ಮಸೂದೆ ಪ್ರತಿ ಸುಟ್ಟು ರೈತರ ಆಕ್ರೋಶ
Team Udayavani, Sep 27, 2020, 4:37 PM IST
ಬೀದರ: ನಗರದ ಸಂಸದರ ಕಚೇರಿ ಎದುರು ಮಸೂದೆಗಳ ಪ್ರತಿಗಳನ್ನು ಸುಟ್ಟು ಹಾಕಿ ರೈತ ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಬೀದರ: ರೈತರನ್ನು ಸಂಕಷ್ಟಕ್ಕೆ ತಳ್ಳುವ ಮಸೂದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ರೈತ ಸಂಘದಿಂದ ಶನಿವಾರ ನಗರದ ಸಂಸದರ ನಿವಾಸದ ಎದುರು ಪ್ರತಿಭಟನೆ ನಡೆಸಲಾಯಿತು.
ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ರೈತ ಸಂಘದ ಮುಖಂಡರು ಮಸೂದೆಗಳ ಪ್ರತಿಗಳನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಸಂಸದ ಭಗವಂತ ಖೂಬಾ ಅವರಿಗೆ ಬರೆದ ಮನವಿ ಪತ್ರವನ್ನು ಆಪ್ತ ಸಹಾಯಕರಿಗೆ ಸಲ್ಲಿಸಿದರು. ಕೇಂದ್ರ ಸರ್ಕಾರ ರೈತ ವಿರೋಧಿ ಕಾನೂನು ರೂಪಿಸಿ ಅನ್ನದಾತರನ್ನು ಕನಿಷ್ಠ ದರ್ಜೆಯಲ್ಲಿ ಕಾಣುತ್ತಿರುವುದು ಸರಿಯಲ್ಲ. ಹೆಸರು ಮತ್ತು ಉದ್ದು ಖರೀದಿಯಲ್ಲಿ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ರೈತರ ಆದಾಯ ದ್ವಿಗುಣಗೊಳಿಸುತ್ತೇವೆಂದು ಹೇಳಿ, ಇನ್ನೊಂದೆಡೆ 20 ಕ್ವಿಂಟಲ್‌ನಿಂದ 4 ಮತ್ತು 6 ಕ್ವಿಂಟಲ್ ಖರೀದಿಸುತ್ತಿದೆ. ಇದರಿಂದ ಸರ್ಕಾರದ ನಿಲುವು ಗೊತ್ತಾಗುತ್ತದೆ ಎಂದು ಕಿಡಿಕಾರಿದರು.
ಜಿಲ್ಲೆಯ ರೈತರು ಸತತವಾಗಿ ಪ್ರಕೃತಿ ವಿಕೋಪದಿಂದ ಬೆಳೆ ಕಳೆದುಕೊಂಡು ಸಾಲಕ್ಕೆ ಸಿಲುಕುತ್ತಿದ್ದಾರೆ. ರಾಷ್ಟ್ರೀಕೃತ ಸೇರಿ ಎಲ್ಲ ಬ್ಯಾಂಕ್ ನಲ್ಲಿನ ರೈತರ ಸಾಲ ಮನ್ನಾ ಮಾಡಿ ಹೊಸ ಸಾಲ ಕೊಡಬೇಕು ಹಾಗೂ ರೈತರಿಗೆ ಮಾರಕವಾಗುವಂತಹ ಎಪಿಎಂಸಿ ಕಾಯ್ದೆ ಭೂ ಕಾಯ್ದೆ ಮತ್ತು ವಿದ್ಯುತ್ ಕಾಯ್ದೆಗಳನ್ನು ರದ್ದುಪಡಿಸಬೇಕು. ಸಂಸದರು ಸರ್ಕಾರದ ನೀತಿಗಳನ್ನು ವಿರೋ ಧಿಸಿ ರೈತರ ಧ್ವನಿಯಾಗಬೇಕು ಎಂದು ಆಗ್ರಹಿಸಿದರು.
ಪ್ರಮುಖರಾದ ವಿಶ್ವನಾಥ ಚಿಲಶೆಟ್ಟಿ, ನಾಗೇಂದ್ರಪ್ಪ ತರನಳ್ಳಿ, ಪ್ರಕಾಶ ಅಲ್ಮಾಜೆ, ಹಾವಗಿರಾವ್ ವಟಗೆ, ಸಂಗಶೆಟ್ಟಿ ಖೇಡ, ಪ್ರಭುದಾಸ ಸಂತಪುರ, ನಾಗಶೆಟ್ಟಪ್ಪಾ ಲಂಜವಾಡೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.