ತುಳಜಾಪುರ ಗ್ರಾಮದಲ್ಲಿ ಕುಡಿವ ನೀರಿಗಾಗಿ ನಿರಶನ
Team Udayavani, Apr 28, 2022, 1:27 PM IST
ಔರಾದ: ಸಮರ್ಪಕ ಕುಡಿವ ನೀರು ಸರಬರಾಜು ಹಾಗೂ ಗ್ರಾಮಕ್ಕೆ ಮೂಲ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಬುಧವಾರ ತಾಲೂಕಿನ ತುಳಜಾಪುರ ಗ್ರಾಮಸ್ಥರು ಎಕಲಾರ ಗ್ರಾಪಂ ಕಚೇರಿಯಲ್ಲಿ ಪಿಡಿಒಗೆ ಘೇರಾವ ಹಾಕಿ ಪ್ರತಿಭಟಿಸಿದರು.
ತುಳಜಾಪುರ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಕುಡಿಯುವ ನೀರಿಲ್ಲದೆ ಜನ ಪರದಾಡುತ್ತಿದ್ದಾರೆಂದು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದರು ಪ್ರಯೋಜನವಾಗಿಲ್ಲ. ಹೀಗಾಗಿ ಇಂದು ಕಚೇರಿಗೆ ಬಂದು ಪ್ರತಿಭಟನೆ ನಡೆಸಿ ಘೇರಾವ್ ಹಾಕಲಾಗಿದೆ ಎಂದು ಪ್ರತಿಭಟನಕಾರರು ತಿಳಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ತಾಪಂ ಸಹಾಯಕ ನಿರ್ದೇಶಕ ಸುದೇಶ ಕೊಡೆ ಭೇಟಿ ನೀಡಿ, ಗ್ರಾಮದಲ್ಲಿ ನೂತನ ಕೊಳವೆ ಬಾವಿ ಕೊರೆಯುವ ಕಾರ್ಯ ಮಾಡಲಾಗುವುದು. ಸದ್ಯ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಕುಡಿಯಲು ತೆಗೆದುಕೊಂಡು ಬನ್ನಿ. ಅದರಂತೆ ಮೂರು ಟ್ಯಾಂಕ್ ನೀರು ಸರಬರಾಜು ಮಾಡಲಾಗಿದ್ದು, ಶೀಘ್ರ ನೀರಿನ ಸಮಸ್ಯೆಗೆ ಮುಕ್ತಿ ನೀಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಚಂದ್ರಕಾಂತ ಸಿಂಧೆ, ವೀರಶಟ್ಟಿ ಸಿಂಧೆ, ಸಂತೋಷ ಕಾಂಬಳೆ, ಪ್ರತ್ವಿ, ಶಾಂತಾಬಾಯಿ, ಸರುಬಾಯಿ, ಉತ್ತಮಬಾಯಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.