ವಸತಿ ಯೋಜನೆ ಫಲಾನುಭವಿಗಳಿಗೆ ಆದೇಶಪತ್ರ


Team Udayavani, Jan 4, 2019, 8:39 AM IST

bid-2.jpg

ಹುಮನಾಬಾದ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ವಸತಿ ಯೋಜನೆಯಡಿ ವಸತಿ ನಿರ್ಮಾಣಕ್ಕಾಗಿ ನೀಡುತ್ತಿರುವ ಅನುದಾನ ಸದ್ಬಳಕೆ ಮಾಡಿಕೊಂಡು ನೆಮ್ಮದಿ ಜೀವನ ಸಾಗಿಸಬೇಕು ಎಂದು ಗಣಿ, ಭುವಿಜ್ಞಾನ ಖಾತೆ ಸಚಿವ ರಾಜಶೇಖರ ಪಾಟೀಲ ಸಲಹೆ ನೀಡಿದರು.

ಪಟ್ಟಣದ ಶಾಸಕರ ಕಚೇರಿ ಪ್ರಾಂಗಣದಲ್ಲಿ ಗುರುವಾರ ನಡೆದ 2017-18ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆಯಡಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅನುದಾನ, ವಸತಿ ನಿರ್ಮಾಣ ಕಾರ್ಯ ಆದೇಶಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಾಜಪೇಯಿ ನಗರ ವಸತಿ ಯೋಜನೆಯಡಿ ಪ್ರತೀ ಫಲಾನುಭವಿಗೆ ರಾಜ್ಯ ಸರ್ಕಾರದ 1.20 ಲಕ್ಷರೂ, ಕೇಂದ್ರ ಸರ್ಕಾರದ 1.50 ಲಕ್ಷ ರೂ. ಸೇರಿ 2.70 ಲಕ್ಷ ರೂ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇದನ್ನು ನಾಲ್ಕು ಹಂತಗಳಲ್ಲಿ ಬಿಡುಗಡೆ ಮಾಡುತ್ತವೆ. ಡಾ| ಬಿ.ಆರ್‌.ಅಂಬೇಡ್ಕರ್‌ ವಸತಿ ಯೋಜನೆಯಡಿ ರಾಜ್ಯ ಸರ್ಕಾರ 2ಲಕ್ಷ ರೂ. ಮತ್ತು ಕೇಂದ್ರ ಸರ್ಕಾರ 1.5 ಲಕ್ಷ ರೂ.ನಂತೆ ಒಟ್ಟು 3.5ಲಕ್ಷ ಅನುದಾನವನ್ನು ನಾಲ್ಕು ಹಂತಗಳಲ್ಲಿ ಬಿಡುಗಡೆ ಮಾಡುತ್ತವೆ ಎಂದರು. ಈ ಪೈಕಿ ಇಂದು ವಾಜಪೇಯಿ ಯೋಜನೆ 70, ಡಾ| ಅಂಬೇಡ್ಕರ್‌ ಯೋಜನೆಯಡಿ 72 ಜನ ಫಲಾನುಭವಿ ಸೇರಿ ಒಟ್ಟು 142 ಫಲಾನುಭವಿಗಳಿಗೆ ಕಾಮಗಾರಿ ಆದೇಶಪತ್ರ ವಿತರಿಸಲಾಗಿದೆ ಎಂದರು.

ವಸತಿ ಯೋಜನೆಗೆ ಸಂಬಂಧಪಟ್ಟಂತೆ ಫಲಾನುಭವಿಗಳು ಯಾವುದೇ ಕಾರಣಕ್ಕೂ ದಲ್ಲಾಳಿಗಳ ಮೊರೆ ಹೋಗದಂತೆ ಕಿವಿಮಾತು ಹೇಳಿದ ಅವರು, ಅಷ್ಟಕ್ಕೂ ಹಣ ಹೆಚ್ಚಾಗಿ ಅಂಥವರ ಮೊರೆಹೋಗಿ ಹಾನಿಗೊಳಗಾದರೆ ಅದಕ್ಕೆ ಪುರಸಭೆಯಲ್ಲಿ ಹಣ ಕೊಟ್ಟವರೆ ಹೊಣೆ ಆಗುತ್ತಾರೆ. ಬಡವರಿಗಾಗಿ ರೂಪಿಸಿದ ಈ ಯೋಜನೆ ಮಂಜೂರಾತಿಗಾಗಿ ಅಧಿಕಾರಿ, ಚುನಾಯಿತ ಪ್ರತಿನಿಧಿಗಳು ಲಂಚ ಕೇಳಿರುವ
ಕುರಿತು ಫಲಾನುಭವಿಗಳಿಂದ ಬರುವ ದೂರು ಪರಿಶೀಲಿಸಲಾಗುವುದು. ಸಾಬೀತಾದಲ್ಲಿ ಅಂಥವರು ಜೈಲು ಕಂಬಿ ಎಣಿಸಬೇಕಾದ ಪರಿಸ್ಥಿತಿ ಬಂದರೂ ಅಚ್ಚರಿ ಪಡಬೇಕಿಲ್ಲ ಎಂದರು.

ಪುರಸಭೆ ಅಧ್ಯಕ್ಷೆ ರಾಧಾ ಮಾಳಪ್ಪ, ಸದಸ್ಯರಾದ ಗುಜ್ಜಮ್ಮ ಎನ್‌.ಕನಕಟಕರ್‌, ಅಪ್ಸರಮಿಯ್ಯ, ವಿನಾಯಕ ಯಾದವ್‌, ಎಂ.ಡಿ.ಇಸ್ಮಾಯಿಲ್‌, ರಾಮು ಚವ್ಹಾಣ, ಎಂ.ಡಿ.ಆಜಮ್‌, ಕಾಂಗ್ರೆಸ್‌ ಮುಖಂಡ ಪ್ರಕಾಶ ಸೋನಕೇರಿ, ರಹಿಂಖಾನ್‌, ನಯೂಮ್‌ ಬಾಗವಾನ್‌, ಶಿವಾಜಿರಾವ್‌ ಮಚಕೂರಿ, ಸಿದ್ರಾಮ ವಾಗ್ಮಾರೆ, ಸುರೇಶ ಘಾಂಗ್ರೆ, ಅಶೋಕರಾಜ್‌ ಕಟ್ಟಿ ಇದ್ದರು.

ರಾಮಚಂದ್ರ ಚಾವರೆ ಪ್ರಾರ್ಥಿಸಿದರು. ವಸತಿ ಯೋಜನೆ ವಿಭಾಗ ಅಧಿ ಕಾರಿ ಈಶ್ವರ ತೆಲಂಗ್‌ ಸ್ವಾಗತಿಸಿದರು. ಪುರಸಭೆ ಮುಖ್ಯಾ ಧಿಕಾರಿ ಶಂಭುಲಿಂಗ ದೇಸಾಯಿ ಪ್ರಾಸ್ತಾವಿಕ ಮಾತನಾಡಿದರು. ಕರ್ನಾಟಕ ಜಾನಪದ ಪರಿಷತ್‌ ಅಧ್ಯಕ್ಷ ಶರದ್‌ ಕುಮಾರ ನಾರಾಯಣಪೇಟಕರ್‌ ನಿರೂಪಿಸಿದರು. ಜಾವಿದ್‌ ವಂದಿಸಿದರು.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.