ಪಿಎಫ್ಐ. -ಆರ್.ಎಸ್.ಎಸ್. ಸಂಘಟನೆಗಳ ಹೋಲಿಕೆ ಮಾಡುವುದು ಸರಿ ಅಲ್ಲ: ಬಿ.ವೈ ವಿಜಯೇಂದ್ರ
Team Udayavani, Sep 30, 2022, 1:31 PM IST
ಹುಮನಾಬಾದ: ನಿಷೇಧಿತ ಪಿಎಫ್ಐ ಸಂಘಟನೆಯೊಂದಿಗೆ ದೇಶಕ್ಕಾಗಿ ಶ್ರಮಿಸುವ ಆರ್.ಎಸ್.ಎಸ್. ಸಂಘಟನೆ ಹೋಲಿಕೆ ಮಾಡುವುದು ಸರಿ ಅಲ್ಲ. ಆರ್.ಎಸ್.ಎಸ್. ಸಂಘಟನೆ ಬಗ್ಗೆ ಮಾತಾಡಲು ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆಯಿಲ್ಲ ಎಂದು ಕಾಂಗ್ರೆಸ್ ಮುಖಂಡರ ವಿರುದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಶುಕ್ರವಾರ ತಾಲೂಕಿನ ಹುಡಗಿ ಗ್ರಾಮದಲ್ಲಿ ಎಸ್.ಟಿ ಮೋರ್ಚಾ ವತಿಯಿಂದ ಪ್ರಧಾನಿ ಮೋದಿ ಜನ್ಮದಿನದ ನಿಮಿತ್ತ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಎಸ್.ಎಸ್. ನ ಹಿನ್ನೆಲೆ ಗೊತ್ತಿರದವರು ನಿಷೇದಿಸುವ ಕುರಿತು ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಈ ರೀತಿ ಉಡಾಫೆ ಮಾತುಗಳು ಹೇಳುತ್ತಿದ್ದಾರೆ. ಇದೀಗ ಪಿಎಫ್ಐ ಸಂಘಟನೆ ಬ್ಯಾನ್ ಆಗಿದ್ದು, ಆರ್.ಎಸ್.ಎಸ್. ಸಂಘಟನೆಯನ್ನು ಪಿ.ಎಫ್.ಐ. ಜೊತೆಗೆ ಹೋಲಿಕೆ ಮಾಡುವ ದುಸ್ಸಾಹಸ ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ಸಂಘವನ್ನು ಬ್ಯಾನ್ ಮಾಡಿದ ಸಂದರ್ಭದಲ್ಲಿ ಅದರ ಪರಿಣಾಮ ಏನಾಗಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ರಾಷ್ಟ್ರೀಯ ಸ್ವಯಂ ಸೇವಾ ಸಂಘ ಎಲ್ಲಿಯೂ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸಿಲ್ಲ ಎಂಬುವುದು ತಿಳಿದುಕೊಳ್ಳಬೇಕು. ದೇಶ ಕಟ್ಟುವ ವಿಚಾರಧಾರೆಗಳು ಹೊಂದಿದೆ ಎಂದ ಅವರು, ಬಿಜೆಪಿ ಪಕ್ಷದಲ್ಲಿನ ನಾಯಕರು ಸಂಘದಿಂದ ಬೆಳೆದು ಬಂದಿದ್ದಾರೆ ಎಂದರು. ಕಾಂಗ್ರೆಸ್‌ನ ಭಾರತ್ ಜೋಡು ಯಾತ್ರೆಯಿಂದ ಬಿಜೆಪಿ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ತಿಳಿಸಿದರು.
ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ಬಸವ ಕಲ್ಯಾಣ ಶಾಸಕ ಶರಣು ಸಲಗಾರ, ಬಿಜೆಪಿ ಮುಖಂಡರಾದ ಬಾಬುವಾಲಿ, ಬಸವರಾಜ ಆರ್ಯ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಈಶ್ಚರ ಸಿಂಗ್ ಠಾಕೂರ್, ಸೋಮನಾಥ ಪಾಟೀಲ, ಡಾ। ಸಿದ್ದಲಿಂಗಪ್ಪ ಪಾಟೀಲ, ಚಂದು ಪಾಟೀಲ, ಪದ್ಮಾಕರ್ ಪಾಟೀಲ, ಸುಭಾಷ್ ಗಂಗಾ, ಪ್ರಭಾಕಾರ ನಾಫರಾಳೆ, ಮಹೇಶ ಪಾಲಂ, ಗುಂಡುರೆಡ್ಡಿ, ವಿಶ್ವನಾಥ ಪಾಟೀಲ, ನಾಗೇಶ ಕಲ್ಲೂರ್, ಎಸ್.ಟಿ ಮೋರ್ಚಾ ಮುಖಂಡ ದಯಾನಂದ ಮೇತ್ರೆ, ಪ್ರಕಾಶ ತಾಳಮಡಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.