ಎನ್‌ಆರ್‌ಬಿಸಿ ಆಧುನೀಕರಣ ಕಾಮಗಾರಿ ಕಳಪೆ: ಸಂಸದ ಗರಂ

Team Udayavani, Sep 20, 2022, 5:20 PM IST

11-work

ಲಿಂಗಸುಗೂರು: ತಾಲೂಕಿನ ಗುರುಗುಂಟಾ ಗ್ರಾಮದ ಬಳಿ ನಾರಾಯಣಪುರ ಬಲದಂಡೆ ಮುಖ್ಯ ನಾಲೆ ಹಾಗೂ 7ಎ ವಿತರಣಾ ನಾಲೆಯಲ್ಲಿ ಭೋಂಗಾ ಬಿದ್ದಿದ್ದು, ಸ್ಥಳಕ್ಕೆ ಸಂಸದ ರಾಜಾ ಅಮರೇಶ್ವರ ನಾಯಕ ಭೇಟಿ ನೀಡಿ ಅಧಿಕಾರಿಗಳ ವಿರುದ್ಧ ಗರಂ ಆದರು. ಕಾಮಗಾರಿ ಗುಣಮಟ್ಟದ ಅಸಮಾಧಾನ ವ್ಯಕ್ತಪಡಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಎಡಿಬಿ ಯೋಜನೆಯಲ್ಲಿ ಕೇಂದ್ರ ಹಾಗೂ ರಾಜ್ಯದ ತಲಾ ಶೇ.50ರಷ್ಟು ಸೇರಿದಂತೆ ಒಟ್ಟು 3800 ಕೋಟಿ ರೂ. ಅನುದಾನದಲ್ಲಿ ಎನ್‌ಆರ್‌ಬಿಸಿ ಮುಖ್ಯ ನಾಲೆಗಳ ಆಧುನೀಕರಣ ಕಾಮಗಾರಿ ಕಳೆದ ವರ್ಷದಿಂದ ನಡೆದಿದೆ. ಈಚೆಗೆ ಸುರಿದ ಮಳೆನೀರು ನಾಲೆಗೆ ಹರಿದು ಮುಖ್ಯ ನಾಲೆಯಲ್ಲಿ ಕೊರಕಲಿ ಬಿದ್ದು ರೈತರ ಜಮೀನುಗಳಿಗೆ ನಾಲೆ ನೀರು ಹರಿದು ಬೆಳೆಗಳು ನಾಶವಾಗಿವೆ. 3 ಸಾವಿರ ಕ್ಯೂಸೆಕ್‌ ನೀರು ಹರಿಯುವ ಸಾಮರ್ಥ್ಯದ ಮುಖ್ಯ ನಾಲೆಯಲ್ಲಿ ಸದ್ಯಕ್ಕೆ 1200 ಕ್ಯೂಸೆಕ್‌ ನೀರು ಹರಿಸಲಾಗುತ್ತಿದೆ. ಮಳೆನೀರಿಗೆ ನಾಲೆಯಲ್ಲಿ ಬಿರುಕು ಕಂಡಿದೆ ಎಂದರೆ ಕಾಮಗಾರಿ ಎಷ್ಟರಮಟ್ಟಿಗೆ ಗುಣಮಟ್ಟದಿಂದ ಕೂಡಿದೆ ಎಂಬುದು ಅನುಮಾನಕ್ಕೆ ಕಾರಣವಾಗಿದೆ. 20 ವರ್ಷದ ವರೆಗೆ ನಾಲೆ ಬಾಳಿಕೆ ಬರಬೇಕು. ಆದರೆ ಕಾಮಗಾರಿ ಮುಗಿದು ಕೆಲವೇ ತಿಂಗಳಲ್ಲಿ ದುಸ್ಥಿತಿಗೆ ಕಾರಣವಾಗಿದೆ. ಈ ಬಗ್ಗೆ ಈಗಾಗಲೇ ಸಿಎಂ ಹಾಗೂ ಜಲಸಂಪನ್ಮೂಲ ಸಚಿವರ ಗಮನಕ್ಕೆ ತರಲಾಗಿದೆ. ಆದರೂ ಮತ್ತೆ ಇದೇ ರೀತಿ ಕಾಮಗಾರಿ ಮುಂದುವರಿದರೆ ಕೇಂದ್ರ ಜಲಸಂಪನ್ಮೂಲ ಸಚಿವರಿಗೆ ದೂರು ನೀಡಿ ಅವರನ್ನು ಇಲ್ಲಿಗೆ ಕರೆದುಕೊಂಡು ಕಾಮಗಾರಿ ಪರಿಶೀಲನೆ ನಡೆಸಲಾಗುವುದು ಎಂದರು.

ಎನ್‌ಆರ್‌ಬಿಸಿ ಆಧುನೀಕರ ಹಾಗೂ ನಂದವಾಡಗಿ ಯೋಜನೆ 6 ಸಾವಿರ ಕೋಟಿ ರೂ. ಅನುದಾನದಲ್ಲಿ ಕಾಮಗಾರಿ ನಡೆಯುತ್ತಿದ್ದರೂ ಇದಕ್ಕಾಗಿ ಸರ್ಕಾರದ ಅಧಿಕೃತ ಭೂಮಿಪೂಜೆ ಕಾರ್ಯಕ್ರಮ ನಡೆದಿಲ್ಲ. ಇದರಿಂದ ದೊಡ್ಡ ಮೊತ್ತ ಅನುದಾನದಲ್ಲಿ ಕಾಮಗಾರಿ ನಡೆಯುತ್ತಿದ್ದರೂ ಸಾರ್ವಜನಿಕರಿಗೆ ಯಾವುದೇ ಮಾಹಿತಿ ಇರದ ಕಾರಣ ಇದೊಂದು ಖಾಸಗಿ ಕಾಮಗಾರಿಯಂತೆ ಆಗಿದೆ. ಇದರಿಂದ ಗುತ್ತಿಗೆದಾರರಿಗೆ ಯಾವುದೇ ಭಯ ಇಲ್ಲದಂತಾಗಿದೆ. ಸರ್ಕಾರದಿಂದ ಭೂಮಿಪೂಜೆ ಕಾರ್ಯಕ್ರಮ ಆಯೋಜನೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಈ ವೇಳೆ ನಾರಾಯಣಪುರ ವೃತ್ತದ ಅಧೀಕ್ಷಕ ಅಭಿಯಂತರ ಸಂಜೀವ ಹುಲಕಾಯಿ, ಸಹಾಯಕ ಆಯುಕ್ತ ರಾಹುಲ್‌ ಸಂಕನೂರು, ಕಾರ್ಯನಿರ್ವಾಹಕ ಅಭಿಯಂತರ ಶಂಕರ ಕಿಮಾವತ್‌, ಎಇಇಗಳಾದ ಮಲ್ಲಿಕಾರ್ಜುನ, ಆರ್‌.ಡಿ. ಬಿರಾದರ, ವಿದ್ಯಾಧರ, ಶಿವಕುಮಾರ, ಬೈಲಪ್ಪ, ಮುಖಂಡರಾದ ರಾಜಾ ಸೋಮನಾಥ ನಾಯಕ, ಮೌನೇಶ ನಾಯಕ ಹಾಗೂ ರೈತರು ಇದ್ದರು.

ಟಾಪ್ ನ್ಯೂಸ್

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ABV-Modi

A.B.Vajpayee Birth Century: ಭವಿಷ್ಯದ ಭಾರತಕ್ಕೆ ಅಟಲ್‌ ಬಿಹಾರಿ ವಾಜಪೇಯಿ ಭದ್ರ ಬುನಾದಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.