ಪ್ರಗತಿಗೆ ಸಾಮೂಹಿಕ ಪ್ರಯತ್ನ ಅಗತ್ಯ
Team Udayavani, Sep 18, 2017, 12:07 PM IST
ಬಸವಕಲ್ಯಾಣ: ಹಿಂದುಳಿದ ಹೈ-ಕ ಭಾಗದ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯವಾಗಿದೆ ಎಂದು ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದರು.
ನಗರದ ಹಳೆ ತಹಶೀಲ್ದಾರ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದಿಂದ ಹೈ.ಕ. ವಿಮೋಚನಾ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ಧ್ವಜಾರೋಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉದ್ಯೋಗಾವಕಾಶ ಸೃಷ್ಟಿಸಲು ತಾಲೂಕಿನಲ್ಲಿ ಸರ್ಕಾರದಿಂದ 300 ಎಕರೆ ಭೂಮಿ ಸ್ವಾಧಿಧೀನ ಮಾಡಿಕೊಂಡು ಕಾರ್ಖಾನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಸಹಾಯಕ ಆಯುಕ್ತ ಶರಣಬಸಪ್ಪ ಕೊಟಪ್ಪಗೋಳ ಮಾತನಾಡಿ, ಹೈದ್ರಬಾದ್
ಕರ್ನಾಟಕ ವಿಮೋಚನೆಗಾಗಿ ಹೋರಾಡಿ ಪ್ರಾಣ ಬಲಿದಾನ ನೀಡಿದ ದೇಶ ಭಕ್ತರ ಹೋರಾಟಗಾರರನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಬೇಕು ಎಂದು ಹೇಳಿದರು.
ಮುಖಂಡ ಕೇಶಪ್ಪ ಬಿರಾದಾರ ಉಪನ್ಯಾಸ ನೀಡಿದರು. ನಗರಸಭೆ ಉಪಾಧ್ಯಕ್ಷೆ ಚಮ್ಮಾಬಾಯಿ ಮಾಲಗಾರ, ಸಿಪಿಐ
ಅಲಿಸಾಬ, ತಾಪಂ ಪ್ರಭಾರಿ ಇಒ ಶಂಕರ ಕನಕ ಇದ್ದರು. ತಹಶೀಲ್ದಾರ ಕೀರ್ತಿ ಸ್ವಾಗತಿಸಿದರು. ಪಶು ಸಂಗೋಪನಾ
ಇಲಾಖೆ ಸಹಾಯಕ ನಿರ್ದೇಶಕ ಡಾ| ರವೀಂದ್ರನಾಥ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಸೇನಾನಿಗಳನ್ನು ಸನ್ಮಾನಿಸಲಾಯಿತು.
ಇದಕ್ಕೂ ಮೊದಲು ಕೋಟೆಯಿಂದ ಮುಖ್ಯ ರಸ್ತೆ ಮಾರ್ಗವಾಗಿ ಹಳೆ ತಹಶೀಲ್ದಾರ ಕಚೇರಿ ವರೆಗೆ ಮೆರವಣಿಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.