ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ
Team Udayavani, May 18, 2018, 11:49 AM IST
ಬೀದರ: ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ರಾಜ್ಯಪಾಲರು ಅವಕಾಶ ಮಾಡಿಕೊಟ್ಟಿರುವ ಕ್ರಮ ಖಂಡನೀಯ ಎಂದು ಆರೋಪಿಸಿ ನಗರದಲ್ಲಿ ಸಿಪಿಐ, ಸಿಪಿಐಎಂ ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಿಪಿಐ ಕಾರ್ಯದರ್ಶಿ ಬಾಬುರಾವ್ ಹೊನ್ನಾ ನೇತೃತ್ವದಲ್ಲಿ ನಗರದ ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಗೋವಾ, ಮಣಿಪುರ ಮತ್ತು ಮೇಘಾಲಯಗಳಲ್ಲಿ ಬಹುಮತ ಇಲ್ಲದಿದ್ದರೂ ಸಹ ಅಲ್ಲಿಯ ರಾಜ್ಯಪಾಲರು ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಸರ್ಕಾರ ರಚಿಸಲು ಆಹ್ವಾನಿಸಿದೆ. ಆದರೆ, ರಾಜ್ಯದಲ್ಲಿ 118 ಶಾಸಕರ ಬಲ ಹೊಂದಿರುವ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಕೂಟವನ್ನು ಸರ್ಕಾರ ರಚಿಸಲು ಆಹ್ವಾನಿಸದೆ 104 ಶಾಸಕ ಬಲ ಇರುವ ಬಿಜೆಪಿಗೆ ಅವಕಾಶ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ಕೇಂದ್ರದ ಬಿಜೆಪಿ ಸರ್ಕಾರ ತನ್ನ ಅಧಿಕಾರ ಉಪಯೋಗಿಸಿಕೊಂಡು ಸಾಂವಿಧಾನಿಕ ಹುದ್ದೆಗಳನ್ನು ದುರುಪಯೋಗ ಮಾಡಿಕೊಂಡಿದೆ. ಬಹುಮತ ಇಲ್ಲದ ಬಿಜೆಪಿಗೆ ಸಕಾರ ರಚಿಸಲು ಅನುಮತಿಸಿರುವುದು ಪ್ರಜಾಪ್ರಭುತ್ವದ ಕೊಲೆ ಮಾಡಿದಂತಾಗಿದೆ. ಈ ಹಿಂದಿನಂತೆ ಆಪರೇಶನ್ ಕಮಲಕ್ಕೆ ದಾರಿ ಮಾಡಿಕೊಡಲಾಗಿದೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್ ಆಚರಣೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
ಡಿ. 31: ಸಾಸ್ತಾನ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.