ನಿವೇಶನ ಒದಗಿಸಲು ಆಗ್ರಹಿಸಿ ಪ್ರತಿಭಟನೆ
Team Udayavani, Feb 11, 2020, 12:06 PM IST
ಕಮಲನಗರ: ನಿವೇಶನ ಇಲ್ಲದವರಿಗೆ ನಿವೇಶನ ನಿರ್ಮಿಸಿಕೊಡುವ ಕುರಿತು ಸುಳ್ಳು ಭರವಸೆ ನೀಡಿದ್ದನ್ನು ಖಂಡಿಸಿ ಸೋಮವಾರ ಬಾಲಿಕಾ ಶ್ರೀಮಂತ ನೇತೃತ್ವದಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಮಲನಗರ ಪಟ್ಟಣದಲ್ಲಿ ಒಂದು ದಶಕಕ್ಕಿಂತ ಹೆಚ್ಚು ಕಾಲ ವಾಸವಾಗಿದ್ದು, ಸ್ವಂತ ಮನೆ ಇಲ್ಲದ ಕಾರಣ ಬಾಡಿಗೆ ಮನೆಯಲ್ಲೇ ಜೀವನ ನಡೆಸುತ್ತಿದ್ದೇವೆ ಎಂದು ಬಾಲಿಕಾ ಶ್ರೀಮಂತ ತಮ್ಮ ಅಳಲು ತೋಡಿಕೊಂಡರು. ಫೆಬ್ರವರಿ 2 ಮತ್ತು 11ರಂದು ಹಾಗೂ ಡಿಸೆಂಬರ್ 2 ರಂದು ನಿವೇಶನ ಒದಗಿಸಲು ಒತ್ತಾಯಿಸಿ ಕಮಲನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿತ್ತು.
ಪ್ರತಿಭಟನೆ ಸ್ಥಳಕ್ಕೆ ತಹಶೀಲ್ದಾರ್, ಪಿಡಿಒ , ಸಹಾಯಕ ನಿರ್ದೇಶಕ ಭೇಟಿ ನೀಡಿ ವಸತಿ ರಹಿತ ಕುಟುಂಬದವರಿಗೆ ವಸತಿ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಇನ್ನೂ ಈಡೇರಿಸಿಲ್ಲ ಎಂದು ರಾಜು ಭಾಂಡೇವಾಲೆ ವ್ಯವಸ್ಥೆಗೆ ಹಿಡಿಶಾಪ ಹಾಕಿದರು. ಪಿಡಿಒ ವಿನೋದ ಕುಲಕರ್ಣಿ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾ ನಿರತ ಮಹಿಳೆಯರ ಬೇಡಿಕೆಗಳನ್ನು ಆಲಿಸಿದರು. ಬಳಿಕ ಪಿಡಿಒ ಮಾತನಾಡಿ, ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಈಗಾಗಲೇ 1,072 ಮನೆ ಮಂಜೂರಿಗಾಗಿ ಪ್ರಸ್ತಾವನೆ ಕಳುಹಿಸಲಾಗಿದೆ. ಸೂಕ್ತ ಕ್ರಮಕ್ಕಾಗಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಚಂದ್ರಕಲಾ ದೀಪಕ, ಮಹಾನಂದಾ ಸಂತೋಷ, ಸಂತೋಷಿ ಇಂದ್ರಜೀತ, ರೇಣುಕಾ ದಿಲೀಪ, ಸುಜಾತಾ ಸಂಜು, ಶ್ರೀದೇವಿ ವಿನೋದ, ಶಿವಾನಿ ಅಂಬಾದಾಸ, ರೇಣುಕಾ ಸೂರ್ಯಕಾಂತ, ನಾಗಿನ ಅರ್ಜುನ, ಗೌಳನಬಾಯಿ ರಾಜಕುಮಾರ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.