ಬೆಂಬಲ ಬೆಲೆಗೆ ಆಗ್ರಹಿಸಿ ಪ್ರತಿಭಟನೆ


Team Udayavani, Sep 24, 2019, 3:11 PM IST

bidar-tdy-2

ಔರಾದ: ಉದ್ದು, ಹೆಸರು ಹಾಗೂ ಸೋಯಾಬಿನ್‌ ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಜತೆಗೆಕೂಡಲೇ ಖರೀದಿ ಕೇಂದ್ರ ಆರಂಭಿಸಲು ಮುಂದಾಗಬೇಕು ಎಂದು ಆಗ್ರಹಿಸಿ ರೈತ ಸಂಘದ ಸದಸ್ಯರು ಕೃಷಿ ಉತ್ಪನ್ನ ಮಾರುಕಟ್ಟೆಸಮಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸೋಮವಾರ ರೈತ ಸಂಘದ ತಾಲೂಕು ಅಧ್ಯಕ್ಷ ಶ್ರೀಮಂತ ಬಿರಾದಾರ ನೇತೃತ್ವದಲ್ಲಿ ಶಿವಾನಂದ ಯನಗುಂದಾ, ಝರೆಣ್ಣೆಪ್ಪ ದೇಶಮುಖ, ಶಿವಶಂಕರ ಎಕಲಾರ, ಪ್ರಕಾಶ ಬಾವಗೆ, ನಾಮದೇವ ಪಾಟೀಲ ಸೇರಿದಂತೆ ಇನ್ನಿತರರು ಜಮಾಯಿಸಿ ಜಿಲ್ಲಾ ಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಎಪಿಎಂಸಿ ಕಾರ್ಯದರ್ಶಿಗೆ ಸಲ್ಲಿಸಿದರು.

ಸಂಘದ ತಾಲೂಕು ಅಧ್ಯಕ್ಷ ಶ್ರೀಮಂತ ಬಿರಾದಾರ ಮಾತನಾಡಿ, ಗಡಿ ತಾಲೂಕಿನಲ್ಲಿರುವ ರೈತರು ಕಳೆದ ಮೂರು ವರ್ಷಗಳಿಂದ ಭೀಕರ ಬರಗಾಲದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಪ್ರಸಕ್ತ ಸಾಲಿನಲ್ಲಿಯೂ ತಾಲೂಕಿನಲ್ಲಿ ವಾಡಿಕೆಯಂತೆ ಮಳೆಯಾಗಿಲ್ಲ. ಸರ್ಕಾರ ಮುಂಗಾರು ಹಂಗಾಮಿನ ಬೆಳೆಗಳಿಗೆ ಕೂಡಲೇ ಬೆಂಬಲ ಬೆಲೆ ನಿಗ ದಿ ಮಾಡಿ ಖರೀದಿ ಕೇಂದ್ರ ಆರಂಭಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಶಿವಾನಂದ ಯನಗುಂದಾ ಮಾತನಾಡಿ, ತಾಲೂಕಿನ ರೈತರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ರೈತರ ಹೊಲದಲ್ಲಿನ ಬೆಳೆಗಳು ಮಾರುಕಟ್ಟೆಗೆ ಬರುವುದಕ್ಕಿಂತ ಮೊದಲೇ ಸರ್ಕಾರ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಅಲ್ಲದೇ ಖರೀದಿ ಕೇಂದ್ರ ಆರಂಭಿಸಬೇಕು. ಪ್ರತಿ ವರ್ಷ ರೈತರ ಹೊಲದಲ್ಲಿನ ಧಾನ್ಯಗಳು ಕೃಷಿ ಮಾರುಕಟ್ಟೆಗೆ ಸೇರಿದ ಬಳಿಕವೇ ಸರ್ಕಾರ ಬೆಂಬಲ ಬೆಲೆ ಘೋಷಣೆ ಮತ್ತು ಖರೀದಿ ಕೇಂದ್ರ ಆರಂಭಿಸುತ್ತಿದೆ. ಇದರಿಂದ ವ್ಯಾಪಾರಿಗಳಿಗೆ ಅನೂಕುಲವಾಗುತ್ತಿದೆ ಎಂದು ಆರೋಪಿಸಿದರು.

ಎರಡು ದಿನಗಳಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ಖರೀದಿ ಕೇಂದ್ರ ಆರಂಭಿಸುವ ಮೂಲಕ ರೈತರಿಗೆ ಸಹಕಾರ ನೀಡಲು ಮುಂದಾಗಬೇಕು. ಇಲ್ಲವಾದಲ್ಲಿ ರಸ್ತೆಗಿಳಿದು ತಾಲೂಕಿನಲ್ಲಿ ರೈತ ಸಂಘಟನೆಯಿಂದ ಉಗ್ರವಾದ ರೀತಿಯಲ್ಲಿ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಹಣಮಂತರಾವ ಬೋರಾಳ, ರಾಜಕುಮಾರ ಬಿರಾದಾರ, ವೈಜಿನಾಥ ಶೆಂಬೆಳ್ಳಿ, ಶಿವರಾಜ ಖಾನಾಪುರ, ರಾಮ ಡೋಂಗರಗಾಂವ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.