ಧಾರ್ಮಿಕ ಉತ್ಸವಗಳಿಂದ ಭಾವೈಕ್ಯತೆ: ಖಂಡ್ರೆ
Team Udayavani, Jan 4, 2019, 8:33 AM IST
ಭಾಲ್ಕಿ: ಗ್ರಾಮೀಣ ಭಾಗದಲ್ಲಿ ನಿರಂತರವಾಗಿ ನಡೆಯುವ ಧಾರ್ಮಿಕ ಉತ್ಸವಗಳು ಜನರಲ್ಲಿ ಭಾವೈಕ್ಯತೆ ಮೂಡಿಸುತ್ತವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಈಶ್ವರ ಖಂಡ್ರೆ ಹೇಳಿದರು. ಹಲಬರ್ಗಾ ಗ್ರಾಮದಲ್ಲಿ ಶ್ರೀ ಗುರು ರಾಚೋಟೇಶ್ವರ ವಿರಕ್ತ ಮಠದಲ್ಲಿ ನಡೆದ ಶ್ರೀ ಸಿದ್ಧರಾಮೇಶ್ವರ ನಮ್ಮೂರ 6ನೇ ಜಾತ್ರಾಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯ ಇಂದು ಭೌತಿಕವಾಗಿ ಬಹಳ ಬೆಳೆಯುತ್ತಿದ್ದಾನೆ. ಆದರೆ ಹೃದಯವಂತಿಕೆಯಲ್ಲಿ ಕ್ಷುಬ್ಜನಾಗುತ್ತಿದ್ದಾನೆ. ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಜನ ಸಾಮಾನ್ಯರಲ್ಲಿ ಪ್ರೀತಿ, ಗೌರವ ಭಾವ ಮೂಡಿಸಲು ಇಂತಹ ಧಾರ್ಮಿಕ ಕಾರ್ಯಕ್ರಗಳು ಅಗತ್ಯವಾಗಿ ಬೇಕು ಎಂದರು.
ಶ್ರೀ ಮಠದ ಕಲ್ಯಾಣ ಮಂಟಪ, ಸಮುದಾಯ ಭವನ ಹಾಗೂ ನಾನಾ ಕಾಮಗಾರಿಗಳಿಗಾಗಿ ಸುಮಾರು 25 ಲಕ್ಷ
ರೂ. ಅನುದಾನ ನೀಡಿದ್ದು, ಕಾಮಗಾರಿ ಪೂರ್ಣಗೊಳಿಸಲು ಇನ್ನೂ ಹೆಚ್ಚು ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಸನ್ನಿಧಾನ ವಹಿದ್ದ ಶ್ರೀ ಹಾವಗಿಲಿಂಗೇಶ್ವರ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಎಲ್ಲ ಸಂಸ್ಕಾರಗಳಲ್ಲಿ ಧಾರ್ಮಿಕ ಸಂಸ್ಕಾರ ಮಾನವನಿಗೆ ಅತಿಮುಖ್ಯವಾಗಿ ಬೇಕು. ಭೌತಿಕ ಸಂಪತ್ತಿಗಿಂತ ಆಧ್ಯಾತ್ಮಿಕ ಸಂಪತ್ತು ಶ್ರೇಷ್ಠವಾಗಿದೆ. ಶ್ರೀ ಮಠದ ಎಲ್ಲ ಕಾರ್ಯ ಚಟುವಟಿಕೆಗಳಿಗೆ ಶಾಸಕ ಈಶ್ವರ ಖಂಡ್ರೆ ಅವರು ಸಾಕಷ್ಟು ಸಹಕಾರ ನೀಡುತ್ತಿದ್ದಾರೆ ಎಂದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುತ್ಯಾನ ಬಬಲಾದ ಶ್ರೀ ಗುರುಪಾದಲಿಂಗ ಸ್ವಾಮೀಜಿ, ಭೀಮರಾಯನ ಗುಡಿ ಜ್ಞಾನೇಶ್ವರಿ, ಹಲಬರ್ಗಾದ ಈಶ್ವರಿ ವಿಶ್ವವಿದ್ಯಾಲಯದ ವಾಣಿ ಸಹೋದರಿ, ಶಿವಾಜಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಚಂದ್ರಕಾಂತ ಬಿರಾದಾರ ಮಾತನಾಡಿದರು. ಅಖೀಲ ಭಾರತ ವೀರಶೈವ ಮಹಾಸಭೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ರಿಕ್ಕೆ, ಯುವ ಘಟಕದ ತಾಲೂಕು ಅಧ್ಯಕ್ಷ ಮಹಾದೇವ ಕಾಸಿಸ್ವಾಮಿ, ಹಣಮಂತರಾವ್ ಚವ್ಹಾಣ, ಸಂತೋಷ ಬಿಜಿ ಪಾಟೀಲ, ಗೋರಖ, ಪಪ್ಪು ಪಾಟೀಲ ಖಾನಾಪೂರ, ಚಂದ್ರಕಾಂತ ರಿಕ್ಕೆ ಹಾಗೂ ಜ್ಯಾಂತಿ, ಧನ್ನೂರಾ ಗ್ರಾಮದ ಭಕ್ತರು ಇದ್ದರು. ಸಂಗೀತ ಕಲಾವಿದ ಚದಾನಂದ, ವಿಶ್ವನಾಥ ಐನೋಳಿ ವಚನ ಗಾಯನ ನಡೆಸಿ ಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.