ವಿರೋಧಿಸಿದ್ದ ಬಿಜೆಪಿಯಿಂದಲೇ ತೈಲ ಬೆಲೆ ಏರಿಕೆ: ಮಹಾದೇವಪ್ಪ
ದೇಶದ ಸ್ಥಿತಿ ಅಧೋಗತಿಗೆ ಹೋಗುವ ದಿನಗಳು ದೂರವಿಲ್ಲ ಎಂದು ಹೇಳಿದರು.
Team Udayavani, Aug 3, 2021, 5:58 PM IST
ಬೀದರ: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಇದ್ದಾಗ ತೈಲ ಬೆಲೆ ಏರಿಕೆ ವಿರೋಧಿ ಸಿದ್ದ ಬಿಜೆಪಿ ಈಗ ತನ್ನದೇ ಆಡಳಿತದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ನಿರಂತರ ಏರಿಕೆ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಟೀಕಿಸಿದರು.
ನಗರದ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಸೋಮವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬಿಜೆಪಿ ಅಧಿಕಾರವಧಿಯಲ್ಲಿ ಈವರೆಗೆ 43 ಬಾರಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಿಸಿದೆ. ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರ ಬದುಕು ಕಷ್ಟಕರವಾಗಿದೆ. ಪ್ರಧಾನಿ ಮೋದಿ ಅವರು ಅಧಿಕಾರಿಗಳು ಹಾಗೂ ಕೆಲವೇ ಜನರ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ. ದೇಶದ ಸ್ಥಿತಿ ಅಧೋಗತಿಗೆ ಹೋಗುವ ದಿನಗಳು ದೂರವಿಲ್ಲ ಎಂದು ಹೇಳಿದರು.ಕಾರ್ಯಕರ್ತರು ಪಕ್ಷ ಸಂಘಟನೆ ಗಟ್ಟಿಗೊಳಿಸಲು ಪ್ರಯತ್ನಿಸಬೇಕು.
ಬರುವ ಜಿಪಂ-ತಾಪಂ ಹಾಗೂ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಬೇಕೆಂದು ಸಲಹೆ ನೀಡಿದರು. ಕೆಪಿಸಿಸಿ ಸ್ವತ್ತುಗಳ ಸಮಿತಿ ಸದಸ್ಯ ರಾಜಶೇಖರ ಪಾಟೀಲ ಅಷ್ಟೂರ, ಮಾಜಿ ಕಾರ್ಯದರ್ಶಿ ಅಮೃತರಾವ್ ಚಿಮಕೊಡೆ, ಜಿಪಂ ಮಾಜಿ ಸದಸ್ಯ ಶಿವರಾಜ ಹಾಸನಕರ್ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು.
ಈ ವೇಳೆ ಮುಖಂಡರಾದ ಶಂಕರರಾವ್ ದೊಡ್ಡಿ, ಅಬ್ದುಲ್ ಮನ್ನಾನ್ ಸೇಠ್, ನಿಸಾರ್ ಅಹಮ್ಮದ್, ಸಂಜಕುಮಾರ ಡಿ.ಕೆ., ಸಂಜಯ ಜಾಗಿರದಾರ್, ವಿದ್ಯಾಸಾಗರ್ ಸಿಂಧೆ, ಪ್ರಶಾಂತ ದೊಡ್ಡಿ, ಮೋಹನ್ ಕಾಳೇಕರ್, ಜಾರ್ಜ್ ಫರ್ನಾಂಡೀಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.