![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 2, 2019, 2:31 PM IST
ಭಾಲ್ಕಿ: ಮೆಹಕರ್ ಗ್ರಾಮದಲ್ಲಿನ ನೂತನ ಸರಕಾರಿ ಪ್ರೌಢಶಾಲೆ ಕಟ್ಟಡವನ್ನು ಶಾಸಕ ಈಶ್ವರ ಖಂಡ್ರೆ ಉದ್ಘಾಟಿಸಿದರು.
ಭಾಲ್ಕಿ: ತಾಲೂಕಿನ ಗಡಿ ಭಾಗದ ಮೆಹಕರ್ ಗ್ರಾಮದಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯೋಜನೆಯಡಿ 1ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸರಕಾರಿ ಪ್ರೌಢಶಾಲೆ ಕಟ್ಟಡವನ್ನು ಶಾಸಕ ಈಶ್ವರ ಖಂಡ್ರೆ ಉದ್ಘಾಟಿಸಿ, ಪರಿಶೀಲಿಸಿದರು.
ಬಳಿಕ ಕೆಲಕಾಲ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಶಾಸಕರ ಹಲವು ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರ ಹೇಳಿ ಭೇಷ್ ಎನಿಸಿಕೊಂಡರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಾಲೆಗೆ ರಸ್ತೆ ವ್ಯವಸ್ಥೆ, ಆವರಣ ಗೋಡೆ, ಆಟದ ಮೈದಾನ ಸಮತಟ್ಟ ಮಾಡುವುದು, ಶುದ್ಧ ಕುಡಿವ ನೀರಿನ ವ್ಯವಸ್ಥೆ ಮಾಡುವುದು ಸೇರಿದಂತೆ, ಶಾಲೆಗೆ ಬಸ್‌ನಲ್ಲಿ ಬರುವಾಗ ನಿರ್ವಾಹಕ ಹಣ ಕೇಳುವುತ್ತಿರುವ ಕುರಿತು ಸಮಸ್ಯೆಗಳನ್ನು ಶಾಸಕರ ಎದುರು ತೆರೆದಿಟ್ಟರು.
ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿದ ಶಾಸಕರು, ತಕ್ಷಣ ಸಾರಿಗೆ ಘಟಕ ವ್ಯವಸ್ಥಾಪಕರಿಗೆ ದೂರವಾಣಿ ಮೂಲಕ ಮಾತನಾಡಿ, ಬಸ್‌ನ ನಿರ್ವಾಹಕರು ವಿದ್ಯಾರ್ಥಿಗಳಿಂದ ಹಣ ಪಡೆಯದಿರುವಂತೆ ಸೂಚನೆ ನೀಡಿದರು.
ರಾಷ್ಟ್ರೀಯ ಮಾಧ್ಯಮಿಕ ಯೋಜನೆಯಡಿ 1ಲಕ್ಷ ರೂ. ಅನುದಾನ ಬಳಕೆ ಮಾಡಿಕೊಂಡು ಎರಡ್ಮೂರು ದಿನಗಳಲ್ಲಿ ಶುದ್ಧ ಕುಡಿವ ನೀರಿನ ಘಟಕ ಅಳವಡಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ, ಮುಖ್ಯಶಿಕ್ಷಕರಿಗೆ ಸೂಚನೆ ನೀಡಿದರು. ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರಿಗೆ ಮಾತನಾಡಿ, ಮುಖ್ಯ ರಸ್ತೆಯಿಂದ ಶಾಲೆ ವರೆಗೂ ಮೆಟಲಿಂಗ್ ರಸ್ತೆ ಮಾಡಿಕೊಡುವಂತೆ ಶಾಸಕರು ಸೂಚನೆ ನೀಡಿದರು. ಉತ್ತಮ ಶಿಕ್ಷಣ ಪಡೆದು ಹೆತ್ತ ತಂದೆ ತಾಯಿ ಹಾಗೂ ಕಲಿತ ಶಾಲೆಗೆ ಗೌರವ ತಂದು ಕೊಡುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ತಾಪಂ ಅಧ್ಯಕ್ಷೆ ಮೀರಾ ಜನಾರ್ಧನ, ಉಪಾಧ್ಯಕ್ಷ ಮಾರುತಿರಾವ್ ಮಗರ, ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್, ಗ್ರಾಪಂ ಅಧ್ಯಕ್ಷ ಶಿವರಾಜ ತೋರಣೆ, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದನೂರ್, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಸೂರ್ಯಕಾಂತ ಪಾಟೀಲ ಸೇರಿದಂತೆ ಹಲವರು ಇದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
You seem to have an Ad Blocker on.
To continue reading, please turn it off or whitelist Udayavani.