ಶಿಕ್ಷಣ-ಕ್ರೀಡೆಯಲ್ಲೂ ಸಾಧನೆ ಅವಶ್ಯ
Team Udayavani, Feb 10, 2018, 12:55 PM IST
ಭಾಲ್ಕಿ: ಕ್ರೀಡೆ, ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ವಿದ್ಯಾರ್ಥಿಗಳು ಎರಡಲ್ಲೂ ಉತ್ತಮ ಸಾಧನೆ ಮಾಡಬೇಕು ಎಂದು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಚನ್ನವೀರ ಚಕ್ರಸಾಲಿ ಹೇಳಿದರು.
ಕರಡ್ಯಾಳ ಗ್ರಾಮದ ಚನ್ನಬಸವೇಶ್ವರ ಗುರುಕುಲ ಸಂಚಾಲಿತ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಕ್ರೀಡೆಗಳು ತುಂಬಾ ಮಹತ್ವಪೂರ್ಣ ಪಾತ್ರ ವಹಿಸುತ್ತವೆ. ಹಾಗಾಗಿ, ಎಲ್ಲ ಶಿಕ್ಷಕರು ಮಕ್ಕಳಿಗೆ ಆಟಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸಬೇಕು. ನೈಜ ಕ್ರೀಡಾಜ್ಞಾನ ನೀಡದ ಶಿಕ್ಷಣ ಅಪೂರ್ಣ ಎಂದು ಹೇಳಿದರು.
ಆಡಳಿತಾಧಿಕಾರಿ ಮೋಹನರೆಡ್ಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು, ವಿದ್ಯಾರ್ಥಿಗಳು ಕೇವಲ ವಾಟ್ಸ್‌ಆ್ಯಪ್, ಫೇಸ್‌ಬುಕ್, ಇಂಟರ್‌ನೆಟ್‌ಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರಿಂದ ದೈಹಿಕ ಸದೃಢತೆ ಇಲ್ಲದೇ ಮಾನಸಿಕವಾಗಿ ಹಿನ್ನಡೆ ಅನುಭವಿಸಿ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಮುಖ್ಯಶಿಕ್ಷಕ ಬಸವರಾಜ ಪ್ರಭಾ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕರಾದ ಲಕ್ಷ್ಮಣ ಮೇತ್ರೆ, ಪಂಡರಿನಾಥ ಪವಾರ್, ಬಸವಶ್ರೀ ಮಾಳಗೆ, ದೈಹಿಕ ನಿರ್ದೇಶಕ ಅನಿಲ್‌ಕುಮಾರ ಪಾಟೀಲ, ಸಚಿನ್ ಪೊಟ್ಲೆ, ಮಲ್ಲಿಕಾರ್ಜುನ, ಭರತ ನಂದನವರೆ, ಉತ್ತಮ ನಾಗೂರೆ, ಸಹಾದೇವ ಮಡಿವಾಳ, ವೀರೇಶ ಶೇರಿಕಾರ, ಮಹೇಶ ದೇಶಮುಖ್, ಜೈರಾಜ ದೊಡ್ಡೆ ಇದ್ದರು. ಮಹೇಶ ಬನ್ನಾಳೆ ನಿರೂಪಿಸಿದರು. ದೈಹಿಕ ಶಿಕ್ಷಕ ವಿರೇಶ ವಿವೇಕಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಸಚಿನ್ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್ ರಾಜ್ಯಭಾರ!
Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!
Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.