ಕೋವಿಡ್ ಸೋಂಕು ತಡೆಗೆ ಜನರ ಸಹಕಾರ ಅಗತ್ಯ
Team Udayavani, Jun 25, 2020, 8:10 AM IST
ಬಸವಕಲ್ಯಾಣ: ಕೋವಿಡ್ ಸೋಂಕು ನಿಯಂತ್ರಣಕ್ಕೆ ಲಾಕ್‌ಡೌನ್ ಹಾಗೂ ಸೀಲ್‌ಡೌನ್ ಒಂದೇ ಮಾರ್ಗವಲ್ಲ. ಬದಲಾಗಿ ಸಾರ್ವಜನಿಕರು ಸರ್ಕಾರದ ಆದೇಶ ಪಾಲಿಸಿ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸಿದರೆ ಸೋಂಕು ತಡೆ ಸಾಧ್ಯ. ಈ ದಿಶೆಯಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹೇಳಿದರು.
ನಗರದ ಬಿಕೆಡಿಬಿ ಕಚೇರಿಯಲ್ಲಿ ಇತ್ತೀಚೆಗೆ ಅಧಿಕಾರಿಗಳ ಸಭೆ ನಡೆಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಬಸವಕಲ್ಯಾಣ ಮಹಾರಾಷ್ಟ್ರದ ಗಡಿಭಾಗದಲ್ಲಿ ಇರುವುದರಿಂದ ಕೋವಿಡ್ ಸೋಂಕು ವೇಗವಾಗಿ ಹರಡುತ್ತಿದೆ. ಹೀಗಾಗಿ ಅದನ್ನು ಯಾವರೀತಿ ತಡೆಗಟ್ಟಬೇಕು ಎಂಬ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ಸಲಹೆ ಸೂಚನೆಗಳನ್ನು ನೀಡಲಾಗಿದೆ ಎಂದರು.
ಪ್ರತಿಯೊಂದನ್ನು ಸರ್ಕಾರವೇ ಮಾಡಲಾಗುವುದಿಲ್ಲ. ಸೋಂಕು ತಡೆಯಲ್ಲಿ ಸಾರ್ವಜನಿಕರ ಜವಾಬ್ದಾರಿ ಬಹಳಷ್ಟಿದೆ. ತಮ್ಮನ್ನು ತಾವು ರಕ್ಷಿಸಿಕೊಳ್ಳಲು ತಪ್ಪದೆ ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವಯಂ ಕ್ವಾರಂಟೈನ್ ಆಗಬೇಕು. ಆರೋಗ್ಯ ಸಿಂಧು ಆ್ಯಪ್ ಬಳಸಿ ಕೋವಿಡ್ ಸೋಂಕು ತಡೆಗೆ ಕೈಜೋಡಿಸಬೇಕೆಂದರು. ಇದಕ್ಕೂ ಮುಂಚೆ ಸಚಿವರು ನಗರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಶಾಸಕ ಬಿ.ನಾರಾಯಣರಾವ್, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್., ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್, ಎಸ್‌ಪಿ ನಾಗೇಶ ಡಿ.ಎಲ್, ಎಸಿ ಭಂವರ್‌ಸಿಂಗ್ ಮೀನಾ, ತಹಶೀಲ್ದಾರ್ ಸಾವಿತ್ರಿ ಸಲಗರ, ಇಒ ಮಡೋಳಪ್ಪ ಪಿ.ಎಸ್, ನಗರಸಭೆ ಪೌರಾಯುಕ್ತ ಮೀನಾಕುಮಾರಿ ಬೋರಾಳಕರ್, ಸಿಪಿಐ ಜಿ.ಎಸ್.ನ್ಯಾಮಗೌಡ, ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.