ಅಲ್ಪಸಂಖ್ಯಾತರ ಕಲ್ಯಾಣಾಧಿ ಕಾರಿವರ್ಗಾವಣೆಗೆ ಪ್ರತಿಭಟನೆ
Team Udayavani, Aug 31, 2017, 12:10 PM IST
ಬೀದರ: ಜಿಲ್ಲೆಯ ಕ್ರೈಸ್ತರ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ಅನುದಾನವನ್ನು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳು ಕುಂಠಿತಗೊಳಿಸುವ ಷಡ್ಯಂತ್ರ ನಡೆಸುತ್ತಿದ್ದು, ಕೂಡಲೇ ಅವರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಕ್ರೈಸ್ತ ಯುವ ರಕ್ಷಣಾ ಸಮಿತಿಯಿಂದ
ಬುಧವಾರ ನಗರದ ಅಲ್ಪಸಂಖ್ಯಾತರ ಕಚೇರಿ ಎದುರು ಧರಣಿ ನಡೆಸಲಾಯಿತು.
ಸಮಿತಿ ರಾಜ್ಯಾಧ್ಯಕ್ಷ ಕಾಯಲ ಎಸ್.ಆರ್. ಹಾಗೂ ಜಿಲ್ಲಾಧ್ಯಕ್ಷ ರಾಜು ಕೋಳಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ನಿರ್ದೇಶಕರಿಗೆ ಬರೆದ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.
ಕ್ರೈಸ್ತ ಸಮುದಾಯದ ಚರ್ಚಗಳ ನವೀಕರಣ, ದುರುಸ್ತಿ, ಶಾದಿಭಾಗ್ಯ, ಸಮುದಾಯ ಭವನ ಕಟ್ಟಡಕ್ಕಾಗಿ ಸರ್ಕಾರ ಅಲ್ಪಸಂಖ್ಯಾತರ ಇಲಾಖೆ ಮೂಲಕ ಜಿಲ್ಲೆಗೆ ವಿಶೇಷವಾಗಿ 3.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಆದರೆ, ಇಲಾಖೆ ಜಿಲ್ಲಾಧಿಕಾರಿಗಳು ವಿನಾಕಾರಣ ಸಮಾಜದ
ಅಭಿವೃದ್ಧಿಯನ್ನು ಹಾಳು ಮಾಡಲು ಸಂಚು ಮಾಡುತ್ತಿದ್ದಾರೆ ಮತ್ತು ಸಂಘ ಸಂಸ್ಥೆಗಳಿಗೆ ದಾರಿತಪ್ಪಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಸಕ್ತ ಸಾಲಿನ ಅನೇಕ ಕಡತಗಳು ಅಲ್ಪಸಂಖ್ಯಾತರ ಇಲಾಖೆಯಲ್ಲಿದ್ದು ಅವುಗಳನ್ನು ತಪಾಸಣೆ ಮಾಡದೆ ಕಚೇರಿಯಲ್ಲಿ ಇಟ್ಟುಕೊಂಡು ನಿಷ್ಕಾಳಜಿ ತೋರುತ್ತಿದ್ದಾರೆ. ಸರ್ಕಾರ ಮೀಸಲಟ್ಟಿರುವ ಅನುದಾನವನ್ನು ಬಳಸಿಕೊಳ್ಳುವ ಸಂಘ ಸಂಸ್ಥೆಗಳಿಗೆ ಸಹಕಾರ ನೀಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಹಾಗಾಗಿ ಕೂಡಲೇ ಅಲ್ಪಸಂಖ್ಯಾತರ ಅಧಿಕಾರಿಯನ್ನು ವರ್ಗಾವಣೆ ಮಾಡಿ ದಕ್ಷ ಅಧಿಕಾರಿಯನ್ನು ನೇಮಕ ಮಾಡಬೇಕು. ಇಲ್ಲವಾದಲ್ಲಿ ಜಿಲ್ಲಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.