ದೇಶಾಭಿಮಾನ ಯಾರೊಬ್ಬರ ಸ್ವತ್ತಲ್ಲ
Team Udayavani, Aug 14, 2022, 4:33 PM IST
ಭಾಲ್ಕಿ: ದೇಶಾಭಿಮಾನ, ರಾಷ್ಟ್ರಪ್ರೇಮದ ಬಗ್ಗೆ ಕೆಲವರು ನಾಟಕ ಆಡುತ್ತಿದ್ದಾರೆ. ಆದರೆ ಇದು ಯಾರೊಬ್ಬರ ಸ್ವತ್ತಲ್ಲ. ಯಾರೊಬ್ಬರಿಗೂ ಬರೆದುಕೊಟ್ಟಿಲ್ಲ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದ ಸ್ವಾತಂತ್ರ್ಯದ ಹಿಂದೆ ತ್ಯಾಗ, ಬಲಿದಾನ ಆಗಿದೆ. ರಕ್ತ ಕ್ರಾಂತಿ ಹರಿದಿದೆ. ಸಾವಿರಾರೂ ಜನ ಸೆರೆವಾಸ ಅನುಭವಿಸುತ್ತಿದ್ದಾರೆ. ಎಲ್ಲ ವರ್ಗ, ಎಲ್ಲ ಭಾಷೆ, ಪ್ರಾಂತ್ಯದ ಜನ ಸ್ವಾತಂತ್ರ್ಯಕ್ಕಾಗಿ ಹೋರಾಟ, ತ್ಯಾಗ, ಬಲಿದಾನ ಮಾಡಿದ್ದಾರೆ ಎನ್ನುವುದು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.
1885ರಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಪಕ್ಷವು ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿ ಸೇರಿದಂತೆ ಮನಮೋಹನ್ ಸಿಂಗ್ ಅವಧಿಯವರೆಗೂ ದೇಶದ ಜನರ ಅಭಿವೃದ್ಧಿಗಾಗಿ ನೂರಾರು ಯೋಜನೆಗಳನ್ನು ರೂಪಿಸಿ ದೇಶ ಕಟ್ಟುವ ಕೆಲಸವನ್ನು ಪಕ್ಷ ಮಾಡಿದೆ. ಪಂಚ ವಾರ್ಷಿಕ ಯೋಜನೆ, ವಿದೇಶಾಂಗ ನೀತಿ, ಇಂದಿರಾಗಾಂಧಿ ಅವರು ದೇಶದ ಜನರು ಬಡತನದಿಂದ ಹೊರಬರಬೇಕೆಂದು ರೂಪಿಸಿದ 20 ಅಂಶಗಳ ಕಾರ್ಯಕ್ರಮ, ರಾಜೀವ್ ಗಾಂಧಿ ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಲಬುರಗಿಯ ಶರಣು ಮೋದಿ, ಪುರಸಭೆ ಅಧ್ಯಕ್ಷ ಅನಿಲ ಸುಂಟೆ, ಉಪಾಧ್ಯಕ್ಷ ಅಶೋಕ ಗಾಯಕವಾಡ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಕಾಶ ಮಾಶೆಟ್ಟೆ, ತಾಲೂಕು ಅಧ್ಯಕ್ಷ ಹಣಮಂತರಾವ ಚವ್ಹಾಣ, ಅಶೋಕ ಸೋನಜೀ, ಮಡಿವಾಳಪ್ಪ ಮಂಗಲಗಿ, ಅಮೃತರಾವ ಚಿಮಕೋಡ್, ಶಿವರಾಜ ಹಾಸನಕರ್ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.