ಸ್ವಾತಂತ್ರ್ಯ ಸೇನಾನಿಗಳ ಛಾಯಾಚಿತ್ರ ಪ್ರದರ್ಶನ
Team Udayavani, Sep 18, 2022, 2:10 PM IST
ಬೀದರ: ನಗರದ ಕರ್ನಾಟಕ ಕಾಲೇಜು ಆವರಣದಲ್ಲಿ ಭಾರತ ಸರ್ಕಾರದ ಕೇಂದ್ರ ಸಂವಹನ ಶಾಖೆ ಕಲಬುರಗಿ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪೋಷಣ್ ಮಾಸ ಹಿನ್ನೆಲೆ ಮೂರು ದಿನಗಳ ಛಾಯಾಚಿತ್ರ ಪ್ರದರ್ಶನಕ್ಕೆ ಶನಿವಾರ ಚಾಲನೆ ನೀಡಲಾಯಿತು.
ಕೆಆರ್‌ಇ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಬಿ.ಜಿ. ಶೆಟಕಾರ ಮಾತನಾಡಿ, ಈ ಭಾಗದ ಸ್ವಾತಂತ್ರ್ಯ ಸೇನಾನಿಗಳ ಕುರಿತು ಛಾಯಾಚಿತ್ರ ಏರ್ಪಡಿಸಿರುವುದು ಸಂತಸದ ವಿಷಯವಾಗಿದೆ. ಇದರಿಂದ ನಮ್ಮ ಭಾಗದ ಸ್ವಾತಂತ್ರ್ಯ ಹೋರಾಟಗಾರರ ನೆನಪುಗಳು ನಮಗೆ ಮರುಕಳಿಸುತ್ತವೆ. ವಿಮೋಚನೆಗಾಗಿ ಅನೇಕ ಹಿರಿಯರು ತಮ್ಮ ಪ್ರಾಣ ತ್ಯಾಗ ಮಾಡಿದ್ದು, ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಪ್ರಾಂಶುಪಾಲ ಬಸವರಾಜ ಬಲ್ಲೂರ ಮಾತನಾಡಿ, ಹೈ-ಕ ನಿಜಾಮರ ಆಳ್ವಿಕೆಯಿಂದ ಮುಕ್ತಿಯಾಗಲು ಸರ್ದಾರ ವಲ್ಲಭಭಾಯಿ ಪಟೇಲರ ನೇತೃತ್ವದಲ್ಲಿ ವಿಮೋಚನೆಯಾಯಿತು. ಈ ಸ್ವಾತಂತ್ರ್ಯವನ್ನು ಇಂದು ನಾವೆಲ್ಲರೂ ಸೇರಿ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ಇದರ ಇತಿಹಾಸವನ್ನು ನಮ್ಮ ಯುವ ಪೀಳಿಗೆ ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದರು.
ಕ್ಷೇತ್ರ ಪ್ರಚಾರ ಅಧಿಕಾರಿ ಶ್ರುತಿ ಎಸ್.ಟಿ. ಮಾತನಾಡಿ, ಪ್ರಧಾನಿ ಮೋದಿ ಅವರ ಆಶಯದೊಂದಿಗೆ ಸ್ಥಳೀಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ನೆನಪಿಸುವ ಸಲುವಾಗಿ ಇಂತಹ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮಗಳನ್ನು ಭಾರತದಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಇದನ್ನು ವೀಕ್ಷಿಸಬಹುದಾಗಿದೆ ಎಂದು ಹೇಳಿದರು.
ಛಾಯಾಚಿತ್ರ ವೀಕ್ಷಣೆ: ವಿಧಾನ ಪರಿಷತ್ ಸಭಾಪತಿ ರಘುನಾಥರಾವ ಮಲ್ಕಾಪುರೆ, ಶಾಸಕ ರಹೀಮ ಖಾನ್, ಕೆಎಸ್‌ಐಐಡಿಸಿ ಅಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರವೂಫುದ್ಧಿನ್ ಕಚೇರಿವಾಲೆ, ಬಿಡಿಎ ಅಧ್ಯಕ್ಷ ಬಾಬು ವಾಲಿ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಸಿಇಒ ಶಿಲ್ಪಾ ಎಂ., ಎಸ್‌ಪಿ ಕಿಶೋರ್ ಬಾಬು, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಸಹಾಯಕ ಆಯುಕ್ತ ಮೊಹ್ಮದ ನಯೀಮ್ ಮೋಮಿನ್ ಮತ್ತಿತರರು ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿದರು.
ಪ್ರಾಚಾರ್ಯ ಡಾ| ಎಂ.ಎಸ್. ಚೆಲ್ವಾ, ಕೆಆರ್‌ಇ ಸಂಸ್ಥೆಯ ಸಿದ್ರಾಮ ಪಾರಾ, ಡಾ| ಬಸವರಾಜ ಪಾಟೀಲ ಅಷೂuರ, ಸತೀಶ ಪಾಟೀಲ, ಅಧಿಕಾರಿಗಳಾದ ನಾಗಪ್ಪ ಅಂಬರಗೋಳ, ಮುರಳಿಧರ ಕಾರಬಾರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.