ಪೇಸಿಎಂ ಎಂಬುದು ಸಜ್ಜನ, ಸಾಮಾನ್ಯರ ಸಿಎಂ ಗೆ ಮಾಡುವ ಅಪಮಾನ: ಅರುಣ್ ಸಿಂಗ್
Team Udayavani, Sep 29, 2022, 12:22 PM IST
ಬೀದರ್: ಕಾಂಗ್ರೆಸ್ ನ ‘ಪೇಸಿಎಂ’ ಅಭಿಯಾನ ರಾಜ್ಯದ ಜನತೆಗೆ ಮತ್ತು ಸಜ್ಜನ, ಕಾಮನ್ ಸಿಎಂಗೆ ಮಾಡುವ ಅಪಮಾನ. ಇದಕ್ಕೆ ರಾಜ್ಯದ ಸಾಮಾನ್ಯ ಜನರು ಚುನಾವಣೆಯಲ್ಲಿ ಉತ್ತರ ನೀಡುತ್ತಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಲೇವಡಿ ಮಾಡಿದರು.
ನಗರದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸನದ್ದು ಭಾರತ್ ಜೋಡೋ ಅಲ್ಲ. ಕಾಂಗ್ರೆಸ್ ಛೋಡೋ- ಫೋಡೋ ಯಾತ್ರೆ ಆಗಿದೆ. ಕಾಂಗ್ರೆಸ್ ನಾಯಕನಿಲ್ಲದ ಪಕ್ಷವಾಗಿದೆ. ರಾಹುಲ್ ಗಾಂಧಿಯನ್ನು ಜನ ತಿರಸ್ಕರಿಸಿದ್ದಾರೆ. ನಿರಂತರ ಸೋಲಿನಿಂದ ಕಾಂಗ್ರೆಸ್ ಕಂಗೆಟ್ಟಿದೆ. ಕಾಂಗ್ರೆಸ್ ಪಕ್ಷ ಬಿಡುವವರ ಸಂಖ್ಯೆ ಹೆಚ್ಚಾಗಲಿದೆ ಎಂದರು.
ಇದನ್ನೂ ಓದಿ:ಪಿಎಫ್ಐ ಬ್ಯಾನ್ ಮಾಡುವಂತೆ ಅಸೆಂಬ್ಲಿಯಲ್ಲಿ ಕೂಗಾಡಿದ್ದೇ ಕಾಂಗ್ರೆಸ್ ನವರು; ಸಿಎಂ ಬೊಮ್ಮಾಯಿ
ಕಲ್ಯಾಣ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಬೀದರ ಜಿಲ್ಲೆಯ ಆರಕ್ಕೆ ಆರೂ ಸೀಟು ಗೆಲ್ಲಲಿದೆ. ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಅರುಣ್ ಸಿಂಗ್ ಅವರು ಬೀದರ್ ನ ಝರಣಾ ನರಸಿಂಹ ಮಂದಿರ, ಅನಂತಶಯನ ಮಂದಿರ ಮತ್ತು ಗುರುದ್ವಾರಾ ಸೇರಿದಂತೆ ವಿವಿಧ ಮಂದಿರಗಳಿಗೆ ತೆರಳಿ ದರುಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.