆ ಉತ್ತರ ಬರಬೇಕಿದೆ.
ಶಿವಗುಂಡಪ್ಪ ಸಿದ್ದಣಗೊಳ್‌,
ಕ್ಷೇತ್ರ ಶಿಕ್ಷಣಾಧಿಕಾರಿ, ಹುಮನಾಬಾದ್

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.