ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಆಗ್ರಹ

Team Udayavani, Oct 10, 2020, 4:51 PM IST

ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಆಗ್ರಹ

ಬೀದರ: ಜಿಲ್ಲೆಯಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರುನಗರದಲ್ಲಿ ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಕರವೇ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕನ್ನಡ ಧ್ವಜ ಹಾಗೂ ಫಲಕಗಳನ್ನುಹಿಡಿದು ಘೋಷಣೆ ಕೂಗುತ್ತ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ನಗರದ ಡಿಸಿ ಕಚೇರಿಪ್ರವೇಶ ದ್ವಾರದ ಎದುರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಸೋಮನಾಥ ಮುಧೋಳ ಮಾತನಾಡಿ, ಕನ್ನಡ ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಶ್ರೇಷ್ಠ ಭಾಷೆಯಾಗಿದೆ. ಆದರೆ,ಜಿಲ್ಲೆಯಲ್ಲಿ ಕನ್ನಡಕ್ಕೆ ಅವಮಾನ ಆಗುತ್ತಿದೆ.ಖಾಸಗಿ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ದೊಡ್ಡ ದೊಡ್ಡ ಶೋರೂಂಗಳು ಜಾಹೀರಾತು ಫಲಕ ಹಾಗೂನಾಮಫಲಕಗಳನ್ನು ಪರಭಾಷೆಯಲ್ಲಿ ಅಳವಡಿಸಿ ಕನ್ನಡದ ಕಗ್ಗೊಲೆ ಮಾಡುತ್ತಿವೆ. ಗಡಿ ಜಿಲ್ಲೆಯಲ್ಲಿ ಸಂಚರಿಸುವ ಬಹಳಷ್ಟು ವಾಹನಗಳ ಫಲಕಗಳನ್ನು ಅನ್ಯ ಭಾಷೆಯಲ್ಲಿ ಬರೆಸಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ ಎಂದು ಕಿಡಿಕಾರಿದರು.

ಅ. 25ರೊಳಗೆ ಕಡ್ಡಾಯವಾಗಿ ದೊಡ್ಡದಾಗಿ ಕನ್ನಡ ನಾಮಫಲಕ ಅಳವಡಿಸುವಂತೆ ಆದೇಶ ಹೊರಡಿಸಬೇಕು. ನಾಮಫಲಕ ಅಳವಡಿಸಲು ನಿರಾಕರಿಸುವವರಿಗೆ ದಂಡ ವಿಧಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅ. 26ರ ನಂತರ ಜಿಲ್ಲೆಯಲ್ಲಿ ಇರುವ ಅನ್ಯ ಭಾಷೆಗಳ ನಾಮಫಲಕಗಳಿಗೆ ಮಸಿ ಬಳಿಯಲಾಗುವುದು ಎಂದು ಎಚ್ಚರಿಸಿದರು.

ಹೆಚ್ಚುವರಿ ಡಿಸಿ ರುದ್ರೇಶ ಗಾಳಿ ಮನವಿ ಸ್ವೀಕರಿಸಲು ಆಗಮಿಸಿದಾಗ, ಜಿಲ್ಲಾ ಧಿಕಾರಿಗಳೇ ಬಂದು ಮನವಿ ಸ್ವೀಕರಿಸಬೇಕು ಎಂದು ಪಟ್ಟುಹಿಡಿದರು. ರುದ್ರೇಶ ಗಾಳಿ ಹಾಗೂ ನಗರಸಭೆಆಯುಕ್ತರು ಮನವೊಲಿಸಿ, ಕನ್ನಡದಲ್ಲಿ ಕಡ್ಡಾಯವಾಗಿ ನಾಮಫಲಕ ಅಳವಡಿಸಲು ಆದೇಶ ಹೊರಡಿಸಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆದರು.

ವೇದಿಕೆಯ ಜಿಲ್ಲಾ ಮಹಿಳಾ ಅಧ್ಯಕ್ಷೆ ಶ್ರೀದೇವಿ ಸ್ವಾಮಿ ಪ್ರಮುಖರಾದ ಸಂತೋಷ ತೋರಣೆಕರ್‌, ಸುಧಾಕರ ರಾಠೊಡ, ವಿಶ್ವನಾಥ ಗೌಡ,ಗೋಪಾಲ ಕುಲಕರ್ಣಿ, ರಮೇಶ ಬಿರಾದಾರ, ದತ್ತಾತ್ರೇಯ ಅಲಂಕೆರೆ, ಖಾದರ್‌ ಪಾಷಾ, ಗಣೇಶ ಪಾಟೀಲ, ರಾಜಕುಮಾರ ಎಡವೆ,ವಿವೇಕ ಚಳಕಾಪುರೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.